ವಿಚಿತ್ರ ಘಟನೆ: ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!

ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುವವರು ಚಾಲಕ ಸೇರಿದಂತೆ ಸೀಟ್ ಬೆಲ್ಟ್ ಧರಿಸಬೇಕು ಎಂಬ ಮುಂತಾದ ಸಂಚಾರಿ ನಿಯಮಗಳು ಸಾಮಾನ್ಯ. ಜೊತೆಗೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡ ಕೂಡ ಕಟ್ಟಬೇಕಾಗುತ್ತದೆ. ಆದ್ರೆ, ಟಿಪ್ಪರ್ ಲಾರಿ ಡ್ರೈವರ್​ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ಹಾಕಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ವಿಚಿತ್ರ ಘಟನೆ: ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ರಮೇಶ್ ಬಿ. ಜವಳಗೇರಾ

Updated on:May 24, 2024 | 9:59 PM

ಕಾರವಾರ, (ಮೇ 24): ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು (honnavar traffic Police) ವಿಥೌಟ್​ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕಂದ್ರೆ ರಶೀದಿಯಲ್ಲಿ ಹಾಕಿರುವ ದಂಡ ವಿಥೌಟ್​ ಹೆಲ್ಮೆಟ್​ಗೆ. ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ. ಟಿಪ್ಪರ್​ ಚಾಲನೆ ಮಾಡುತ್ತೇನೆ ಎಂದು ಪೊಲೀಸರನ್ನ ಪ್ರಶ್ನಿಸಿದ್ದಾರೆ. ಹೇ ಅದೆಲ್ಲಾ ಇರುತ್ತೆ ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ.

ಮಾವಿನ ಖುರ್ವದ ವಿನುತಾ ವಿನೋದ್ ನಾಯ್ಕ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿಗೆ ಚಂದ್ರಕಾಂತ್ ಹಳ್ಳೇರ ಚಾಲಕರಾಗಿದ್ದು, ಇಂದು ಮರಳು ತುಂಬಿದ ಲಾರಿಯನ್ನು ಚಾಲನೆ ಮಾಡಿಕೊಂಡು ಹೋಗುವಾಗ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದಾರೆ. ಈ ವೇಳೆ ಸಮವಸ್ತ್ರ ಧರಿಸದಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ದಂಡದ ರಶೀದಿ ಎಲ್ಲೆಡೆ ವೈರಲ್ ಆಗಿದೆ.

ಇದನ್ನೂ ಓದಿ: ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಲಾಯಿಸಿದ NWKRTC ಚಾಲಕ ಸಸ್ಪೆಂಡ್

ಲಾರಿ ಡ್ರೈವರ್​ಗೆ ವಿಥೌಟ್ ಹೆಲ್ಮೆಟ್​ ದಂಡ ಹಾಕಿರುವ ರಶೀದಿ ವೈರಲ್ ಆಗಿದ್ದು ಇದಕ್ಕೆ ನೆಟ್ಟಿಗರು ನಾನಾ ರೀತಿಯಾಗಿ ಟ್ರೋಲ್​ ಮಾಡುತ್ತಿದ್ದಾರೆ.  ಹೊನ್ನಾವರ ಸಂಚಾರಿ ಪೊಲೀಸರು ಹೊಸದಾಗಿ ಟಿಪ್ಪರ್ ಚಾಲಕರಿಗೆ ಹೆಲ್ಮೆಟ್​ ಕಡ್ಡಾಯ ಮಾಡಲು ಹೊರಟಿರುವಂತೆ ಕಾಣುತ್ತಿದೆ. ಪೊಲೀಸರೇ ನೀಡಿರುವ ರಶೀದಿ ಪ್ರಕಾರ ಇನ್ಮುಂದೆ ಹೊನ್ನಾವರದಲ್ಲಿ ಟಿಪ್ಪರ್​ ಓಡಿಸುವ ಚಾಲಕರು ಕೂಡ ಕಡ್ಡಾಯವಾಗಿ ಹೆಲ್ಮೆಟ್​ ಧರಿಸದೇ ಇದ್ದರೆ ದಂಡ ಬೀಳುವುದಂತೂ ಗ್ಯಾರಂಟಿ ಆಗುವಂತಿದೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Fri, 24 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ