ಭಾರೀ ಮಳೆ: ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಭಾರತೀಯ ಹವಾಮಾನ ಇಲಾಖೆ (MD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.14 ರಿಂದ 18 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ರೆಡ್​ ಅಲರ್ಟ್​ ಘೋಷಿಸಿದೆ. ಈ ಹಿನ್ನಲೆ ಉತ್ತರ ಕನ್ನಡ(Uttara Kannada) ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ(ಸೋಮವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಇತ್ತ ಕೊಡಗಿನಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ಕೊಡಗು ಜಿಲ್ಲೆಯ ಪ್ರಾಥಮಿಕ & ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಭಾರೀ ಮಳೆ: ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 14, 2024 | 10:22 PM

ಉತ್ತರ ಕನ್ನಡ, ಜು.14: ಜಿಲ್ಲೆಯ ಕಾರವಾರ ತಾಲೂಕಿನಾದ್ಯಂತ ನಿನ್ನೆ(ಶನಿವಾರ) ಸುರಿದ ಮಳೆ(Rain)ಗೆ ಹಲವಾರು ಅವಾಂತರಗಳಾಗಿದ್ದು, 50 ರಿಂದ 100 ಮನೆಗಳಿಗೆ ಜಲದಿಗ್ಬಂಧನ ಉಂಟಾಗಿದೆ. ಇನ್ನು ಕೆಲವು ಮನೆಗಳಿಗೆ ನೀರು ಹೊಕ್ಕಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಧಾರಾಕಾರ ಮಳೆ ಹಿನ್ನೆಲೆ ಉತ್ತರ ಕನ್ನಡ(Uttara Kannada) ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ(ಸೋಮವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ.

ಯಾವ್ಯಾವ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ, ಯಲ್ಲಾಪೂರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಡಿಸಿ ಲಕ್ಷ್ಮೀಪ್ರಿಯ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಮುಂದುವರೆದ ಆರ್ಭಟ: ಉತ್ತರ ಕನ್ನಡ ಜಿಲ್ಲೆಯ ಹಲವು ಹಳ್ಳಿಗಳಿಗೆ ನುಗ್ಗಿದ ನೀರು

ಭಾರತೀಯ ಹವಮಾನ ಇಲಾಖೆ (MD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ  ಜು.14 ರಿಂದ 18 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ರೆಡ್​ ಅಲರ್ಟ್​ ಘೋಷಿಸಿದೆ. ಈ ಹಿನ್ನಲೆ ಹಳ್ಳಕೊಳ್ಳಗಳು ಭಾರಿ ಮಳೆಯಿಂದ ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನಲೆ ಮುಂಜಾಗೃತವಾಗಿ ರಜೆ ಘೋಷಿಸಿ ಆದೇಶಿಸಲಾಗಿದೆ.

ಕೊಡಗು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ

ಕೊಡಗು ಜಿಲ್ಲೆಯಾದ್ಯಂತ ಕೂಡ ಭಾರಿ ಮಳೆ ಮುಂದುವರೆದಿದ್ದು, ಕೊಡಗು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಿ ಬಿಇಒ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Sun, 14 July 24