ಪರೇಶ್ ಮೇಸ್ತಾ ಸಾವು ಪ್ರಕರಣ: ಪರೇಶ್ ಮೇಸ್ತಾ ತಂದೆ ಕಮಲಾಕರ ಮೆಸ್ತಾರಿಂದ ಮರು ತನಿಖೆಗೆ ಒತ್ತಾಯ
ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಒತ್ತಾಯ
ಉತ್ತರ ಕನ್ನಡ: ಹೊನ್ನಾವರದ ಪರೇಶ್ ಮೇಸ್ತಾ (Paresh Mesta) ಸಾವಿನ ಪ್ರಕರಣದ ಮರು ತನಿಖೆ ಮಾಡಿ ಎಂದು ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಒತ್ತಾಯ ಮಾಡಿದ್ದಾರೆ. ಪರೇಶ್ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ (CBI) ಬಿ ರಿಪೋರ್ಟ್ನಲ್ಲಿ ಬಹಿರಂಗಗೊಂಡಿತ್ತು. ಈ ಹಿನ್ನೆಲೆ ಕಮಲಾಕರ ಮೆಸ್ತಾ ಪ್ರಕರಣದ ಮರು ತನಿಖೆ ನಡೆಸುವಂತೆ ನಿನ್ನೆ (ಅ. 20) ಬೆಂಗಳೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ಕೊಟ್ಟಿದ್ದಾರೆ.
ಘಟನೆ ನಡೆದು 4 ತಿಂಗಳ ಬಳಿಕ ಸಿಬಿಐ ತನಿಖೆಗೆ ನೀಡಲಾಗಿತ್ತು. ಇದರಿಂದ ಕಮಲಾಕರ ಮೇಸ್ತಾ ಅಸಮಾಧಾನ ವ್ಯಕ್ತಪಡಿಸಿದ್ದರು. ಪರೇಶ್ ಮೇಸ್ತಾ ಕುಟುಂಬದ ಪರವಾಗಿ ನಮ್ಮ ಸರ್ಕಾರ ಇರುತ್ತೆ. ಶೀಘ್ರದಲ್ಲೇ ಮೇಸ್ತಾ ಪ್ರಕರಣ ಮರು ತನಿಖೆಗೆ ನೀಡಲಾಗುವುದು ಎಂದು ಕಾರವಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ