AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಭಾರಿ ಮಳೆಯಿಂದ ಗುಡ್ಡ ಕುಸಿದು 7 ಜನ ದುರ್ಮರಣ

Ankola Landslide in NH 66: ಕಳೆದ 15 ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಭಾರಿ ಮಳೆಗೆ ಇಂದು (ಜು.16) ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಬೃಹತ್​ ಗುಡ್ಡ ಕುಸಿದಿದ್ದು, ಏಳು ಜನ ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ.

ಉತ್ತರ ಕನ್ನಡ: ಭಾರಿ ಮಳೆಯಿಂದ ಗುಡ್ಡ ಕುಸಿದು 7 ಜನ ದುರ್ಮರಣ
ಗುಡ್ಡ ಕುಸಿತ
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ|

Updated on:Jul 16, 2024 | 2:53 PM

Share

ಕಾವೇರಿ, ಜುಲೈ 16: ಉತ್ತರ ಕನ್ನಡ (Uttar Kannada) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ (Ankola) ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್​ ಗುಡ್ಡ ಕುಸಿದು ಬಿದ್ದು (Hill Collapse) ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ಮಣ್ಣಿನಡಿ 9 ಜನ ಸಿಲುಕಿದ್ದಾರೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ಬೊಮ್ಮಯ್ಯ ನಾಯ್ಕ (45), ಶಾಂತಿ ಲಕ್ಷ್ಮಣ ನಾಯ್ಕ (35), ಮೃತ ದೇಹ ಪತ್ತೆ, ಆವಾತಿಕಾ ಲಕ್ಷ್ಮಣ ನಾಯ್ಕ (04), ಉಪೇಂದ್ರ ನಾಯ್ಕ(50), ರೋಷನ್ ಲಕ್ಷ್ಮಣ ನಾಯ್ಕ (10) ಜಗ್ನನಾಥ ನಾಯ್ಕ (50), ಸಣ್ಣಿ ಹನುಮಂತ ಗೌಡ (65) ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: ಭಾರೀ ಮಳೆ: ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಎಲ್​​ಪಿಜಿ‌ ಟ್ಯಾಂಕರ್ ಮೇಲೆ ಕುಸಿದ ಗುಡ್ಡ

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನಲ್ಲಿನ ಗುಡ್ಡದ ಬಳಿ ಟ್ಯಾಂಕರ್​ ನಿಲ್ಲಿಸಿ, ಚಾಲಕ ಹಾಗೂ ಕ್ಲೀನರ್ ಅಲ್ಲಿಯೇ ಚಹಾ ಕುಡಿಯುತ್ತಿದ್ದರು. ಈ ವೇಳೆ ಧಿಡೀರನೆ ಬೃಹತ್​ ಗುಡ್ಡ ಕುಸಿದಿದೆ. ಗುಡ್ಡ ಕುಸಿತ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಒಂಬತ್ತು ಜನ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲಾಡಳಿತದಿಂದ ಹೆದ್ದಾರಿ‌ ಮೇಲೆನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.

ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಕಾರಿನಲ್ಲಿ ಒಂದು ಕುಟುಂಬ ಹೋಗುತಿತ್ತು. ಹಠಾತ್ ಆಗಿ ಕಾರು ನಿಲ್ಲಿಸಿ ನಿಧಾನಕ್ಕೆ ಹಿಂದೆ ತೆಗೆದುಕೊಳ್ಳುತ್ತಿದ್ದರು. ನಾನು ಹಿಂದಿನ ಗಾಡಿಯಲ್ಲಿ ಇದ್ದೆ. ಇಳಿದು ಬಂದು ನೋಡಿದೆ. ಗುಡ್ಡ ಕುಸಿಯುತ್ತಾ ಇತ್ತು. ದಿಢೀರಾಗಿ ಅಲ್ಲಿಂದ ಬೇರೆ ಕಡೆ ಹಾರಿದೆ. ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು. ಇಲ್ಲಿ ಒಂದು ಟೀ ಅಂಗಡಿ ಇತ್ತು. ಟಿ ಅಂಗಡಿಯಲ್ಲಿ ನಾಲ್ಕು ಜನ ಇದ್ದರು. ಗ್ಯಾಸ್ ಟ್ಯಾಂಕರ ಕೂಡ ಇಲ್ಲೇ ನಿಲ್ಲಿಸಿದ್ದರು. ಗ್ಯಾಸ್ ಟ್ಯಾಂಕರ್ ಕೆಳಗೆ ನದಿಗೆ ಬಿದ್ದಿದೆ. ಕಾರು ಮತ್ತು ಟೀ ಅಂಗಡಿಯಲ್ಲಿದ್ದವರು ಸೇರಿ ಸುಮಾರು ಒಂಬತ್ತು ಜನ ಮಣ್ಣಿನಡಿ ಸಿಲುಕಿದ್ದಾರೆ ಎಂದು ಪ್ರತ್ಯಕ್ಷದರ್ಶಿ ರಾಜು ಎಂಬವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Tue, 16 July 24