AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆ; ಆ.3 ರಂದು ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ನಾಳೆ(ಆ. 03) ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಭಾರಿ ಮಳೆ; ಆ.3 ರಂದು ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಕಿರಣ್ ಹನುಮಂತ್​ ಮಾದಾರ್
|

Updated on: Aug 02, 2024 | 9:29 PM

Share

ಉತ್ತರ ಕನ್ನಡ, ಆ.02: ಭಾರತೀಯ ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಆ. 03 ರಂದು ಭಾರಿ ಮಳೆಯಾಗುವ ಸೂಚನೆ ನೀಡಿದೆ. ಹೀಗಾಗಿ ಭಾರಿ ಮಳೆಯಿಂದ ನದಿ, ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ನಾಳೆ ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಯಾವ್ಯಾವ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪೂರ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ನಾಳೆ(ಆ.03) ರಜೆ ಘೋಷಿಸಲಾಗಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ 11 ಜನ ಬಲಿ, 638 ಮನೆಗಳಿಗೆ ಹಾನಿ: ಗುಂಡೂರಾವ್ ಮಾಹಿತಿ

ಈ ಜಿಲ್ಲೆಗಳಲ್ಲಿ ನಾಳೆ ಆರೆಂಜ್​ ಅಲರ್ಟ್​ ಘೋಷಣೆ

ಮಳೆಯ ಅಬ್ಬರ ಜೋರಾಗುತ್ತಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್​ನ್ನು ಹವಾಮಾನ ಇಲಾಖೆ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ