ಕಾರವಾರ ತಾಲೂಕಿನಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಾರಾವಾರ ತಾಲೂಕಿನ ಚಂಡಿಯಾ, ಕೋಲ್ ಚಂಡಿಯಾ, ಇಳಸೂರು ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಮನೆ, ರಸ್ತೆ ಕೃಷಿ ಜಮೀನು ಜಲಾವೃತವಾಗಿದೆ. ಮನೆಗಳಲ್ಲಿ ಸಿಲುಕಿದ್ದ 5 ಕುಟುಂಬಗಳನ್ನು ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.

ಕಾರವಾರ ತಾಲೂಕಿನಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ  ರಕ್ಷಣೆ
ಕಾರವಾರ ತಾಲೂಕಿನಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಆಯೇಷಾ ಬಾನು

Updated on: Jul 14, 2024 | 2:17 PM

ಕಾರವಾರ, ಜುಲೈ.14: ಕಳೆದ ನಾಲ್ಕು ದಿನದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸ್ತಿದೆ (Karnataka Rain). ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ನಿತ್ಯ ಸುರಿಯುತ್ತಿರೋ ರಣ ಮಳೆ, ಕಾರಾವಾರ ಜನರನ್ನ ಹಿಂಡಿ ಹಿಪ್ಪೆ ಮಾಡಿದೆ. ಜಮೀನು, ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಾರಾವಾರ ತಾಲೂಕಿನ ಚಂಡಿಯಾ, ಕೋಲ್ ಚಂಡಿಯಾ, ಇಳಸೂರು ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಮನೆ, ರಸ್ತೆ ಕೃಷಿ ಜಮೀನು ಜಲಾವೃತವಾಗಿದೆ.

ಐಸ್‌ ಫ್ಯಾಕ್ಟರಿ ಬಳಿ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೂರಾರು ಎಕರೆ ಕೃಷಿ ಭೂಮಿ ಮುಳುಗಡೆಯಾಗಿದೆ. ಮನೆಗಳಿಗೂ ನೀರು ನುಗ್ಗಿ, ಮನೆಯಿಂದಾಚೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದ ಕಂಗಲಾಗಿರೋ ಜನರು, ನಮ್ಮ ಕಷ್ಟ ಕೇಳರೋ ಯಾರು ಇಲ್ಲ ಅಂತಾ ಆಕ್ರೋಶ ಹೊರಹಾಕ್ತಿದ್ದಾರೆ.

ಅರಗ ಗ್ರಾಮದಲ್ಲೂ ಭಾರೀ ಮಳೆಯಾಗಿದ್ದು, ಡಾಬಾಗೆ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ಹೋಗಲು ಜಾಗವಿಲ್ಲದೇ ಡಾಬಾಗೆ ನುಗ್ಗುತ್ತಿದೆ. ಇನ್ನೂ ಗೋಕರ್ಣದ ತಾರಮಕ್ಕಿ ಸರ್ಕಾರಿ ಶಾಲೆ ಬಳಿ ಗುಡ್ಡ ಕುಸಿತವಾಗಿದೆ. ರಸ್ತೆಯಲ್ಲಿ ಮಣ್ಣು ಕುಸಿತು ಸಂಚಾರ ಅಸ್ತವ್ಯಸ್ತಗೊಂಡಿದೆ.

ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಬೋಟ್ ಮೂಲಕ ರಕ್ಷಣೆ

ಇನ್ನು ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮ ವ್ಯಾಪ್ತಿಯಲ್ಲಿ ಪ್ರವಾಹದಲ್ಲಿ ಜನರು ಸಿಲುಕಿದ್ದರು. ಮನೆಗಳಲ್ಲಿ ಸಿಲುಕಿದ್ದ 5 ಕುಟುಂಬಗಳನ್ನು ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯ ಅಂದಾಜು ಗೊತ್ತಾಗದೆ ನಿವಾಸಿಗಳು ಮನೆಯಲ್ಲೇ ಉಳಿದಿದ್ರು. ಕಳೆದ 4 ದಿನಗಳ ಹಿಂದೆ ಸುರಿದ ಮಳೆಗೆ ಇಷ್ಟೊಂದು ನೀರು ಬಂದಿರಲಿಲ್ಲ. ಆದ್ರೆ ಇಂದು ಹೆಚ್ಚು ನೀರು ಬಂದಿದ್ದರಿಂದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ರಸ್ತೆಗಳು ಹಾಗೂ ಜಮೀನುಗಳು ಸಂಪೂರ್ಣವಾಗಿ ಜಲಾವೃತವಾದ ಹಿನ್ನೆಲೆ ರಸ್ತೆ ಯಾವುದು ಅಂತಾ ಗೊತ್ತಾಗದೆ ಮನೆಯಲ್ಲೇ ಕಾಲ ಕಳೆಯುವಂತಾಗಿತ್ತು. ಚಿಕ್ಕ ಚಿಕ್ಕ ಮಕ್ಕಳು, ಮಹಿಳೆಯರು ಆತಂಕದಲ್ಲೇ ಕಾಲ ಕಳೆಯುತ್ತಿದ್ದರು. ಗ್ರಾಮಸ್ಥರಿಗೆ ವಿಷಯ ತಿಳಿಯುತ್ತಿದ್ದಂತೆ ಬೋಟ್ ಮೂಲಕ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳೀಯರು ಕರೆತಂದಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತವಾಗದೆ. ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಗುಡ್ಡ ಕುಸಿತವಾಗಿದ್ದು, ಭಾರೀ ವಾಹನಗಳನ್ನ ಸಂಚಾರ ನಿಷೇಧಿಸಲಾಗಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವೆಡೆ ಧಾರಾಕಾರ ಮಳೆ ಸುರಿದ ಕಾರಣ ಕೆಲವು ಪ್ರವಾಸಿ ತಾಣಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಇದ್ರಿಂದ ರಾಜಧಾನಿ ಬೆಂಗಳೂರಿನ ಜನ ಬೆಳಂಬೆಳಗ್ಗೆ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ನುಗ್ಗಿದ್ದಾರೆ.

ಕೊಡಗಿನಲ್ಲೂ ಭಾರಿ ಮಳೆಯಾಗ್ತಿದ್ದು, ಇಂದು ಬೆಳ್ಳಂ ಬೆಳಗ್ಗೆಯೇ ವರುಣ್ಣ ಆರ್ಭಟಿಸಿದೆ. ಕೊಡಗಿನಲ್ಲಿ ಮಳೆಯಾಗ್ತಿರೋದ್ರಿಂದ ನದಿಗಳ ನೀರಿನ ಮಟ್ಟ ಗಣನೀಯವಾಗ ಏರಿಕೆಯಾಗಿದೆ. ಅತ್ತ ಕೇರಳದಲ್ಲೂ ಭರ್ಜರಿ ಮಳೆಯಾಗ್ತಿರೋದ್ರಿಂದ ಕಬಿನಿ ಜಲಾಶಯ ಭರ್ತಿಯಾಗಿದೆ. ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರೋ ಕಬಿನ ಜಲಾಶಯದಿಂದ ಕಪಿಲಾ ನದಿಗೆ 20 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಗ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ