ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ
ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಉತ್ತರ ಕನ್ನಡ: ಇಂದು (ಅಕ್ಟೋಬರ್ 13) ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ.
ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮನೆಯೊಳಗಿದ್ದ ಗ್ಯಾಸ್ ಸಿಲಿಂಡರ್ ತಡರಾತ್ರಿ ವೇಳೆ ಸ್ಫೋಟ; ನಿದ್ರೆಯಲ್ಲಿದ್ದ ದಂಪತಿ ದುರ್ಮರಣ
Mysuru Road Accident: ಕಾರಿನ ಟೈರ್ಗಳು ಸ್ಫೋಟ! ತಾಯಿ-ಮಗ ಸಾವು
Published On - 7:17 am, Wed, 13 October 21