AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ 4, ಉಡುಪಿ 2 ತಾಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಜಿಲ್ಲೆಯ ಕೆಲ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯ ಎರಡು ತಾಲೂಕುಗಳಲ್ಲೂ ಸಹ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ತಾಲೂಕುಗಳಲ್ಲಿ ರಜೆ ನೀಡಲಾಗಿದೆ ಎನ್ನುವುದನ್ನು ತಿಳಿದುಕೊಳ್ಳಿ.

ಉತ್ತರ ಕನ್ನಡದ 4, ಉಡುಪಿ 2 ತಾಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತರೆ
| Updated By: ರಮೇಶ್ ಬಿ. ಜವಳಗೇರಾ|

Updated on:Jul 05, 2024 | 8:03 PM

Share

ಕಾರವಾರ, (ಜುಲೈ 05): ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ(ಜುಲೈ 06) ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಆದ್ರೆ, ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ  ಶಾಲಾ ಕಾಲೇಜ್​ ಗೆ ರಜೆ ಇಲ್ಲ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜಿಲ್ಲಾಡಳಿ ಕಾಳಜಿ ಕೇಂದ್ರಗಳಲ್ಲಿ ತೆರೆದಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ 35 ಜನರ ಎರಡು NDRF ತಂಡ ಸಹ ಉತ್ತರ ಕನ್ನಡ ಜಿಲ್ಲೆಗೆ ಬಂದಿದೆ.

ಇದನ್ನೂ ಓದಿ: ಉತ್ತರ ಕನ್ನಡ, ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ: ಮಲೆನಾಡು, ಕರಾವಳಿಯಲ್ಲಿ 3 ಸಾವು

ಮಳೆಯಿಂದ ಸಮಸ್ಯೆಗೆ ಸಹಾಯವಾಣಿ

ಇನ್ನು ಜಿಲ್ಲೆಯಲ್ಲಿ 439 ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಾಧ್ಯತೆಯ ಬಗ್ಗೆ ಗುರುತು ಮಾಡಲಾಗಿದೆ. ಪ್ರವಾಹವನ್ನು ಎದುರಿಸಲು ಕಂದಾಯ ಇಲಾಖೆಯ ತಂಡ ತಯಾರಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಕೂಡ ತೆರೆಯಲಾಗಿದೆ. ಮಳೆಯ ಸಮಸ್ಯೆ ಸಂಭವಿಸಿದಾಗ 1950ಸಂಖ್ಯೆಗೆ ಜನರು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಒಳನಾಡು ಸೇರಿ ಮಲೆನಾಡು, ಕರಾವಳಿಯಲ್ಲಿ ಮಳೆ ಅಬ್ಬರಿಸುತ್ತಿದೆ. ಇಂದು ಶುಕ್ರವಾರವೂ ಸಹ ಹಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರ ಮುಂದುರಿದಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ತಾಲೂಕುಗಳಲ್ಲಿ ರಜೆ ಘೋಷಣೆ

ಇನ್ನು ಉಡುಪಿಯಲ್ಲೂ ಭಾರೀ ಮಳೆಯಾಗುತ್ತಿರುವುದುರಿಂದ ಮುಂಜಾಗ್ರತಾವಾಗಿ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಆದೇಶ ಹೊರಡಿಸಿದ್ದಾರೆ.

ಶಿರೂರು ಸಮೀಪ ಗುಡ್ಡ ಕುಸಿಯುವ ಭೀತಿ

ಉಡುಪಿಯ ಶಿರೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಬೈಂದೂರು ತಾಲೂಕು, ಶಿರೂರು ಸಮೀಪದಲ್ಲಿ ಗುಡ್ಡ ಜರಿಯುವ ಸಾಧ್ಯತೆ ಇದೆ. ಐಆರ್‌ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಶತಶಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿತ್ತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಗುಡ್ಡ ಜರಿಯುವ ಭೀತಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Fri, 5 July 24