ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ಬೆಂಬಲ ಘೋಷಿಸಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

| Updated By: sandhya thejappa

Updated on: Jul 25, 2022 | 11:52 AM

ಕೊವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೊರೊನಾ ಸಂಖ್ಯೆ ಇಳಿದ ಮೇಲೆ ತಣ್ಣಗಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ಬೆಂಬಲ ಘೋಷಿಸಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ
Follow us on

ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ (Super Speciality hospital) ಉತ್ತರ ಕನ್ನಡ ಜಿಲ್ಲೆಯ ಜನರು ಹೋರಾಟ ನಡೆಸುತ್ತಿರುವ ವಿಚಾರಕ್ಕೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಜನರ ಹೋರಾಟಕ್ಕೆ ಬೆಂಬಲ ಘೋಷಿಸಿದ್ದಾರೆ. ವರ್ಷಗಳ ಕಾಲದ ನ್ಯಾಯಯುತವಾದ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಬೇಕು. ಸಿಎಂ, ಆರೋಗ್ಯ ಸಚಿವರೇ ಖುದ್ದು ಕ್ರಮ ವಹಿಸಬೇಕು. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಗೆ ಹೋಗಬೇಕು. ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಕೊವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೊರೊನಾ ಸಂಖ್ಯೆ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದು ಕುಮಾರಸ್ವಾಮಿ  ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಇನ್ನೆಷ್ಟು ಆ್ಯಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಸರ್ಕಾರ ಕಣ್ಣು ತೆರೆಯಬೇಕು ಎಂದಿದ್ದಾರೆ.

ಇದನ್ನೂ ಓದಿ
Monkeypox Case: ಕಾಮರೆಡ್ಡಿಯಲ್ಲಿ ತೆಲಂಗಾಣದ ಮೊದಲ ಮಂಕಿಪಾಕ್ಸ್​​ ಪ್ರಕರಣ ಪತ್ತೆ
ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಗಾದಿಗೆ ಕಿತ್ತಾಟ: ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ ಬಿ.ವೈ.ವಿಜಯೇಂದ್ರ
ಪೋಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಮಕ್ಕಳು ಹಿಂಜರಿಯುತ್ತಾರೆ ಏಕೆ?
IND vs WI: ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಗಾದಿಗೆ ಕಿತ್ತಾಟ: ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ ಬಿ.ವೈ.ವಿಜಯೇಂದ್ರ

Published On - 11:50 am, Mon, 25 July 22