ಕುಮಟಾ- ಹೊನ್ನಾವರ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರಿಸಲು ಹೈಕೋರ್ಟ್ ಅನುಮತಿ

| Updated By: ganapathi bhat

Updated on: Sep 23, 2021 | 9:50 PM

Kumta- Honnavar Highway: 3,040 ಮರಗಳಿಗೆ ಬದಲಾಗಿ 9,120 ಮರ ಬೆಳೆಸಬೇಕು. ರಾಜ್ಯ ಅರಣ್ಯ ಇಲಾಖೆ ಷರತ್ತುಗಳನ್ನು ಪಾಲಿಸಬೇಕು. ಸಸಿ ನೆಟ್ಟ ನಂತರವೇ ಗುತ್ತಿಗೆದಾರನಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಕುಮಟಾ- ಹೊನ್ನಾವರ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರಿಸಲು ಹೈಕೋರ್ಟ್ ಅನುಮತಿ
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ಕುಮಟಾ- ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕುಮಟಾ- ಹೊನ್ನಾವರ ಸಂಪರ್ಕಿಸುವ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರಿಸಲು ಹೈಕೋರ್ಟ್ ಅನುಮತಿ ನೀಡಿದೆ. ಆದರೆ, ಅದಕ್ಕಾಗಿ ಕತ್ತರಿಸುವ ಮರಗಳ ಬದಲಿ‌ಗೆ ಮರ ಬೆಳೆಸಬೇಕು ಎಂದು ತಾಕೀತು ಮಾಡಿದೆ. 3,040 ಮರಗಳಿಗೆ ಬದಲಾಗಿ 9,120 ಮರ ಬೆಳೆಸಬೇಕು. ರಾಜ್ಯ ಅರಣ್ಯ ಇಲಾಖೆ ಷರತ್ತುಗಳನ್ನು ಪಾಲಿಸಬೇಕು. ಸಸಿ ನೆಟ್ಟ ನಂತರವೇ ಗುತ್ತಿಗೆದಾರನಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಕನ್ನಡ ಭಾಷೆ ಕಲಿಕೆ ಕಡ್ಡಾಯವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ 4ನೇ ತರಗತಿ ವಿದ್ಯಾರ್ಥಿ
ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಕರ್ನಾಟಕ ಸರ್ಕಾರ ಘೋಷಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಅರ್ಜಿದಾರ ಕೀರ್ತನ್ ಸುರೇಶ್ 2015ರ ಕನ್ನಡ ಕಲಿಕೆ ಕಡ್ಡಾಯ ಕಾಯ್ದೆಯ ವಿರುದ್ಧ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾನೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್​ಇ) ಮತ್ತು ಇಂಡಿಯನ್ ಸರ್ಟಿಫಿಕೆಟ್ ಆಫ್ ಸೆಕೆಂಡರಿ ಎಜುಕೇಷನ್ (ಐಸಿಎಸ್​ಇ) ಪಠ್ಯಕ್ರಮವಿರುವ ಶಾಲೆಗಳಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬೋಧಿಸಲು ನಿಯಮ ಜಾರಿ ಮಾಡಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಕೋರ್ಟ್ ಮೊರೆ ಹೋಗಿದ್ದಾನೆ.

2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್​ಇ, ಐಸಿಎಸ್​ಇ ಸಿಲೆಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು ಅಳವಡಿಕೆ ಮಾಡಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದಾನೆ. ಈ ಕುರಿತು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ 3 ವಾರಗಳ ಬಳಿಕ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.

ಇದನ್ನೂ ಓದಿ: ಶಾಲೆಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ 4ನೇ ತರಗತಿ ವಿದ್ಯಾರ್ಥಿ

ಇದನ್ನೂ ಓದಿ: ‘ತುಂಬಾ ಖುಷಿಯಾಗಿದೆ’: ಭಾರತದ ಕೊವಿಡ್ ಪರಿಹಾರ ಯೋಜನೆಯನ್ನು ಶ್ಲಾಘಿಸಿದ ಸುಪ್ರೀಂಕೋರ್ಟ್

Published On - 9:48 pm, Thu, 23 September 21