ಉತ್ತರ ಕನ್ನಡ, ಆ.02: ಭಾರತೀಯ ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಆ. 03 ರಂದು ಭಾರಿ ಮಳೆಯಾಗುವ ಸೂಚನೆ ನೀಡಿದೆ. ಹೀಗಾಗಿ ಭಾರಿ ಮಳೆಯಿಂದ ನದಿ, ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ನಾಳೆ ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪೂರ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ನಾಳೆ(ಆ.03)
ರಜೆ ಘೋಷಿಸಲಾಗಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ 11 ಜನ ಬಲಿ, 638 ಮನೆಗಳಿಗೆ ಹಾನಿ: ಗುಂಡೂರಾವ್ ಮಾಹಿತಿ
ಮಳೆಯ ಅಬ್ಬರ ಜೋರಾಗುತ್ತಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ನ್ನು ಹವಾಮಾನ ಇಲಾಖೆ ಘೋಷಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ