ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ

ಹೊನ್ನಾವರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಸಿಬ್ಬಂದಿ ತಲೆದಂಡವಾಗಿದೆ.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ
ಹೊನ್ನಾವರ ಪೊಲೀಸ್ ಠಾಣೆ
Follow us
ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 10:52 AM

ಉತ್ತರ ಕನ್ನಡ: ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ(prisoner suicide) ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ (Honnavar Police Station) ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ನಿನ್ನೆ (ಜೂನ್ 24) ಬಿಹಾರ ಮೂಲದ ವ್ಯಕ್ತಿ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈ ಪಿಎಸ್​ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾದ ಮಹಾವೀರ, ರಮೇಶ್, ಸಂತೋಷ್ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದರು. ಆ ವೇಳೆ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ದುರದೃಷ್ಟವಶಾತ್ ಅಷ್ಟರಾಗಲೇ ಆರೋಪಿ ಮೃತಪಟ್ಟಿದ್ದ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ಉತ್ತರ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್