Sirsi News: ಅರಣ್ಯವಾಸಿಗಳ ಒಕ್ಕಲೆಬ್ಬಿಸುವ ಚಿಂತನೆ ಇಲ್ಲ; ಶಿರಸಿಯಲ್ಲಿ ಸಿಎಂ ಬೊಮ್ಮಾಯಿ ಭರವಸೆ

ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳು ಭಯಪಡುವ ಅಗತ್ಯವಿಲ್ಲ. ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂಬ ಮನವಿಯನ್ನು ಸರ್ಕಾರವು ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Sirsi News: ಅರಣ್ಯವಾಸಿಗಳ ಒಕ್ಕಲೆಬ್ಬಿಸುವ ಚಿಂತನೆ ಇಲ್ಲ; ಶಿರಸಿಯಲ್ಲಿ ಸಿಎಂ ಬೊಮ್ಮಾಯಿ ಭರವಸೆ
ಸಿಎಂ ಬಸವರಾಜ ಬೊಮ್ಮಾಯಿImage Credit source: deccanherald.com
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 15, 2023 | 2:38 PM

ಕಾರವಾರ: ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ (Environment University) ಸ್ಥಾಪನೆಗೆ ನಿರ್ಧರಿಸಿದ್ದೇವೆ. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು. ಈ ಬಜೆಟ್​​ನಲ್ಲಿ ಅನುದಾನ ಮೀಸಲಿಟ್ಟು ಪರಿಸರ ವಿವಿ ಸ್ಥಾಪಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. ಶಿರಸಿಯಲ್ಲಿ ನಡೆಯಲಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ನಗರಕ್ಕೆ ಆಗಮಿಸಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳು ಭಯಪಡುವ ಅಗತ್ಯವಿಲ್ಲ. ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂಬ ಮನವಿಯನ್ನು ಸರ್ಕಾರವು ಪರಿಶೀಲಿಸಲಿದೆ. ಕಾಡಿನ ಮಕ್ಕಳ ಜೀವನಕ್ಕೆ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇದೆ. ಈ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಆಗಬೇಕಿದೆ. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅಡಿಗಲ್ಲು ಹಾಕುತ್ತೇವೆ. ನಾವೇ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟನೆ ಮಾಡುತ್ತೇವೆ ಎಂದು ನುಡಿದರು. ನಾಡಿನ ಸಮಸ್ತ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಶಿರಸಿ ಮಾರಿಕಾಂಬಾ ದೇವಿಯ ಆರ್ಶೀವಾದ ನಾಡಿನ ಜನತೆಯ ಮೇಲಿರಲಿ. ₹ 250 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿರಸಿಯಲ್ಲಿಂದು ಚಾಲನೆ ನೀಡಲಿದ್ದೇನೆ. ಆಸ್ಪತ್ರೆ, ಸಣ್ಣ ನೀರಾವರಿ ಯೋಜನೆ, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಿದರು.

ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡುವಾಗ ಒಂದೇ ತಲೆಮಾರಿನವರನ್ನು ಪರಿಗಣಿಸಬೇಕು ಎಂಬ ಬೇಡಿಕೆಯಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಅರಣ್ಯವಾಸಿಗಳನ್ನ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ಅರಣ್ಯ ಮಕ್ಕಳ ಜೀವನಕ್ಕೆ ಯಾವುದೇ ತೊಂದರೆ ಮಾಡುವುದಿಲ್ಲ ಎಂದರು. ಕೇಂದ್ರ ನಾಯಕರು ಸಮ್ಮತಿ ಸೂಚಿಸಿದ ತಕ್ಷಣ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಮಹದಾಯಿ ಕಾಮಗಾರಿಯನ್ನು ಕಾನೂನು ಬದ್ದವಾಗಿಯೇ ಮಾಡುತ್ತಿದ್ದೇವೆ ಎಂದು ವಿವರಿಸಿದರು.

ನಿಗಮ ಮಂಡಳಿಗೆ ನೇಮಕ

ನಿಗಮ ಮಂಡಳಿಗಳ ನೇಮಕಾತಿ ಬಗ್ಗೆ ಉತ್ತರಿಸಿ, ಕೆಲವರ ಅವಧಿ ಮುಗಿದಿದೆ ಕೆಲವರದ್ದು ಮುಗಿದಿಲ್ಲ. ಪರಿಶೀಲನೆ ಮಾಡಿ ಅಧ್ಯಕ್ಷರು ಮತ್ತು ಸದಸ್ಯ ನೇಮಕ ಮಾಡಲಾಗುವುದು ಎಂದರು.

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಮಕೃಷ್ಣ ಹೆಗಡೆಯವರ ಪೀಠ

ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ರಾಮಕೃಷ್ಣ ಹೆಗಡೆಯವರ ಅಧ್ಯಯನ ಪೀಠ ಪ್ರಾರಂಭಿಸುವ ಪ್ರಸ್ತಾಪವಿತ್ತು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಗ್ರಾಮೀಣಾಭಿವೃದ್ಧಿ ವಿಶ್ವ ವಿದ್ಯಾಲಯದಲ್ಲಿ ಅಧಿಕಾರ ವಿಕೇಂದ್ರೀಕರಣದ ಅಧ್ಯಯನ ನಡೆಯುತ್ತಿದೆ. ರಾಮಕೃಷ್ಣ ಹೆಗಡೆ ಯವರದ್ದು ಬಹುಆಯಾಮವುಳ್ಳ ವ್ಯಕ್ತಿತ್ವ.60 ರ ದಶಕದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿ ಅಧಿಕಾರ ವಿಕೇಂದ್ರೀಕರಣ ತರಲು ದೊಡ್ಡ ಪ್ರಭಾವ ಬೀರಿದವರು. ನೆಹರು ಅವರ ಸಂಪುಟದಲ್ಲಿ ಡಿ.ಪಿ.ಧರ್ ಅವರ ಪ್ರಭಾವದಿಂದ ಅಧಿಕಾರ ವಿಕೇಂದ್ರೀಕರಣ ಕಾಯ್ದೆಯನ್ನು ತಂದರು ಈ ರಾಜ್ಯಕ್ಕೆ ಯೋಜನಾ ಮಂಡಳಿ, ಲೋಕಾಯುಕ್ತ ತಂದವರು ಅವರು ಯಾವ ವಿಷಯದ ಮೇಲೇ ಆಗಬೇಕೆಂದು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪೀಠ ಸ್ಥಾಪಿಸಲಾಗುವುದು ಎಂದರು.

ಕಳಚೆ ಕ್ಷೇತ್ರ ರಕ್ಷಣೆಗೆ ಅನುದಾನ

ಈ ಭಾಗ ಅರಣ್ಯ ಪ್ರದೇಶದಿಂದ ಕೂಡಿದೆ. ಶಿರಸಿ, ಎಲ್ಲಾಪುರ, ಮುಡಗೋಡ, ಹಲಿಯಾಳ ಘಟ್ಟದ ಮೇಲೆ ಹಾಗೂ ಕೆಳಗಿನ ಪ್ರದೇಶ ದಟ್ಟವಾದ ಅರಣ್ಯ ಪ್ರದೇಶ. ವೈವಿಧ್ಯಮಯ ಜೀವಸಂಕುಲವಿದೆ. ನಿಸರ್ಗದತ್ತವಾದ ಕ್ಷೇತ್ರವಾಗಿದ್ದು, ಇನ್ನಷ್ಟು ವ್ಯವಸ್ಥಿತವಾದ, ಯೋಜನಾಬದ್ಧ ಬೆಳವಣಿಗೆ ಅಗತ್ಯ ವಿದೆ. ಹಸಿರು ಪದರ, ಕಾಡು ಬೆಳೆಸುವುದು, ಪರಿಸರ ಸಮತೋಲನವನ್ನು ಮಾಡಬೇಕಿದೆ. 2022- 23 ರಲ್ಲಿ ಹಸಿರು ಬಜೆಟ್ ರೂಪಿಸಲಾಗಿದ್ದು, ಸಂಪೂರ್ಣವಾಗಿ ಯೋಜನೆಗಳು ಈ ಜಿಲ್ಲೆಯಲ್ಲಿ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಗುಣಮಟ್ಟದ ಕೆಲಸಗಳು ಆಗುತ್ತವೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು. ಕಳಚೆ ಕ್ಷೇತ್ರದ ರಕ್ಷಣೆ ಮಾಡಲು ಪರಿಸರ ಬಜೆಟ್ ನಲ್ಲಿ ಅನುದಾನ ನೀಡಲಾಗಿದೆ. ಅಲ್ಲಿ ನಷ್ಟವಾಗಿರುವ ಅರಣ್ಯವನ್ನು ಸರಿದೂಗಿಸಲು ಯೋಜನೆಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ. ಅಲ್ಲೋ ಪುನರ್ವಸತಿ ಬಗ್ಗೆ ಚರ್ಚೆಯಾಗಿದ್ದು, ಕೆಲವರು ಸ್ಥಳಾಂತರಗೊಳ್ಳಲು ಒಪ್ಪಿದ್ದು, ಕೆಲವರು ಒಪ್ಪಿಲ್ಲ. ಸಮಗ್ರವಾದ ಪುನರ್ವಸತಿಗೆ ಯೋಜನೆ ರೂಪಿಸಲು ಅನುದಾನ ಒಡಗಿಸಿದ್ದು, ಇನ್ನಷ್ಟು ಅನುದಾನ ಕೋರಿದ್ದು, ಅನುದಾನವನ್ನು ಒದಗಿಸಲು ಸಿದ್ಧನಿದ್ದೇನೆ ಎಂದರು.

ಇದನ್ನೂ ಓದಿ: ಹಿಂದುಳಿದ ವರ್ಗಗಳ ಆಯೋಗದ ವರದಿ ಬಳಿಕ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಸಿಎಂ ಬೊಮ್ಮಾಯಿ ಭರವಸೆ

ಉತ್ತರ ಕನ್ನಡ ಜಿಲ್ಲೆಯ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:30 pm, Sun, 15 January 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ