ಗೋಕರ್ಣ ಆತ್ಮಲಿಂಗ ದರ್ಶನ; ಭಕ್ತರಿಗೆ ಅಡ್ಡಿಪಡಿಸದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಸೂಚನೆ

Gokarna Mahabaleshwar Temple: ಆಡಳಿತ ಮಂಡಳಿ ಹಾಗೂ ಉಪಾಧಿವಂತರ ನಡುವಿನ ಗಲಾಟೆಯಿಂದಾಗಿ ಆತ್ಮಲಿಂಗ ದರ್ಶನಕ್ಕೆ ಭಕ್ತರಿಗೆ ಎದುರಾಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ. ಆತ್ಮಲಿಂಗ ದರ್ಶನಕ್ಕೆಂದೇ ದೂರದೂರುಗಳಿಂದ ಆಗಮಿಸುತ್ತಿದ್ದ ಭಕ್ತರಿಗೆ ಇದು ಸಂತಸ ಮೂಡಿಸಿದ್ದಂತೂ ಸತ್ಯ.

ಗೋಕರ್ಣ ಆತ್ಮಲಿಂಗ ದರ್ಶನ; ಭಕ್ತರಿಗೆ ಅಡ್ಡಿಪಡಿಸದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಸೂಚನೆ
ಗೋಕರ್ಣ ಮಹಾಬಲೇಶ್ವರ ದೇವಾಲಯ
Follow us
TV9 Web
| Updated By: guruganesh bhat

Updated on: Oct 11, 2021 | 3:27 PM

ಗೋಕರ್ಣ: ದಕ್ಷಿಣ ಕಾಶಿ ಖ್ಯಾತಿಯ ಗೋಕರ್ಣ ದೇವಾಲಯ ಸದ್ಯ ಸರ್ಕಾರದ ಹಿಡಿತದಲ್ಲಿದೆ. ದೇವಸ್ಥಾನ ನಿರ್ವಹಣೆ ಮಾಡುವದುಕ್ಕೋಸ್ಕರ ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚನೆ ಮಾಡಿದೆ. ಆದರೆ ಕೆಲ ದಿನಗಳ ಹಿಂದೆ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರವಾಗಿ ಉಪಾಧಿವಂತರು ಹಾಗೂ ದೇವಸ್ಥಾನದ ಸಮಿತಿಯ ಸದಸ್ಯರ ನಡುವೆ ಗಲಾಟೆ ಉಂಟಾಗಿ ಇದರಿಂದ ಭಕ್ತರಿಗೆ ಆತ್ಮಲಿಂಗ ದರ್ಶನಕ್ಕೆ ಅವಕಾಶ ಇಲ್ಲದಂತಾಗಿತ್ತು. ಇದೀಗ ಉತ್ತರ ಕನ್ನಡ ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಆತ್ಮಲಿಂಗ ಪೂಜೆ ವಿಚಾರವಾಗಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಕರ್ನಾಟಕದಲ್ಲಿಯೇ ಶಿವನ ಆತ್ಮಲಿಂಗವಿರುವ ಏಕೈಕ ದೇವಸ್ಥಾನ ಇರುವುದು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದಲ್ಲಿ. ಹೀಗಾಗಿ ರಾಜ್ಯ, ಹೊರರಾಜ್ಯವಷ್ಟೇ ಅಲ್ಲದೇ ದೇಶ ವಿದೇಶಗಳ ಪ್ರವಾಸಿಗರೂ ಸಹ ಮಹಾಬಲೇಶ್ವರನ ದರ್ಶನ ಪಡೆಯಲು ಗೋಕರ್ಣಕ್ಕೆ ಆಗಮಿಸುತ್ತಾರೆ. ಈ ಹಿಂದೆ 2007ರಿಂದ ಶ್ರೀ ರಾಮಚಂದ್ರಾಪುರ ಮಠದ ಆಡಳಿತದಲ್ಲಿದ್ದ ಮಹಾಬಲೇಶ್ವರ ದೇವಸ್ಥಾನವನ್ನು 2021ರ ಮೇ ತಿಂಗಳಿನಲ್ಲಿ ಸುಪ್ರೀಂಕೋರ್ಟ್ ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. ಅಲ್ಲದೇ ದೇವಸ್ಥಾನದ ಆಡಳಿತ ನಿರ್ವಹಣೆಗೆ ಅರ್ಚಕರು ಸೇರಿದಂತೆ ಸಮಿತಿಯೊಂದನ್ನು ರಚನೆ ಮಾಡಿತ್ತು. ಆದರೆ ಕಳೆದ ತಿಂಗಳು ಪೂಜೆ ಸಲ್ಲಿಕೆ ವಿಚಾರವಾಗಿ ಸುಪ್ರೀಂ ಆದೇಶದಿಂದ ಗೊಂದಲ ಉಂಟಾಗಿತ್ತು. ಅನಾದಿ ಕಾಲದಿಂದ ಮಹಾಬಲೇಶ್ವರನಿಗೆ ಪೂಜೆ ಮಾಡಿಕೊಂಡು ಬಂದಿರುವ ಉಪಾಧಿವಂತರು ಹಾಗೂ ಸಮಿತಿಯ ಸದಸ್ಯರ ನಡುವೆ ಗಲಾಟೆ ಉಂಟಾಗಿತ್ತು. ಪರಿಣಾಮ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಭಕ್ತರೂ ಸೇರಿದಂತೆ ಯಾರಿಗೂ ಅವಕಾಶ ನೀಡದಂತೆ ಸಮಿತಿ ಸೂಚನೆ ನೀಡಿದ್ದು ಇದು ವಿವಾದಕ್ಕೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಸಮಿತಿಯ ಸದಸ್ಯರು ಹಾಗೂ ಉಪಾಧಿವಂತರೊಂದಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಭೆಯನ್ನು ಕೈಗೊಂಡಿದ್ದು ಸುಪ್ರೀಂ ಆದೇಶದ ಕುರಿತು ಮಾಹಿತಿ ನೀಡಿದ್ದಾರೆ. ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯು ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದಾಗಿದ್ದು ಸರ್ಕಾರದ ಆದೇಶದಂತೆ ಭಕ್ತರಿಗೆ ದರ್ಶನಕ್ಕೆ ಸೂಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾತ್ರ ನಿರ್ಧಾರಗಳನ್ನ ಕೈಗೊಳ್ಳಬಹುದಾಗಿದೆ. ಅದನ್ನು ಹೊರತುಪಡಿಸಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರವಾಗಿ ಯಾವುದೇ ನಿರ್ಭಂದ ಹೇರಲು ಅಧಿಕಾರ ಇಲ್ಲ ಎಂದು ತಿಳಿಸಿದ್ದಾರೆ.

ಇದೇ ವರ್ಷ ಮೇ ತಿಂಗಳಲ್ಲಿ ಮಹಾಬಲೇಶ್ವರ ದೇವಸ್ಥಾನದ ಆಡಳಿತ ವಹಿಸಿಕೊಂಡಿದ್ದ ಸುಪ್ರೀಂಕೋರ್ಟ್ ಈ ಹಿಂದೆ ರಾಮಚಂದ್ರಾಪುರ ಮಠದ ಆಡಳಿತದ ಪೂರ್ವದಲ್ಲಿ 2007ರಲ್ಲಿ ಜಾರಿಯಲ್ಲಿದ್ದ ಪೂಜಾ ವಿಧಾನಗಳನ್ನೇ ಅನುಸರಿಸುವಂತೆ ಸೂಚನೆ ನೀಡಿತ್ತು. ಅಲ್ಲದೇ ದೇವಸ್ಥಾನದ ಆಡಳಿತ ನಿರ್ವಹಣೆಗೆ ಉಪವಿಭಾಗಾಧಿಕಾರಿ ನೇತೃತ್ವದ ಸಮಿತಿಯೊಂದನ್ನು ರಚನೆ ಮಾಡಿತ್ತು. ಇನ್ನು ಈ ಹಿಂದಿನಿಂದ ಅನುವಂಶೀಯವಾಗಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸುತ್ತಿದ್ದ ಉಪಾಧಿವಂತರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ ವೇಳೆ ಸಮಿತಿಯ ಸದಸ್ಯರು ಅವಕಾಶ ನೀಡಲು ನಿರಾಕರಿಸಿದ್ದರಿಂದಾಗಿ ಮತ್ತೆ ಗಲಾಟೆ ಉಂಟಾಗುವಂತಾಗಿತ್ತು. ಸದ್ಯ ಭಕ್ತರ ದರ್ಶನಕ್ಕೆ ಯಾವುದೇ ಅಡ್ಡಿಪಡಿಸದಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ. ವೈಯಕ್ತಿಕ ಪೂಜೆ ಸಲ್ಲಿಕೆ ಅಥವಾ ನಿರಾಕರಣೆ ವಿಚಾರವಾಗಿ ಸುಪ್ರೀಂಕೋರ್ಟ್‌ನಿಂದ ಪ್ರತ್ಯೇಕ ಆದೇಶ ತಂದಲ್ಲಿ ಈ ಸಂಬಂಧ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಇನ್ನು ಭಕ್ತರಿಗೆ ಆತ್ಮಲಿಂಗ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಕ್ಕೆ ದೇವಸ್ಥಾನ ಸಮಿತಿ ಸಂತಸ ವ್ಯಕ್ತಪಡಿಸಿದೆ.

ಒಟ್ಟಾರೆ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಉಪಾಧಿವಂತರ ನಡುವಿನ ಗಲಾಟೆಯಿಂದಾಗಿ ಆತ್ಮಲಿಂಗ ದರ್ಶನಕ್ಕೆ ಭಕ್ತರಿಗೆ ಎದುರಾಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ. ಆತ್ಮಲಿಂಗ ದರ್ಶನಕ್ಕೆಂದೇ ದೂರದೂರುಗಳಿಂದ ಆಗಮಿಸುತ್ತಿದ್ದ ಭಕ್ತರಿಗೆ ಇದು ಸಂತಸ ಮೂಡಿಸಿದ್ದಂತೂ ಸತ್ಯ.

ವರದಿ: ಮಂಜುನಾಥ್ ಪಟಗಾರ್ ಟಿವಿ9 ಕಾರವಾರ

ಇದನ್ನೂ ಓದಿ: 

ರಾಮಚಂದ್ರಾಪುರ ಮಠದಿಂದ ಕೈ ಜಾರಿದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ; ದೇಗುಲವನ್ನು ಮುಜರಾಯಿ ಇಲಾಖೆಗೆ ಹಿಂದಿರುಗಿಸಲು ಸುಪ್ರೀಂ ಆದೇಶ

Yediyur Siddhalingeshwara: 15ನೇ ಶತಮಾನದ ಎಡೆಯೂರು ಸಿದ್ಧಲಿಂಗೇಶ್ವರ ದೇಗುಲದ ಕ್ಷೇತ್ರ ಮಹಿಮೆ ತಿಳಿಯೋಣ ಬನ್ನೀ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್