ಉತ್ತರ ಕನ್ನಡ: ಕೆಎಸ್‌ಆರ್‌ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ದಾರುಣ ಸಾವು
ಅಪಘಾತದ ಕುರಿತು ಎಷ್ಟೇ ಜಾಗೃತಿ ಮೂಡಿಸಿದರು, ಚಾಲಕರ ಅಜಾಗರೂಕತೆಯಿಂದ ದುರ್ಘಟನೆಗಳು ಸಂಭವಿಸುತ್ತಲೇ ಇರುತ್ತದೆ. ಅದರಂತೆ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ(Honnavar) ಮಂಕಿಯಲ್ಲಿ ಕೆಎಸ್‌ಆರ್‌ಟಿಸಿ(KSRTC) ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ.
ಉತ್ತರ ಕನ್ನಡ, ಫೆ.29: ಕೆಎಸ್‌ಆರ್‌ಟಿಸಿ(KSRTC) ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ(Honnavar) ಮಂಕಿಯಲ್ಲಿ ನಡೆದಿದೆ. ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ರಾಜು ಆಚಾರಿ (17) ಮೃತ ರ್ದುದೈವಿಗಳು. ಮಂಕಿ ಜಾತ್ರೆ ಪೇಟೆಗೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಬಸ್, ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಕೂಡಲೇ ಭಟ್ಕಳದ ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ತಾಯಿ-ಮಗಳು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹೊನ್ನಾವರ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಟೋಲ್ ಗೇಟ್ ಬಳಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ನಡೆದಿದೆ. ಹೈದರಾಬಾದ್ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಬೊಲೆರೊ ವಾಹನಕ್ಕೆ ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ. ಕೂಡಲೇ ಗಾಯಾಳುಗಳಿಗೆ ಗಂಗಾವತಿ ಮತ್ತು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ: ಮಾಘ ಹುಣ್ಣಿಮೆಯಂದು ಗಂಗಾ ಸ್ನಾನಕ್ಕೆ ತೆರಳಿದ್ದ 22 ಮಂದಿ ದುರ್ಮರಣ
ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಯಡದಾಳಿನಲ್ಲಿ ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್(23) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಪರಿಕ್ಷೇಯಲ್ಲಿ ಫೇಲ್ ಆಗಿದ್ದಕ್ಕೆ ಅದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಇನ್ನು ಮೃತ ಕಾರ್ತಿಕ್ ಸೇನೆಗೆ ಸೇರಬೇಕೆಂದು 2 ವರ್ಷದಿಂದ ಪ್ರಯತ್ನಿಸುತ್ತಿದ್ದ. ಆದರೆ, ಫೇಲ್ ಆಗಿದ್ದಕ್ಕೆ ಆತ್ಮಹತ್ಯೆಯ ದಾರಿ ಹಿಡಿದಿದ್ದು ದುರಂತ. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:44 pm, Thu, 29 February 24