ಮಸೀದಿಯ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಮಸೀದಿಯೊಂದರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಮಾರಾಮಾರಿ ನಡೆದಿರುವ ಘಟನೆ ಸಿದ್ದಾಪುರ ತಾಲೂಕಿನ ಅರೇಂದೂರ ಗ್ರಾಮದಲ್ಲಿ ನಡೆದಿದೆ.

ಮಸೀದಿಯ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಎರಡು ಗಂಪುಗಳ ನಡುವೆ ಮಾರಾಮಾರಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 12, 2022 | 3:40 PM

ಉತ್ತರ ಕನ್ನಡ: ಮಸೀದಿಯೊಂದರ (Mosque) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಮಾರಾಮಾರಿ ನಡೆದಿರುವ ಘಟನೆ ಸಿದ್ದಾಪುರ (Siddapur) ತಾಲೂಕಿನ ಅರೇಂದೂರ ಗ್ರಾಮದಲ್ಲಿ ನಡೆದಿದೆ. ಅರೇಂದೂರ ಗ್ರಾಮದ ಮಸೀದಿಗೆ ಪದಾಧಿಕಾರಿಗಳನ್ನು ಆಯ್ಕೆ ಪ್ರಕ್ರಿಯೆ ವೇಳೆ ಎರಡು ಗಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಘಟನೆಯಲ್ಲಿ 3 ಮಂದಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಾಪುರ ಠಾಣೆಯಲ್ಲಿ 33 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವಸ್ಥಾನದ ರಥ ಬೀದಿಯಿಂದ ಪಶ್ಚಿಮ ದ್ವಾರದ ವರೆಗೆ ಅರೆಬರೆ ಉಡುಪು ಧರಿಸಿಸುವಂತಿಲ್ಲ

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ರಥ ಬೀದಿಯಿಂದ ಪಶ್ಚಿಮ ದ್ವಾರದ ವರೆಗೆ ಅರೆಬರೆ (ತುಂಡು ಬಟ್ಟೆ)  ಧರಿಸಿ ಸಾರ್ವಜನಿಕರು ಸಂಚರಿಸುವಂತಿಲ್ಲ ಎಂದು ದೇವಸ್ಥಾನದ ಆಡಳಿತ ಕಮಿಟಿ ಫಲಕ ಅಳವಡಿಸಿದೆ. ರಥ ಬೀದಿಯಿಂದ ಕಡಲ ತೀರ ಮತ್ತು ಇತರೆ ಸ್ಥಳಗಳಿಗೆ ಸಾರ್ವಜನಿಕರು ತೆರಳುವ ಪ್ರದೇಶದಲ್ಲಿ ಕಮಿಟಿಯವರ ಸೂಚನಾ ಫಲಕ ಅಳವಡಿಸಿದ್ದಾರೆ.

ಈ ಹಿಂದೆ ದೇವಸ್ಥಾನದ ಸಮಿತಿ ದೇವಸ್ಥಾನ ಹೊರತುಪಡಿಸಿ ಸಾರ್ವಜನಿಕ ಪ್ರದೇಶದಲ್ಲೂ ವಸ್ತ್ರ ಸಂಹಿತೆ ಜಾರಿ ಮಾಡಿತ್ತು. ಇದೀಗ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ನೇತೃತ್ವದ ಎಂಟು ಜನರಿರುವ ಸಮಿತಿ ಸಾರ್ವಜನಿಕ ಸ್ಥಳವಾದ ದೇವಸ್ಥಾನದ ರಥ ಬೀದಿಯಿಂದ ಪಶ್ಚಿಮ ದ್ವಾರದ ವರೆಗೆ ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸುವಂತಿಲ್ಲ ಎಂದು ಬ್ಯಾನರ್ ಅಳವಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Sat, 12 November 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ