ಕಾರವಾರ: ಭಟ್ಕಳ​​ದಲ್ಲಿ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜ ತೆರವು, ಗ್ರಾಮಸ್ಥರ ಪ್ರತಿಭಟನೆ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜವನ್ನು ತೆರವುಗೊಳಿಸಲಾಗಿದೆ.

ಕಾರವಾರ: ಭಟ್ಕಳ​​ದಲ್ಲಿ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜ ತೆರವು, ಗ್ರಾಮಸ್ಥರ ಪ್ರತಿಭಟನೆ
ಧ್ವಜ ತೆರವು
Follow us
| Updated By: ವಿವೇಕ ಬಿರಾದಾರ

Updated on:Jan 30, 2024 | 5:37 PM

ಕಾರವಾರ, ಜನವರಿ 30: ಮಂಡ್ಯ (Mandya) ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ (Hanuman Flag) ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ (Batakal) ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ ಸಾವರ್ಕರ್ (Savarkar) ವೃತ್ತ ಮತ್ತು ಭಗವಾಧ್ವಜವನ್ನು ತೆರವುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತೆಂಗಿನಗುಂಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಬಿಜೆಪಿ ಮುಖಂಡರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದ್ ನಾಯ್ಕ್, ಸುಬ್ರಾಯ ದೇವಾಡಿಗ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸಾವರ್ಕರ್ ನಾಮಫಲಕ ಅಳವಡಿಕೆಗೆ ಒಪ್ಪಿಗೆ ನೀಡಲಾಗಿತ್ತು. ಈಗ ಗ್ರಾಮ ಪಂಚಾಯಿತಿ ಪಿಡಿಒ ಏಕಾಏಕಿ ಜೆಸಿಬಿ ಮೂಲಕ ನಾಮಫಲಕ ತೆರವುಗೊಳಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವು ಪ್ರಕರಣ: ಗ್ರಾಮಸ್ಥರ ವಿರುದ್ಧ ಮತ್ತೆರಡು FIR ದಾಖಲು

ಯಾವ ಅಪ್ಪನ ಮನೆ ಆಸ್ತಿ ಅಂತಾ ಧ್ವಜಸ್ತಂಭ ತೆಗೆದಿದ್ದೀರಿ? ಇದೇನು ಪಾಕಿಸ್ತಾನ ಅಂತಾ ತೆಗೆದ್ರಾ? ಹಿಂದೂಗಳು ಬೇವರ್ಸಿಗಳು ಅಂತ ಅಂದುಕೊಂಡು ತೆಗೆದ್ರಾ? ಹಿಂದೂಗಳು ಸುಮ್ಮನೆ ಕುಳಿತಿಲ್ಲ, ನಿಮಗೆ ಯಾರ ಒತ್ತಡವಿದೆ ಹೇಳಿ. ಇದು ಭಟ್ಕಳ, ಯಾರದ್ದೋ ಕೈಗೊಂಬೆಯಾಗಿ ಆಟವಾಡಬೇಡಿ ಎಂದು ಬಿಜೆಪಿ ಮುಖಂಡ ಗೋವಿಂದ ನಾಯ್ಕ್ ಪಿಡಿಒಗೆ ತರಾಟೆಗೆ ತೆಗೆದುಕೊಂಡರು.

ಪೊಲೀಸರ ವಿರೋಧದ ನಡುವೆಯೂ ತೆಂಗಿನಗುಂಡಿಯಲ್ಲಿ ಧ್ವಜಕಟ್ಟೆ‌ ನಿರ್ಮಾಣ ಮಾಡಲಾಗಿದೆ. ಪೊಲೀಸರು ಹೆದರಿಸಿದರೂ ಕ್ಯಾರೇ ಎನ್ನದೇ ಮೊದಲಿಗಿಂತಲೂ ದೊಡ್ಡ ಧ್ವಜಕಟ್ಟೆಯನ್ನು ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯರು ನಿರ್ಮಿಸಿದ್ದಾರೆ. ಇದರಿಂದ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯರ ಮಧ್ಯೆ ವಾಗ್ವಾದ ಏರ್ಪಟ್ಟಿದೆ. ಅಲ್ಲದೆ ಸ್ಥಳದಲ್ಲಿದ್ದ ಪಿಡಿಒ ಅನ್ನು ಬಿಜೆಪಿ ನಾಯಕರು ಹಾಗೂ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸ್ಥಳಕ್ಕೆ ತಹಶೀಲ್ದಾರ್ ತಿಪ್ಪೇಸ್ವಾಮಿ ಭೇಟಿ ನೀಡಿದ್ದು, ಶಾಂತಿ ಕದಡದಂತೆ ಜನರಲ್ಲಿ ಮನವಿ ಮಾಡಲಾಗಿದೆ.

ರಾಜ್ಯದ ಜನ ಕಾಂಗ್ರೆಸ್​ಗೆ ದೊಡ್ಡ ಪಾಠ ಕಲಿಸುತ್ತಾರೆ: ಹೆಗಡೆ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾನೂನು ಬದ್ಧವಾಗಿ ಡಿಸಿಯಿಂದ ಅನುಮತಿ ಪಡೆದು ಧ್ವಜ ಹಾಕಿದ್ದರು. ಗ್ರಾಮ ಪಂಚಾಯಿಂದ ಠರಾವು ಆಗಿ ಕಾನೂನಾತ್ಮಕವಾಗಿಯೇ ಧ್ವಜ ಹಾರಿಸಿದ್ದಾರೆ. ರಾಜಕಾರಣಕ್ಕಾಗಿ ಈ ರೀತಿ ವಿರೋಧ ಮಾಡುವುದು ಒಳ್ಳೆಯ ಲಕ್ಷಣ ಅಲ್ಲ. ಇದೆಲ್ಲವನ್ನೂ ರಾಜ್ಯದ ಪ್ರಜ್ಞಾವಂತ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯದ ಜನ ಕಾಂಗ್ರೆಸ್​ಗೆ ದೊಡ್ಡ ಪಾಠ ಕಲಿಸಲಿದ್ದಾರೆ ಎಂದು ಕುಮಟಾದಲ್ಲಿ ಸಂಸದ ಅನಂತಕುಮಾರ್​​ ಹೆಗಡೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:34 pm, Tue, 30 January 24

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು