AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್, NDRF ದೌಡು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಈ ಕುರಿತು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ‘ಈವರೆಗೆ 6 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಜೊತೆಗೆ ತಲಾ 35 ಜನರ ಎರಡು NDRF ತಂಡವನ್ನು ಕರೆಯಿಸಲಾಗಿದೆ ಎಂದರು.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್, NDRF ದೌಡು
ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jul 04, 2024 | 10:42 PM

Share

ಉತ್ತರ ಕನ್ನಡ, ಜು.04: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಈವರೆಗೆ 6 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ(Gangubai Manakar) ಹೇಳಿದರು. ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಕುರಿತ ಮಾತನಾಡಿದ ಅವರು, ‘ಈವರೆಗೆ ಹೊನ್ನಾವರದಲ್ಲಿ 4, ಅಂಕೋಲಾ, ಕುಮಟಾದಲ್ಲಿ ತಲಾ‌ ಒಂದು ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಅಲ್ಲಿನವರಿಗೆ ಜಿಲ್ಲಾಡಳಿತದಿಂದಲೇ ಊಟ, ವಸತಿ, ಬಟ್ಟೆ ವ್ಯವಸ್ಥೆ ಮಾಡಿದ್ದೇವೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಎನ್​ಡಿಆರ್​ಎಫ್​​ ಆಗಮನ

‘ಒಂದು ತಿಂಗಳಿನಿಂದ ಸುರಿದ ಮಳೆಗೆ ಸಾಕಷ್ಟು ಹಾನಿ ಆಗಿದೆ. ಓರ್ವ ಮಹಿಳೆ, ಜಾನುವಾರು ಸಾವನ್ನಪ್ಪಿದ್ದಾರೆ. ಜೊತೆಗೆ 92 ಮನೆಗಳಿಗೆ ಹಾನಿಯಾಗಿದೆ. ಮುಂದಿನ 3 ರಿಂದ 4 ದಿನಗಳ ಕಾಲ ಮಳೆ ಅಬ್ಬರ ಹೆಚ್ಚಾಗಲಿದೆ. ಹೀಗಾಗಿ ತಲಾ 35 ಜನರ ಎರಡು NDRF ತಂಡ ಜಿಲ್ಲೆಗೆ ಆಗಮಿಸುತ್ತಿದೆ. ಇಂದು ಬೆಂಗಳೂರಿನಿಂದ ಎನ್​ಡಿಆರ್​ಎಫ್​ ಸಿಬ್ಬಂದಿ ತೆರಳಿದ್ದು, ನಾಳೆ ಕಾರವಾರ, ಕುಮಟಾ, ಅಂಕೋಲಾಗೆ ಆಗಮಿಸಿ ಹೆಚ್ಚು ಮಳೆ ಬೀಳುವ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೇ ಜೊಯಿಡಾದ ಕನ್ನೇರಿ ಹಾಗೂ ಕದ್ರಾದ ಡ್ಯಾಂ ಮಟ್ಟ ಹೆಚ್ಚಾಗುತ್ತಿದೆ. ಅಲ್ಲಿನ ಜನರ ರಕ್ಷಣೆಗೆ ಈ ತಂಡ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದರು.

ಇದನ್ನೂ ಓದಿ:ಭಾರಿ ಮಳೆ; ಉಡುಪಿ, ಉತ್ತರ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಳೆಯಿಂದ ಸಮಸ್ಯೆಗೆ ಸಹಾಯವಾಣಿ

ಇನ್ನು ಜಿಲ್ಲೆಯಲ್ಲಿ 439 ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಾಧ್ಯತೆಯ ಬಗ್ಗೆ ಗುರುತು ಮಾಡಲಾಗಿತ್ತು. ಭಟ್ಕಳ, ಹೊನ್ನಾವರ ಹಾಗೂ ಕಾರವಾರ ವ್ಯಾಪ್ತಿಯಲ್ಲಿ ಗುಡ್ಡ ಕುಸಿತದ ಭೀತಿ ಹಿನ್ನೆಲೆ ಈಗಾಗಲೇ ಸರಕಾರದಲ್ಲಿ 6.75ಕೋಟಿ ರೂ. ಬೇಡಿಕೆ ಇರಿಸಲಾಗಿದೆ. ಪ್ರವಾಹವನ್ನು ಎದುರಿಸಲು ಕಂದಾಯ ಇಲಾಖೆಯ ತಂಡ ತಯಾರಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಕೂಡ ತೆರೆಯಲಾಗಿದೆ. ಮಳೆಯ ಸಮಸ್ಯೆ ಸಂಭವಿಸಿದಾಗ 1950ಸಂಖ್ಯೆಗೆ ಜನರು ಸಂಪರ್ಕಿಸಬಹುದು ಎಂದು  ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು