ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಮತ್ತಿಬ್ಬರ ರಕ್ಷಣೆ

ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪವನ್​ ನಾಯ್ಕ(20) ಮೃತ ವಿದ್ಯಾರ್ಥಿ.

ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಮತ್ತಿಬ್ಬರ ರಕ್ಷಣೆ
ಮುರುಡೇಶ್ವರ ಕಡಲತೀರ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 8:05 PM

ಉತ್ತರ ಕನ್ನಡ: ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ (student) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪವನ್​ ನಾಯ್ಕ(20) ಮೃತ ವಿದ್ಯಾರ್ಥಿ. ಎಲೆಕ್ಟ್ರಾನಿಕ್ ಸಿಟಿಯಿಂದ ಮುರ್ಡೇಶ್ವರಕ್ಕೆ 6 ಸ್ನೇಹಿತರು ಬಂದಿದ್ದರು. ಪವನ್ ಸೇರಿದಂತೆ ಮೂವರು ಈಜಲು ಸಮುದ್ರಕ್ಕೆ ಇಳಿದಿದ್ದರು. ಪವನ್ ನಾಯ್ಕ ಮೃತಪಟ್ಟಿದ್ದು, ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿದ್ದರು. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೊಚ್ಚಿಹೋದ ಪ್ರವಾಸಿಗ

ಸಮುದ್ರಕ್ಕೆ ಇಳಿದಿದ್ದ ಮೂವರು ಪ್ರವಾಸಿಗರ ಪೈಕಿ ಇಬ್ಬರನ್ನು ರಕ್ಷಣೆ ಮಾಡಿದ್ದು, ಓರ್ವ ಕೊಚ್ಚಿಹೋಗಿರುವಂತಹ ಘಟನೆ ನಿನ್ನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲತೀರದಲ್ಲಿ ನಡೆದಿತ್ತು. ಕೊಚ್ಚಿಹೋದ ಸಂತೋಷ್ ಹುಲಿಗೊಂಡ(19)ಗಾಗಿ ಹುಡುಕಾಟ ನಡೆದಿದ್ದು, ಹಸನ್ ಮಜ್ಜಿಗಿ ಗೌಡರ್(21), ಸಂಜೀವ್ ಹೆಬ್ಬಳ್ಳಿ(20) ಇಬ್ಬರ ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ: Yadgir News: ಜಾನುವಾರುಗಳನ್ನು ಕದ್ದು ಸಾಗಿಸುತ್ತಿದ್ದ 8 ಆರೋಪಿಗಳ ಬಂಧನ: ಕರುಗಳು ಸೇರಿ 25 ಹಸುಗಳ ರಕ್ಷಣೆ

ಧಾರವಾಡ ಜಿಲ್ಲೆ ಕಲಘಟಗಿ ಮೂಲದ 22 ಜನರು ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದರು. ಚಂಡಮಾರುತದ ಪರಿಣಾಮ ಬೃಹತ್​ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಇಳಿಯದಂತೆ ಸೂಚನಾ ಫಲಕ ಹಾಕಿದ್ದರೂ ನಿರ್ಲಕ್ಷ್ಯ ಮಾಡಿದ್ದಾರೆ. ಕೊಚ್ಚಿಹೋದ ಸಂತೋಷ್ ಹುಲಿಗೊಂಡಗಾಗಿ ಲೈಫ್​ಗಾರ್ಡ್ಸ್​ ಶೋಧ ಮಾಡುತ್ತಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ 

ಮೈಸೂರು: ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ವಣಕನಪುರ ಗ್ರಾಮದವರಾದ ಬಾಲಕಿ ಗೀತಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು, ತೀವ್ರ ನೋವು ತಾಳಲಾರದೇ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತಾಯಿ ಕೊಂದು ಸೂಟ್​​ಕೇಸ್​​ನಲ್ಲಿ ಠಾಣೆಗೆ ಶವ ತಂದ ಮಗಳು: ಆರೋಪಿ ಹೇಳಿಕೆಗೆ ಪೊಲೀಸರೇ ಶಾಕ್

ಮೈಸೂರಿನ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಹುಣಸೂರು ತಾಲ್ಲೂಕಿನ ಕರಿ ಮಾರಮ್ಮ ದೇವಾಲಯದ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್​ಜಿ ಗೀತಾ ಎಂದು ಹಚ್ಚೆ ಗುರುತು ಇದೆ. ನೀಲಿ ಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಬಿಳಿಗೆರೆಯುಳ್ಳ ಶರ್ಟ್ ಧರಿಸಿರುವ ವ್ಯಕ್ತಿಯ ಮೃತ ದೇಹದ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:58 pm, Tue, 13 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್