ಪರೇಶ್ ಮೇಸ್ತಾ ಸಾವು ಪ್ರಕರಣ: ಪರೇಶ್ ಮೇಸ್ತಾ ತಂದೆ ಕಮಲಾಕರ ಮೆಸ್ತಾರಿಂದ ಮರು ತನಿಖೆಗೆ ಒತ್ತಾಯ

| Updated By: ವಿವೇಕ ಬಿರಾದಾರ

Updated on: Oct 21, 2022 | 5:01 PM

ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಒತ್ತಾಯ

ಪರೇಶ್ ಮೇಸ್ತಾ ಸಾವು ಪ್ರಕರಣ: ಪರೇಶ್ ಮೇಸ್ತಾ ತಂದೆ ಕಮಲಾಕರ ಮೆಸ್ತಾರಿಂದ ಮರು ತನಿಖೆಗೆ ಒತ್ತಾಯ
ಪರಮೇಶ ಮೇಸ್ತ
Follow us on

ಉತ್ತರ ಕನ್ನಡ: ಹೊನ್ನಾವರದ ಪರೇಶ್ ಮೇಸ್ತಾ (Paresh Mesta) ಸಾವಿನ ಪ್ರಕರಣದ ಮರು ತನಿಖೆ ಮಾಡಿ ಎಂದು ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಒತ್ತಾಯ ಮಾಡಿದ್ದಾರೆ. ಪರೇಶ್ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ (CBI) ಬಿ ರಿಪೋರ್ಟ್​ನಲ್ಲಿ ಬಹಿರಂಗಗೊಂಡಿತ್ತು. ಈ ಹಿನ್ನೆಲೆ ಕಮಲಾಕರ ಮೆಸ್ತಾ ಪ್ರಕರಣದ ಮರು ತನಿಖೆ ನಡೆಸುವಂತೆ ನಿನ್ನೆ (ಅ. 20) ಬೆಂಗಳೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ಕೊಟ್ಟಿದ್ದಾರೆ.

ಘಟನೆ ನಡೆದು 4 ತಿಂಗಳ ಬಳಿಕ ಸಿಬಿಐ ತನಿಖೆಗೆ ನೀಡಲಾಗಿತ್ತು. ಇದರಿಂದ ಕಮಲಾಕರ ಮೇಸ್ತಾ ಅಸಮಾಧಾನ ವ್ಯಕ್ತಪಡಿಸಿದ್ದರು. ಪರೇಶ್​ ಮೇಸ್ತಾ ಕುಟುಂಬದ ಪರವಾಗಿ ನಮ್ಮ ಸರ್ಕಾರ ಇರುತ್ತೆ. ಶೀಘ್ರದಲ್ಲೇ ಮೇಸ್ತಾ ಪ್ರಕರಣ ಮರು ತನಿಖೆಗೆ ನೀಡಲಾಗುವುದು ಎಂದು ಕಾರವಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ