ಪಹಲ್ಗಾಮ್ ದಾಳಿ ನಂತರ ಕರ್ನಾಟಕ ಕರವಾಳಿಯಲ್ಲಿ ಭಾರಿ ಕಟ್ಟೆಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳ ಮೇಲೆ ಪೊಲೀಸರ ಹದ್ದಿನ ಕಣ್ಣು

ಜಮ್ಮು ಮತ್ತು ಕಾಶ್ಮೀರದ ಪಹಾಲ್ಗಾಮ್ ಪ್ರವಾಸಿ ತಾಣದಲ್ಲಿ ಭಯೋತ್ಪಾದರ ದಾಳಿ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ ಕರವಾಳಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅತ್ತ ಆಳ ಸಮುದ್ರದಲ್ಲಿ ಎರಡು ತಂಡಗಳು ಕಾರ್ಯಾಚರಣೆ ಶುರು ಮಾಡಿದ್ದರೆ, ಇತ್ತ ಪ್ರವಾಸಿ ತಾಣಗಳ ಮೇಲೆ ಸ್ಥಳೀಯ ಪೊಲೀಸರ ಹದ್ದಿನ ಕಣ್ಣಿಟ್ಟಿದ್ದಾರೆ.

ಪಹಲ್ಗಾಮ್ ದಾಳಿ ನಂತರ ಕರ್ನಾಟಕ ಕರವಾಳಿಯಲ್ಲಿ ಭಾರಿ ಕಟ್ಟೆಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳ ಮೇಲೆ ಪೊಲೀಸರ ಹದ್ದಿನ ಕಣ್ಣು
ಕರಾವಳಿ ಭದ್ರತಾ ಪಡೆ ಸಿಬ್ಬಂದಿಯಿಂದ ಬೋಟ್​ಗಳ ಪರಿಶೀಲನೆ
Edited By:

Updated on: May 01, 2025 | 8:00 AM

ಕಾರವಾರ, ಮೇ 1: ಪಹಲ್ಗಾಮ್ ಉಗ್ರ ದಾಳಿ (Pahalgam Terror Attack) ಬೆನ್ನಲ್ಲೇ ದೇಶದಲ್ಲಿ ಕ್ಷಣ ಕ್ಷಣಕ್ಕೂ ಮಹತ್ವದ ಬೆಳವಣಿಗೆಗಳಾಗುತ್ತಿವೆ. ದೇಶದ ಸುರಕ್ಷತೆಯ ವಿಚಾರವಾಗಿ ಭಾರಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚಿಸಿದ್ದು, ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಕರಾವಳಿ ಕಾವಲು ಪಡೆ, ಭಾರತೀಯ ಕೊಸ್ಟ್ ಗಾರ್ಡ್ (Indian Coast Guard), ನೌಕಾ ನೆಲೆ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಸಕ್ರಿಯರಾಗಿದ್ದಾರೆ. ಒಂದು ಕಡೆ ಅರಬ್ಬೀ ಸಮುದ್ರ, ಇನ್ನೊಂದು ಕಡೆ ದೇಶದ ದೊಡ್ಡ ನೌಕಾ ನೆಲೆ. ಮತ್ತೊಂದೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬರುವ ದೇಶ ವಿದೇಶಿಗರು. ಈ ಎಲ್ಲ ಸೂಕ್ಷ್ಮ ಕಾರಣಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಾದಳಕ್ಕೆ ಹೋಗುವ ಮೀನುಗಾರಿಕೆ ಬೋಟ್ ಹಾಗೂ ಹಡಗುಗಳ ಮೇಲೆ ಕಣ್ಣಿಡಲಾಗಿದ್ದು, ಕರಾವಳಿ ಕಾವಲು ಪಡೆ ಹಾಗೂ ಭಾರತಿಯ ಕೊಸ್ಟಲ್ ಗಾರ್ಡ್ ಸಿಬ್ಬಂದಿ ಸಮುದ್ರದಾಳಕ್ಕೆ ಹೋಗಿ ಪ್ರತಿಯೊಂದು ಬೋಟ್​​ಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ಜಿಲ್ಲೆಯ ಬಂದರುಗಳಿಗೆ ಬರುವ ಪ್ರತಿಯೋಂದು ಪರ್ಷಿಯನ್ ಬೋಟ್​​ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಂದರು ಹಾಗೂ ಸಮುದ್ರದಾಳದಲ್ಲಿ ಯಾವುದೇ ಅನುಮಾನಸ್ಪದ ಹಾಗೂ ಬೇರೆ ಕಡೆಯ ಬೋಟ್ ಕಂಡು ಬಂದರೆ ತಕ್ಷಣ ಮಾಹಿತಿ ತಿಳಿಸುವಂತೆ ಮೀನುಗಾರರಿಗೆ ಪೊಲೀಸರ ತಂಡ ಮನವಿ ಮಾಡಿಕೊಂಡಿದೆ.

ದೇಶದ ಅತಿ ದೊಡ್ಡ ಕದಂಬ ನೌಕಾ ನೆಲೆ ಕಾರವಾರ ಬಳಿ ಇದೆ. ಹೀಗಾಗಿ ಕಾರವಾರ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಬರುವ ವಲಸಿಗರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ನೌಕಾನೆಲೆ ಭದ್ರತೆ ವಿಚಾರವಾಗಿ ಕೇಂದ್ರ ಗೃಹ ಇಲಾಖೆಯ ಸೂಚನೆಯ ಪ್ರಕಾರ, ನೌಕಾನೆಲೆಯ ಕೂಗಳತೆ ದೂರದಲ್ಲಿನ ರವೀಂದ್ರನಾಥ್ ಠಾಗೋರ ಕಡಲ ತೀರದಲ್ಲಿ ಮೇ 4 ರಂದು ನಡೆಯಬೇಕಿದ್ದ ಪ್ರಸಿದ್ಧ ಕರಾವಳಿ ಉತ್ಸವವನ್ನು ಮುಂದೂಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ
ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ
ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದು ಮಳೆ
ಪಹಲ್ಗಾಮ್ ಉಗ್ರರ ದಾಳಿ ವೇಳೆ ಸ್ವಲ್ಪದರಲ್ಲೇ ಪಾರಾದ ಶಿರಸಿ ಕುಟುಂಬ

ಪ್ರವಾಸಿ ತಾಣ, ಹೊಂ ಸ್ಟೇ ಹಾಗೂ ಲಾಡ್ಜ್​​ಗಳಿಗೆ ಸಿಸಿ ಕ್ಯಾಮರಾ ಕಡ್ಡಾಯ

ಗೋಕರ್ಣ, ಮುರುಡೇಶ್ವರ ಹಾಗೂ ಯಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಬರುವ ಹಿನ್ನೆಲೆ ಜಿಲ್ಲೆಯ ಪ್ರತಿಯೊಂದು ಪ್ರವಾಸಿ ತಾಣ, ಹೊಂ ಸ್ಟೇ ಹಾಗೂ ಲಾಡ್ಜ್​​ಗಳಿಗೆ ಸಿಸಿ ಕ್ಯಾಮರಾ ಸೇರಿದಂತೆ ಹೆಚ್ಚಿನ ಸುರಕ್ಷತೆ ಕ್ರಮ ಕೈಗೊಳ್ಳುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸೂಚನೆ ಕೊಡುತ್ತಿದ್ದಾರೆ.

ಇದನ್ನೂ ಓದಿ: ಪುತ್ರನಿಗೆ ತಿಂಡಿ ಕೊಡಿಸಲು ಹೋಗಿ ಬಚಾವ್! ಪಹಲ್ಗಾಮ್ ದಾಳಿ ವೇಳೆ ಸ್ವಲ್ಪದರಲ್ಲೇ ಪಾರಾದ ಶಿರಸಿ ಕುಟುಂಬ

ಒಟ್ಟಾರೆಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆದ್ಯತೆ ಕೊಡಲಾಗುತ್ತಿದ್ದು, ಜಿಲ್ಲಾಡಳಿತ ಹಾಗೂ ನೌಕಾ ಪಡೆ ಮತ್ತು ಭಾರತೀಯ ಕೊಸ್ಟ್ ಗಾರ್ಡ್ ತಂಡಗಳು ಸಕ್ರಿಯವಾಗಿ ಕಾರ್ಯಾಚರಿಸುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us