AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ- ಹೊನ್ನಾವರ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರಿಸಲು ಹೈಕೋರ್ಟ್ ಅನುಮತಿ

Kumta- Honnavar Highway: 3,040 ಮರಗಳಿಗೆ ಬದಲಾಗಿ 9,120 ಮರ ಬೆಳೆಸಬೇಕು. ರಾಜ್ಯ ಅರಣ್ಯ ಇಲಾಖೆ ಷರತ್ತುಗಳನ್ನು ಪಾಲಿಸಬೇಕು. ಸಸಿ ನೆಟ್ಟ ನಂತರವೇ ಗುತ್ತಿಗೆದಾರನಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಕುಮಟಾ- ಹೊನ್ನಾವರ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರಿಸಲು ಹೈಕೋರ್ಟ್ ಅನುಮತಿ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Sep 23, 2021 | 9:50 PM

Share

ಬೆಂಗಳೂರು: ಕುಮಟಾ- ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕುಮಟಾ- ಹೊನ್ನಾವರ ಸಂಪರ್ಕಿಸುವ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರಿಸಲು ಹೈಕೋರ್ಟ್ ಅನುಮತಿ ನೀಡಿದೆ. ಆದರೆ, ಅದಕ್ಕಾಗಿ ಕತ್ತರಿಸುವ ಮರಗಳ ಬದಲಿ‌ಗೆ ಮರ ಬೆಳೆಸಬೇಕು ಎಂದು ತಾಕೀತು ಮಾಡಿದೆ. 3,040 ಮರಗಳಿಗೆ ಬದಲಾಗಿ 9,120 ಮರ ಬೆಳೆಸಬೇಕು. ರಾಜ್ಯ ಅರಣ್ಯ ಇಲಾಖೆ ಷರತ್ತುಗಳನ್ನು ಪಾಲಿಸಬೇಕು. ಸಸಿ ನೆಟ್ಟ ನಂತರವೇ ಗುತ್ತಿಗೆದಾರನಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಕನ್ನಡ ಭಾಷೆ ಕಲಿಕೆ ಕಡ್ಡಾಯವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ 4ನೇ ತರಗತಿ ವಿದ್ಯಾರ್ಥಿ ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಕರ್ನಾಟಕ ಸರ್ಕಾರ ಘೋಷಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಅರ್ಜಿದಾರ ಕೀರ್ತನ್ ಸುರೇಶ್ 2015ರ ಕನ್ನಡ ಕಲಿಕೆ ಕಡ್ಡಾಯ ಕಾಯ್ದೆಯ ವಿರುದ್ಧ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾನೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್​ಇ) ಮತ್ತು ಇಂಡಿಯನ್ ಸರ್ಟಿಫಿಕೆಟ್ ಆಫ್ ಸೆಕೆಂಡರಿ ಎಜುಕೇಷನ್ (ಐಸಿಎಸ್​ಇ) ಪಠ್ಯಕ್ರಮವಿರುವ ಶಾಲೆಗಳಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬೋಧಿಸಲು ನಿಯಮ ಜಾರಿ ಮಾಡಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಕೋರ್ಟ್ ಮೊರೆ ಹೋಗಿದ್ದಾನೆ.

2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್​ಇ, ಐಸಿಎಸ್​ಇ ಸಿಲೆಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು ಅಳವಡಿಕೆ ಮಾಡಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದಾನೆ. ಈ ಕುರಿತು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ 3 ವಾರಗಳ ಬಳಿಕ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.

ಇದನ್ನೂ ಓದಿ: ಶಾಲೆಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ 4ನೇ ತರಗತಿ ವಿದ್ಯಾರ್ಥಿ

ಇದನ್ನೂ ಓದಿ: ‘ತುಂಬಾ ಖುಷಿಯಾಗಿದೆ’: ಭಾರತದ ಕೊವಿಡ್ ಪರಿಹಾರ ಯೋಜನೆಯನ್ನು ಶ್ಲಾಘಿಸಿದ ಸುಪ್ರೀಂಕೋರ್ಟ್

Published On - 9:48 pm, Thu, 23 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್