ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ದೇಹ ಪತ್ತೆ: ತಲೆ, ಉಗುರು ಕದ್ದೊಯ್ದ ಖದೀಮರು

ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲಬಾರಿ ಬರ್ಚಿ ವ್ಯಾಪ್ತಿಯ ನಂಕೇಸರೋದ್ಗಾ ಗ್ರಾಮದಲ್ಲಿ ಹುಲಿ ಶವ ಪತ್ತೆಯಾಗಿದೆ. ಪತ್ತೆಯಾದ ಹುಲಿಯ ಮೃತದೇಹದಲ್ಲಿ ತಲೆ ಮತ್ತು ಅವುಗಳ ಗುರುರುಗಳು ನಾಪತ್ತೆಯಾಗಿದೆ.

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ದೇಹ ಪತ್ತೆ: ತಲೆ, ಉಗುರು ಕದ್ದೊಯ್ದ ಖದೀಮರು
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ
Follow us
TV9 Web
| Updated By: Rakesh Nayak Manchi

Updated on:Dec 19, 2022 | 12:37 PM

ಹಳಿಯಾಳ: ಕಾಳಿ ಹುಲಿ ಸಂರಕ್ಷಿತ ಪ್ರದೇಶ (Kali Tiger Reserve)ದ ಬಳಿ ತಲೆ ಮತ್ತು ಉಗುರುಗಳು ಇಲ್ಲದ ಹುಲಿಯ ಕೊಳೆತ ಶವ ಪತ್ತೆ (Tiger dead body found)ಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬರ್ಚಿ ವ್ಯಾಪ್ತಿಯ ನಂಕೇಸರೋದ್ಗಾ ಗ್ರಾಮದಲ್ಲಿ ಇದೇ ಮೊದಲ ಬಾರಿ ಹುಲಿ ಶವ ಪತ್ತೆಯಾಗಿದ್ದು, ತಲೆ ಮತ್ತು ಉಗುರುಗಳು ನಾಪತ್ತೆಯಾಗಿವೆ. ಆರಂಭದಲ್ಲಿ ಹುಲಿ ಬೇಟೆಯಾಡಿದ ಶಂಕೆ ವ್ಯಕ್ತವಾಗಿತ್ತು. ಆದರೆ, ಪ್ರಾಣಿಗಳ ನಡುವಿನ ಸಂಘಟರ್ಷದಲ್ಲಿ ಹುಲಿ ಸಾವನ್ನಪ್ಪಿದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಾದೇಶಿಕ ಸಂಘರ್ಷದಲ್ಲಿ ಗಂಡು ಹುಲಿ ಸಾವನ್ನಪ್ಪಿದೆ. ಅದರ ದೇಹದ ಮೇಲೆ ಉಗುರುಗಳ ಗಾಯಗಳಿವೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯಂತೆ ಹುಲಿಯ ಬೆನ್ನುಮೂಳೆ ಮುರಿದಿದೆ. ಇದು ಸಾಮಾನ್ಯವಾಗಿ ಪ್ರಾಣಿಗಳ ನಡುವಿನ ಸಂಘರ್ಷದ ಸಮಯದಲ್ಲಿ ಸಂಭವಿಸುತ್ತದೆ ಎಂದು ಉತ್ತರ ಕನ್ನಡದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ TNIE ಗೆ ತಿಳಿಸಿದರು.

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಚಿರತೆ ಹಾವಳಿ: ಕಬ್ಬಿನ ಗದ್ದೆಗೆ ನೀರು ಬಿಡಲು ಹೋದ ವ್ಯಕ್ತಿಯ ಮೇಲೆ ದಾಳಿ

ಅಧಿಕಾರಿಗಳ ಪ್ರಕಾರ, ಕೆಲವು ಕಿಡಿಗೇಡಿಗಳು ಸತ್ತ ಹುಲಿಯನ್ನು ಕಂಡ ಕೂಡಲೇ ತಲೆ ಮತ್ತು ಉಗುರುಗಳನ್ನು ಕದ್ದೊಯ್ದಿರಬಹುದು. ವನ್ಯಜೀವಿ ಕಾಯ್ದೆಯ ಶೆಡ್ಯೂಲ್ 1 ರ ಅಡಿಯಲ್ಲಿ ಹುಲಿಯನ್ನು ಸಂರಕ್ಷಿಸಲಾಗಿರುವುದರಿಂದ ನಾವು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಪ್ರಕಾರ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ವಸಂತ ರೆಡ್ಡಿ ಹೇಳಿದರು. ಸದ್ಯ ಜೆಎಂಎಫ್‌ಸಿ ನ್ಯಾಯಾಲಯದ ನಿರ್ದೇಶನದಂತೆ ಹುಲಿ ಶವ ಪರೀಕ್ಷೆ ನಡೆಸಿ ಶವವನ್ನು ವಿಲೇವಾರಿ ಮಾಡಲಾಗಿದೆ.

ಅರಣ್ಯಾಧಿಕಾರಿಗಳ ಪ್ರಕಾರ, ಮೂರು ದಿನಗಳ ಹಿಂದೆ ಪ್ರಾಣಿ ಸತ್ತಿರಬಹುದು. ಪ್ರಾಣಿಯ ತಲೆ ಮತ್ತು ಉಗುರುಗಳನ್ನು ಕಿತ್ತುಕೊಂಡ ದುಷ್ಕರ್ಮಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ. ತಂಡಕ್ಕೆ ಶ್ವಾನ ದಳ ಹಾಗೂ ವಿಧಿವಿಜ್ಞಾನ ತಜ್ಞರು ನೆರವು ನೀಡಲಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಮತ್ತು ಉತ್ತರ ಕನ್ನಡ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯ ಸಂರಕ್ಷಣಾಧಿಕಾರಿಗಳು, ಉತ್ತರ ಕನ್ನಡ ಮತ್ತು ಡಿಸಿಎಫ್ ಹಳಿಯಾಳ ಸೇರಿದಂತೆ ಹಿರಿಯ ಅರಣ್ಯಾಧಿಕಾರಿಗಳು ಹಾಗೂ ರೇಂಜ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Mon, 19 December 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್