AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು 7ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Rain, school holidays: ರಾಜ್ಯದಲ್ಲಿ ಮುಂಗಾರಿನ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಅವಾಂತರಗಳು ಸಂಭವಿಸಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲ ತಾಲೂಕುಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜುಲೈ 7ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಎಂಬ ಮಾಹಿತಿ ಇಲ್ಲಿದೆ.

ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು 7ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಶಾಲೆಗಳಿಗೆ ನಾಳೆ ರಜೆImage Credit source: Getty images
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jul 06, 2026 | 10:38 PM

Share

ಮುಖ್ಯಾಂಶಗಳು

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ
  • ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
  • ನಾಳೆ ಕಳಸ ತಾಲೂಕಿನ ಶಾಲೆಗಳಿಗೂ ರಜೆ

ಕಾರವಾರ, ಜುಲೈ 06: ತಿಂಗಳು ತಡವಾಗಿ ಬಂದರೂ ಮುಂಗಾರಿನ ಅಬ್ಬರ ಜೋರಾಗಿದೆ. ಹಲವೆಡೆ ವರುಣ (rain) ಅಬ್ಬರಿಸುತ್ತಿದ್ದಾನೆ. ಮಹಾಮಳೆಯ ಆರ್ಭಟಕ್ಕೆ ಕೆಲವೆಡೆ ಅವಾಂತರಗಳು ಸಂಭವಿಸಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗಳಿಗೆ ಜುಲೈ 07ರಂದು ರಜೆ (Schools Holidays) ಘೋಷಿಸಲಾಗಿದೆ.

ಯಾವೆಲ್ಲಾ ತಾಲೂಕುಗಳಲ್ಲಿ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ರೆಡ್​​ ಅಲರ್ಟ್ ಘೋಷಿಸಲಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ  ಘೋಷಿಸಲಾಗಿದೆ.

ಇದನ್ನೂ ಓದಿ: ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್​

ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಸೋಮವಾರ ಆದೇಶ ಹೊರಡಿಸಿದ್ದಾರೆ.

3 ತಾಲೂಕಿನಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲೆಗಳಿಗೆ ಜಿಲ್ಲಾಡಳಿತ ನಾಳೆ ರಜೆ ಘೋಷಿಸಿದೆ. ಕೊಪ್ಪ, ಶೃಂಗೇರಿ ಮತ್ತು ಕಳಸ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ: ಶಾಲಾ-ಕಾಲೇಜಿಗೆ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ವ್ಯಾಪಕ ಮಳೆಯ ಹಿನ್ನೆಲೆ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಎಲ್ಲಾ ಶಾಲಾ-ಕಾಲೇಜಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಹಾಗೂ ಖಾನಾಪುರ ಎರಡೂ ತಾಲೂಕುಗಳ ನಗರ ಮತ್ತು ಗ್ರಾಮೀಣ ಪ್ರದೇಶದ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ. ಪಶ್ಚಿಮ ಘಟ್ಟ ಪ್ರದೇಶ ಮತ್ತು ಬೆಳಗಾವಿ ನಗರದಲ್ಲಿ ನಾಳೆಯೂ ಭಾರೀ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಾಳೆ 3 ತಾಲೂಕಿನ ಶಾಲಾ-ಕಾಲೇಜಿಗೆ ರಜೆ

ಶಿವಮೊಗ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಮೂರು ತಾಲೂಕಿನಲ್ಲಿ  ಶಾಲಾ, ಕಾಲೇಜುಗಳಿಗೂ ಮಂಗಳವಾರ ರಜೆ ಘೋಷಿಸಲಾಗಿದೆ. ತಹಶೀಲ್ದಾರ್ ಸೂಚನೆ ಮೇರೆಗೆ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಅನ್ವಯಿಸಲಿದೆ. ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಶಾಲಾ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: Karnataka Weather Forecast: ಉಡುಪಿ, ಉತ್ತರ ಕನ್ನಡಕ್ಕೆ ರೆಡ್​​ ಅಲರ್ಟ್​​, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ

ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುಂದುವರಿದಿದ್ದು, ಸಕಲೇಶಪುರ ತಾಲೂಕಿನ ಎಲ್ಲಾ ಶಾಲಾ-ಕಾಲೇಜಿಗಳಿಗೆ ಜುಲೈ 7ರಂದು ರಜೆ ಘೋಷಿಸಲಾಗಿದೆ. ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ಸುಪ್ರಿತಾ ಈ ಆದೇಶ ಹೊರಡಿಸಿದ್ದಾರೆ. ಸಕಲೇಶಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ನಾಳೆ ರಜೆ ಅನ್ವಯವಾಗಲಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:13 pm, Mon, 6 July 26

Follow Us
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​