AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡಕ್ಕೆ ರೆಡ್​ ಅಲರ್ಟ್​: ಮೀನುಗಾರಿಕೆ, ಟ್ರೆಕ್ಕಿಂಗ್ ನಿಷೇಧ, ಡಿಸಿ ಖಡಕ್​ ಸೂಚನೆ

ಪೂರ್ವ ಮುಂಗಾರು ಮಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಅನಾಹುತ ಸೃಷ್ಟಿಸುತ್ತಿದೆ. ಕೇವಲ ಎರಡು ಗಂಟೆಯ ಮಳೆಗೆ ಹೆದ್ದಾರಿಗಳು ಕೆರೆಯಂತಾಗಿವೆ. ಅತ್ತ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿ ಮೀನುಗಾರಿಕೆ ನಿಂತಿದೆ. ಬೋಟ್​ಗಳು ಬಂದರುನಲ್ಲಿ ಲಂಗರು ಹಾಕುತ್ತಿವೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡಕ್ಕೆ ರೆಡ್​ ಅಲರ್ಟ್​: ಮೀನುಗಾರಿಕೆ, ಟ್ರೆಕ್ಕಿಂಗ್ ನಿಷೇಧ, ಡಿಸಿ ಖಡಕ್​ ಸೂಚನೆ
ಸಾಂದರ್ಭಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ|

Updated on:May 20, 2025 | 9:34 PM

Share

ಉತ್ತರ ಕನ್ನಡ, ಮೇ 20: ಕಳೆದ ಒಂದು ವಾರದಿಂದ ರಾಜ್ಯದ ಕೆಲವು ಕಡೆ ಅಬ್ಬರಿಸಿ ಅವಾಂತರ ಸೃಷ್ಟಿಸುತ್ತಿದ್ದ ವರುಣ (Rain) ಮಂಗಳವಾರ (ಮೇ.20) ಕರಾವಳಿಗೆ ಎಂಟ್ರಿ ಕೊಟ್ಟಿದ್ದಾನೆ. ಪ್ರತಿ ವರ್ಷ ಜೂನ್ ಅಂತ್ಯ ಮತ್ತು ಜುಲೈ ತಿಂಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ (Uttar Kannada) ಮಳೆಯ ಅಬ್ಬರ ಹೆಚ್ಚಾಗುತಿತ್ತು. ಆದರೆ, ಈ ವರ್ಷ ಮೇ ಮೂರನೇ ವಾರದಲ್ಲೇ ಮಳೆ ಆರಂಭ ಆಗಿದ್ದರಿಂದ ಸಹಜವಾಗಿ ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗಿ ಅಲೆಗಳ ಅಬ್ಬರ ಹೆಚ್ಚಾಗಿದೆ.

ಹೀಗಾಗಿ, ಮೀನುಗಾರಿಕೆ ನಿರ್ಬಂಧಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ, ಮೀನುಗಾರಿಕೆಗಾಗಿ ಸಮುದ್ರದಾಳಕ್ಕೆ ಹೊದವರನ್ನು ಹಿಂತಿರುಗುವಂತೆ ಸೂಚಿಸಿದೆ. ಅಲ್ಲದೆ, ಮೇ 22 ರ ವರೆಗೆ ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರಕ್ಕೆ ಯಾವುದೇ ಬೋಟ್​ಗಳು ಇಳಿಯದಂತೆ ಖಡಕ್ ಸೂಚನೆ ನೀಡಲಾಗಿದೆ. ಹಾಗೇ, ಜಿಲ್ಲಾಡಳಿತ ಅಂಗನವಾಡಿ ಕೇಂದ್ರಗಳಿಗೆ ಬುಧವಾರ ರಜೆ ಘೋಷಿಸಿದೆ.

ಫಾಲ್ಸ್ ಹಾಗೂ ಟ್ರಕ್ಕಿಂಗ್ ಸ್ಥಳಗಳಿಗೆ ನಿರ್ಬಂಧ

ಈ ಸಂಬಂಧ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾತನಾಡಿ, ಮೇ. 22ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಹೊರಗಡೆ ಹೊದಾಗ ಮುನ್ನೆಚ್ಚರಿಕೆ ವಹಿಸಬೇಕು. ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಕಂಟ್ರೋಲ್ ರೂಂ ಪ್ರಾರಂಭ ಮಾಡಲಾಗಿದೆ. 24X7 ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದ್ದು ಅವಘಡ ಸಂಭವಿಸಿದಾಗ ಸಂಪರ್ಕಿಸಬಹುದು. ಜಿಲ್ಲೆಯಲ್ಲಿನ 439 ಭೂ ಕುಸಿತ ಸ್ಥಳಕ್ಕೆ ಸ್ಪಾಟರ್ಸ್ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಗೋಕರ್ಣ ಮಹಾಬಲೇಶ್ವರನ ದರ್ಶನಕ್ಕೆ ಮೂಗು ಮುಚ್ಚಿಕೊಂಡೇ ಹೋಗಬೇಕಾದ ಸ್ಥಿತಿ!
Image
ಹೊನ್ನಾವರದ ವೀಳ್ಯದೆಲೆಗೆ ಪಾಕ್ ದೊಡ್ಡ ಮಾರುಕಟ್ಟೆ! ಆದರೂ ಕಳ್ಸಲ್ಲ ರೈತರು
Image
ಗೋಕರ್ಣದಲ್ಲಿ ಡೇಂಜರಸ್ ಸ್ಪಾಟ್​ಗಳ ಬಗ್ಗೆ ಅಲರ್ಟ್ ಮಾಡಲಿದೆ ಮಾಹಿತಿ ಕೇಂದ್ರ
Image
ಸರಕು ಹಡಗಿನಲ್ಲಿ ಕಾರವಾರಕ್ಕೆ ಬಂದ ಪಾಕಿಸ್ತಾನ ಪ್ರಜೆ: ಮುಂದೇನಾಯ್ತು?

ಜೂನ್ ತಿಂಗಳಿನಿಂದ ಸ್ಪಾಟರ್ಸ್ ನಿಗದಿತ ಸ್ಥಳದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಕಳೆದ ಬಾರಿ ಮರ ಬಿದ್ದು ಕೆಲವು ಕಡೆ ಸಾವು ಆಗಿದ್ದರಿಂದ, ಅಪಾಯದ ಮರಗಳನ್ನು ತೆರವು ಮಾಡುವ ಕೆಲಸ ಅರಣ್ಯ ಇಲಾಖೆ ಮಾಡುತ್ತಿದೆ. ಜಲ ಸಾಹಸ ಕ್ರಿಡೆಗಳನ್ನು ಮಾನ್ಸೂನ ಮುಗಿಯೊವರೆಗೂ ನಿರ್ಬಂಧಿಸಲಾಗಿದೆ. ಮಾನ್ಸೂನ್ ಮುಗಿಯೊವರೆಗೂ ಫಾಲ್ಸ್ ಹಾಗೂ ಟ್ರೆಕ್ಕಿಂಗ್ ಸ್ಥಳಗಳಿಗೆ ನಿರ್ಬಂಧ ವಿಧಿಸಲಾಗುವುದು. ಅರಣ್ಯ ಇಲಾಖೆಯಿಂದ ಸಿಬ್ಬಂಧಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮೀನುಗಾರಿಕೆ ನಿಂತಿದ್ದರಿಂದ ಕಾರವಾರದ ಬೈಥಕೊಲ್ ಬಂದರು ಮೀನು ಮಾರುಕಟ್ಟೆ ಸಂಪೂರ್ಣವಾಗಿ ಖಾಲಿ ಖಾಲಿ ಹೊಡೆಯುತ್ತಿದ್ದು, ಮೀನುಗಾರರು ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದರ ಜೊತೆಗೆ ಸ್ಕೂಬ್ ಡೈವಿಂಗ್ ಸೇರಿದಂತೆ ಎಲ್ಲ ಜಲಸಾಹಸ ಕ್ರಿಡೆಗಳನ್ನೂ ಕೂಡ ಇಂದಿನಿಂದಲೇ ನಿಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ.

ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆವರೆಗೆ ಜೋರಾಗಿ ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ – ಸಿದ್ಧಾಪುರದ ಹೆದ್ದಾರಿ ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿದು ಸಾವು-ನೋವು ಸಂಭವಿಸಿತ್ತು. ಅಬ್ಬರದ ಮಳೆಯಲ್ಲೇ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅವರು ಮುಂದಿನ ವರ್ಷ ಈ ಸಮಸ್ಯೆ ಮರುಕಳಿಸದಂತೆ ಹೆಚ್ಚಿನ ಕಾಳಜಿ ವಹಿಸುವ ಭರವಸೆ ನೀಡಿದ್ದರು. ಆದರೆ, ಈ ವರ್ಷಾರಂಭದಲ್ಲಿ ಕೇವಲ ಎರಡು ಗಂಟೆ ಸುರಿದ ಅಬ್ಬರದ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ: ಮಳೆ ಆರಂಭ ಆಗುತ್ತಿದ್ದಂತೆ ಉತ್ತರ ಕನ್ನಡದಲ್ಲಿ ಹೆಚ್ಚಿದ ಆತಂಕ: ಭರವಸೆ ಈಡೆರಿಸದ ಸಿಎಂ

ಒಟ್ಟಾರೆಯಾಗಿ ಮುಂಗಾರು ಆರಂಭದಲ್ಲೇ ಕೇವಲ ಎರಡು ಗಂಟೆ ಸುರಿದ ಮಳೆಗೆ ಇಷ್ಟೊಂದು ಅನಾಹುತ ಸಂಭವಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಏನೆಲ್ಲ ಅನಾಹುತ ಆಗಬಹುದು ಎಂಬ ಆತಂಕ ಉತ್ತರ ಕನ್ನಡ ಜಿಲ್ಲೆಯ ಜನರನ್ನು ಕಾಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 pm, Tue, 20 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!