Breaking News: ಉತ್ತರ ಕನ್ನಡದಲ್ಲಿ ಸೂಪರ್​​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದ ತಾತ್ವಿಕ ಒಪ್ಪಿಗೆ

ಆರೋಗ್ಯ ಸಚಿವರ ಸಮಕ್ಷಮ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಪ್ರಕಟಿಸಲಾಗಿದೆ.

Breaking News: ಉತ್ತರ ಕನ್ನಡದಲ್ಲಿ ಸೂಪರ್​​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದ ತಾತ್ವಿಕ ಒಪ್ಪಿಗೆ
ಆರೋಗ್ಯ ಸಚಿವ ಕೆ ಸುಧಾಕರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 20, 2022 | 11:19 AM

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ತಾತ್ವಿಕ ಒಪ್ಪಿಗೆ ನೀಡಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ (Uttara Kannada District) ಎಲ್ಲ ಶಾಸಕರೂ ಒಗ್ಗೂಡಿ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಆರೋಗ್ಯ ಸಚಿವರ ಸಮಕ್ಷಮ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಪ್ರಕಟಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಭೇಟಿ ನೀಡಲಿದ್ದಾರೆ. ಜಿಲ್ಲೆಯ ಯಾವ ಭಾಗದಲ್ಲಿ ಆಸ್ಪತ್ರೆ ನಿರ್ಮಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂಬುದನ್ನು ಪರಿಶೀಲಸಿದ ನಂತರ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿಲಾಯಿತು.

ಸದ್ಯದ ಮಟ್ಟಿಗೆ ಕಾರವಾರದಲ್ಲಿ ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಕುಮುಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಚಿಂತನೆ ನಡೆದಿದೆ ಎಂದು ಸಚಿವ ಸುಧಾಕರ್ ತಮ್ಮನ್ನು ಭೇಟಿ ಮಾಡಿದ ಶಾಸಕರಿಗೆ ತಿಳಿಸಿದರು. ಸಚಿವರ ಉತ್ತರದ ನಂತರ ಶಾಸಕರು ಸಮಾಧಾನಗೊಂಡರು.

ಕ್ರಿಮ್ಸ್​ ಪ್ರಸ್ತಾವ ತಿರಸ್ಕಾರ

ಕಾರವಾರ ವೈದ್ಯಕೀಯ ಸಂಸ್ಥೆ (ಉತ್ತರ ಕನ್ನಡ ಜಿಲ್ಲಾಸ್ಪತ್ರೆ) ಕಳಿಸಿದ್ದ ಪ್ರಸ್ತಾವವನ್ನು ತಿರಸ್ಕರಿಸುವ ಮೂಲಕ ಈ ಮೊದಲು ಸರ್ಕಾರವು ಜನರ ಕೇಳುತ್ತಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ (Super Speciality Hospital) ಕನಸಿಗೆ ಸರ್ಕಾರ ತಣ್ಣೀರೆರಚಿತ್ತು. ಪ್ರಸ್ತಾವವನ್ನು ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು ತಿರಸ್ಕರಿಸಿತ್ತು. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯನ್ನು ನಿರ್ಲಕ್ಷಿಸಿರುವ ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿತ್ತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಂಡಿದ್ದವು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನಿಂದ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಕಳಿಸಲಾಗಿತ್ತು. ಈ ಪ್ರಸ್ತಾವವನ್ನೇ ಆರ್ಥಿಕ ಇಲಾಖೆಯು ತಿರಸ್ಕರಿಸಿರುವುದು ವಿಧಾನಸಭೆ ಅಧಿವೇಶನದಲ್ಲಿ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಬೇಡಿಕೆ ಕುರಿತಂತೆ ಅಧಿವೇಶನದಲ್ಲಿ ಕಾರವಾರ ಶಾಸಕಿ ರೂಪಾಲಿ ನಾಯ್ಕ ಅವರು ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದರು.

ಉತ್ತರ ಕನ್ನಡ ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವುದರಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆಯೇ ಎಂಬ ಪ್ರಶ್ನೆಗೆ ಆರೋಗ್ಯ ಸಚಿವ ಡಾ ಸುಧಾಕರ್ ಪ್ರತಿಕ್ರಿಯೆ ನೀಡಿ, ಕಾರವಾರದ ಕ್ರಿಮ್ಸ್ ನಿರ್ದೇಶಕರು ಸಲ್ಲಿಸಲಾದ ಪ್ರಸ್ತಾವವನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಮತ್ತೊಮ್ಮೆ ಪ್ರಸ್ತಾವ ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹೋರಾಟ ಹೆಚ್ಚಾದಾಗ ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದರು. ಉತ್ತರ ಕನ್ನಡಕ್ಕೇ ಬಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈವರೆಗೆ ಮುಖ್ಯಮಂತ್ರಿ ಜಿಲ್ಲೆಯತ್ತ ಕಾಲಿಟ್ಟಿಲ್ಲ. ಈ ನಡುವೆ ಜಿಲ್ಲಾಸ್ಪತ್ರೆ ಕಳುಹಿಸಿದ್ದ ಪ್ರಸ್ತಾವನೆಯನ್ನೂ ಅವರದೇ ಅಧೀನದಲ್ಲಿರುವ ಆರ್ಥಿಕ ಇಲಾಖೆಯು ತಿರಸ್ಕರಿಸಿದೆ. ಈ ಎಲ್ಲ ಅಂಶಗಳೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಉತ್ತರ ಕನ್ನಡ ಜಿಲ್ಲೆಯವರೇ ಆದ ವಿಧಾನಸಭಾಧ್ಯಕ್ಷರು, ನಾಲ್ವರು ಬಿಜೆಪಿ ಶಾಸಕರು, ಓರ್ವ ಕಾಂಗ್ರೆಸ್ ಶಾಸಕ, ಓರ್ವ ಬಿಜೆಪಿ ಸಚಿವರು ಅಧಿವೇಶನದಲ್ಲಿದ್ದರೂ ಉತ್ತರ ಕನ್ನಡದ ಅಗತ್ಯವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಚಕಾರವೆತ್ತಿಲ್ಲ. ಕಾರವಾರ ಶಾಸಕಿ ರೂಪಾಲಿ ನಾಯ್ಕ ಮಾತನಾಡಲು ಮುಂದಾದರೂ ಕೂಡ ಶಿರಸಿ ಶಾಸಕ ಕಾಗೇರಿಯವರು ವಿಧಾನಸಭಾಧ್ಯಕ್ಷ ಸ್ಥಾನದ ಅಧಿಕಾರದ ಮೂಲಕ ಅವರಿಗೆ ಸಮಸ್ಯೆಯ ಬಗ್ಗೆ ಧ್ವನಿ ಎತ್ತಲು ಬಿಟ್ಟಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸ್ವತಃ ಈ ಬಗ್ಗೆ ಗಮನ ಹರಿಸಬೇಕು. ಇಲ್ಲದಿದ್ದರೆ ಉತ್ತರ ಕನ್ನಡದ ಜನರು ಮತ್ತೆ ಪ್ರತಿಭಟನೆ ಆರಂಭಿಸುತ್ತಾರೆ ಎಂದು ಜನಶಕ್ತಿ ವೇದಿಕೆಯ ಹೋರಾಟಗಾರ ಮಾಧವ ನಾಯ್ಕ ಹಾಗೂ ಸ್ಥಳೀಯರಾದ ಸಂತೋಷ ನಾಯ್ಕ ಹೇಳಿದರು.

ಭಟ್ಕಳದ ಶಿರೂರು ಟೋಲ್​ ಬಳಿ ಸಂಭವಿಸಿದ ಅಪಘಾತದಲ್ಲಿ ಆ್ಯಂಬುಲೆನ್ಸ್​ ಉರುಳಿ ನಾಲ್ವರು ಮೃತಪಟ್ಟಿದ್ದರು. ಈ ಘಟನೆಯ ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕೂಗು ಹೆಚ್ಚಾಗಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಭಟ್ಕಳಕ್ಕೆ ಬಂದಾಗಲೂ ಸೂಪರ್ ಸ್ಪೆಷಾಲಿಟಿ ಆ್ಪಸ್ಪತ್ರೆಯ ವಿಚಾರ ಪ್ರಸ್ತಾಪಿಸಿದ್ದರು. ಆದರೆ ಈವರೆಗೆ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸಂಬಂಧಿಸಿದ ಯಾವುದೇ ಮಹತ್ವದ ಬೆಳವಣಿಗೆ ನಡೆದಿಲ್ಲ.

Published On - 11:12 am, Tue, 20 September 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ