ಶಿರೂರು ದುರಂತ ಬಿಟ್ಟು ವಯನಾಡಿನ ದುರಂತಕ್ಕೆ ಸರ್ಕಾರ ಹೆಚ್ಚು ಸ್ಪಂದಿಸುತ್ತಿದೆ -ಪ್ರಣವಾನಂದ ಸ್ವಾಮಿ ಆಕ್ರೋಶ

ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರಿಗೆ ಕೇವಲ 1 ಲಕ್ಷದ 20 ಸಾವಿರ ಹಣ ಮಾತ್ರ ಕೊಡಲಾಗುತ್ತಿದೆ. ಆದರೆ ವಯನಾಡಿನಲ್ಲಿ 100 ಮನೆಗಳನ್ನು ಕಟ್ಟಿಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಹುಲ್ ಗಾಂಧಿಯ ಓಲೈಕೆ ಮಾಡಲು ಮನೆ ಕಟ್ಟಿಕೊಡಲು ಮುಂದಾಗಿದೆ ಎಂದು ಪ್ರಣವಾನಂದ ಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಶಿರೂರು ದುರಂತ ಬಿಟ್ಟು ವಯನಾಡಿನ ದುರಂತಕ್ಕೆ ಸರ್ಕಾರ ಹೆಚ್ಚು ಸ್ಪಂದಿಸುತ್ತಿದೆ -ಪ್ರಣವಾನಂದ ಸ್ವಾಮಿ ಆಕ್ರೋಶ
ಪ್ರಣವಾನಂದ ಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on: Aug 14, 2024 | 1:07 PM

ಕಾರವಾರ, ಆಗಸ್ಟ್​.14: ವಯನಾಡಿನಲ್ಲಿ 100 ಮನೆಗಳನ್ನು ಕಟ್ಟಿಕೊಡಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಆದರೆ ಶಿರೂರು ದುರಂತದಿಂದ ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾರವಾರದಲ್ಲಿ ಪ್ರಣವಾನಂದ ಸ್ವಾಮಿ (Pranavananda Swamiji) ಆಕ್ರೋಶ ಹೊರ ಹಾಕಿದ್ದಾರೆ.

ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರಿಗೆ ಕೇವಲ 1 ಲಕ್ಷದ 20 ಸಾವಿರ ಹಣ ಮಾತ್ರ ಕೊಡಲಾಗುತ್ತಿದೆ. ವಯನಾಡು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕ್ಷೇತ್ರ. ರಾಹುಲ್ ಗಾಂಧಿಯ ಓಲೈಕೆ ಮಾಡಲು ಮನೆ ಕಟ್ಟಿಕೊಡಲು ಮುಂದಾಗಿದೆ. ಆದ್ರೆ ರಾಜ್ಯದ ಜನರಿಗೆ ಮಾತ್ರ 1 ಲಕ್ಷ 20 ಸಾವಿರ ಪರಿಹಾರ ಕೊಡ್ತಾರೆ. ಬೇರೆ ರಾಜ್ಯದ ಜನ ಸಮಸ್ಯೆಯಲ್ಲಿದ್ದಾಗ ಪರಿಹಾರ ಕೊಡುವುದು ತಪ್ಪಲ್ಲ. ಆದರೆ ತಮ್ಮ ಪಕ್ಷದ ನಾಯಕನ ಮುಖ ನೋಡಿ ಪರಿಹಾರ ಕೊಡುವ ಇವರಿಗೆ ನಮ್ಮ ರಾಜ್ಯದ ಜನ ಬೀದಿ ಪಾಲಾಗಿರುವುದು ಕಣ್ಣಿಗೆ ಕಾಣುವುದಿಲ್ಲವೆ? ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರಿಗೆ ಯಾಕೆ ಮನೆ ಕಟ್ಟಿ ಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಪ್ರಣವಾನಂದ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್​ನಲ್ಲಿ ಕೇವಲ ಅರ್ಹರಿಗೆ ಮಾತ್ರ ಹೊಸ ಬಿಪಿಎಲ್ ಕಾರ್ಡ್​ಗಳ ವಿತರಣೆ: ಕೆ ಹೆಚ್ ಮುನಿಯಪ್ಪ

ಇನ್ನು ಇದೇ ವೇಳೆ ರಾಜ್ಯದ ಉಭಯ ಪಕ್ಷಗಳ ವಿರುದ್ದ ಸ್ವಾಮೀಜಿ ಹರಿಹಾಯ್ದಿದ್ದಾರೆ. ತಮ್ಮ ತಮ್ಮ ರಾಜಕೀಯ ಲಾಭ ಪಡೆದುಕೊಳ್ಳುವಲ್ಲಿ ಬಿಜಿ ಆಗಿದ್ದಾರೆ. ತಾವು ಕಬಳಿಸಿದ ಆಸ್ತಿಯ ಸುರಕ್ಷತೆಗಾಗಿ ಹೋರಾಟ ಮಾಡುತ್ತಿದ್ದಾರೆ. ಆದ್ರೆ ಶಿರೂರು ದುರಂತದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸಿಲ್ಲ. ಅಧಿವೇಶನದ ಉದ್ದಕ್ಕೂ ಆರೋಪ ಪ್ರತ್ಯಾರೋಪ ಆಯ್ತು. ಆದ್ರೆ ಒಂದೇ ಒಂದು ಬಾರಿಯೂ ಶಿರೂರು ಬಗ್ಗೆ ವಿಶೇಷ ಚರ್ಚೆ ಆಗಲಿಲ್ಲ. ಶಿರೂರು ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸುವ ಕೆಲಸವು ಆಗಲಿಲ್ಲ. ರಾಜ್ಯ ಸರ್ಕಾರ ತಮ್ಮ ಜವಾಬ್ದಾರಿಯನ್ನು ಮರೆತು ಕೆಲಸ ಮಾಡುತ್ತಿದೆ. ವಿಪಕ್ಷಗಳು ಸಹಿತ ಶಿರೂರು ದುರಂತದ ಬಗ್ಗೆ ಧ್ವನಿ ಎತ್ತಲಿಲ್ಲ. ರಾಜ್ಯದ ಜನಪ್ರತಿನಿಧಿಗಳ ನಡೆ ನೋಡಿ ಅಸಹ್ಯ ಆಗುತ್ತದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ