AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನಾಥ್​ ಪುತ್ರಿಗೆ ನೌಕರಿ ಕೊಡಿಸಿದ ಹೆಚ್​ಡಿ ಕುಮಾರಸ್ವಾಮಿ

ಇದೇ ವರ್ಷ ಜುಲೈನಲ್ಲಿ ಸಂಭವಿಸಿದ್ದ ಶಿರೂರು ಗುಡ್ಡ ಕುಸಿತದಲ್ಲಿ ಜಗನ್ನಾಥ್​ ಎಂಬವರು ಕಾಣೆಯಾಗಿದ್ದಾರೆ. ಕಾಣೆಯಾದ ಜಗನ್ನಾಥ್ ಅವರ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್​ಇಎಲ್​ನಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ನೌಕರಿ ಕೊಡಿಸಿದ್ದಾರೆ. ​

ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನಾಥ್​ ಪುತ್ರಿಗೆ ನೌಕರಿ ಕೊಡಿಸಿದ ಹೆಚ್​ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ|

Updated on:Sep 11, 2024 | 9:32 AM

Share

ಕಾರವಾರ, ಸೆಪ್ಟೆಂಬರ್​ 11: ಶಿರೂರು ಗುಡ್ಡ ಕುಸಿತದ (Shiruru Hill Collapse) ಬಳಿಕ ಮೊದಲಿಗೆ ಸ್ಥಳಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕಾಣೆಯಾಗಿರುವ ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಇದೀಗ, ಹೆಚ್​ಡಿ ಕುಮಾರಸ್ವಾಮಿ ಅವರು ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಸ್ಥಾವರದ (Kaiga Atomic Power Station) ಬಿಹೆಚ್​ಇಎಲ್​ನಲ್ಲಿ ಉದ್ಯೋಗ ಕೊಡಿಸಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ದೂರವಾಣಿ ಕರೆ ಮಾಡಿ ಉದ್ಯೋಗ ಖಾತರಿಪಡಿಸಿದ್ದಾರೆ.

ಜಗನ್ನಾಥ ಅವರ ಇನ್ನೋರ್ವ ಪುತ್ರಿ ಪಲ್ಲವಿ ನಾಯ್ಕ ಅವರಿಗೆ ಕಳೆದವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ರಾಜ್ಯ ಸರ್ಕಾರ ನೌಕರಿ ನೀಡಿತ್ತು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ ಮಾಡಿದ ಮೋದಿ

ಇದೇ ವರ್ಷ ಜುಲೈ 16 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಗುಡ್ಡ ಕುಸಿತದಲ್ಲಿ 11 ಮಂದಿ ಕಾಣೆಯಾಗಿದ್ದು, ಎಂಟು ಜನರ ಶವ ಪತ್ತೆಯಾಗಿದ್ದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದ ಕುಮಾರಸ್ವಾಮಿ

ಶಿರೂರು ಗುಡ್ಡ ಕುಸಿತದ ಬಳಿಕ ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿದ್ದ ಹೆಚ್​ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದರು. 2018 ರಲ್ಲಿ ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೂ ಕುಸಿತ ಆಗಿತ್ತು. ಆಗ ಮನೆ ಕಳೆದುಕೊಂಡವರಿಗೆ ಹತ್ತು ಲಕ್ಷ ಹಣ ಕೊಟ್ಟಿದ್ದೆ. ಆದರೆ, ಇಂತಹ ಘಟನೆಯಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುವುದು ತರವಲ್ಲ ಎಂದು ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:30 am, Wed, 11 September 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!