AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ ಪತಿ! ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಾಕ್ಷಸೀ ಕೃತ್ಯ

Uttara Kannada News: ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕುಟುಂಬಸ್ಥರನ್ನು ನಂಬಿಸಲು ಯತ್ನಿಸಿದ್ದ ವ್ಯಕ್ತಿಯೊಬ್ಬನ ರಾಕ್ಷಸೀ ಕೃತ್ಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಬಳಿ ಘಟನೆ ನಡೆದಿದ್ದು, ಸದ್ಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಬಳಿಕ ಆರೋಪಿ ಗಣಪತಿ ನಾಯ್ಕ ಎಂಬಾತನನ್ನು ಬಂಧಿಸಲಾಗಿದೆ.

ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ ಪತಿ! ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಾಕ್ಷಸೀ ಕೃತ್ಯ
ಗಣಪತಿ ಮಂಜುನಾಥ ನಾಯ್ಕ ಹಾಗೂ ಮಂಗಲಾImage Credit source: tv9
ಅಶೋಕ್​ ಪೂಜಾರಿ
| Edited By: |

Updated on: Aug 29, 2026 | 7:25 AM

Share

ಮುಖ್ಯಾಂಶಗಳು

  • ಪತ್ನಿಯ ಕೊಲೆ ಮಾಡಿ ಹೃದಯಾಘಾತದ ಕಥೆ ಕಟ್ಟಿದ್ದ ಪತಿ
  • ಸಿಸಿಟಿವಿ ಪರಿಶೀಲನೆಯಿಂದ ಬಯಲಾದ ಸತ್ಯ
  • ಮೂರು ವರ್ಷದ ಮಗು ಅನಾಥ

ಕಾರವಾರ, ಆಗಸ್ಟ್ 29: ಪತ್ನಿಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ್ದ ಪತಿಯೊಬ್ಬನ ರಾಕ್ಷಸೀ ಕೃತ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಮಲಗಿದ್ದ ಪತ್ನಿಯ ಬಾಯಿ-ಮೂಗು ಒತ್ತಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ವರ್ಷದ ಮಗು ತನ್ನ ತಾಯಿ-ತಂದೆ ಇಬ್ಬರನ್ನೂ ಕಳೆದುಕೊಂಡು ಅನಾಥವಾಗಿದೆ.

ಹೃದಯಾಘಾತದ ಕಥೆ ಕಟ್ಟಿದ್ದ ಪತಿ

ಮಂಕಿ ಗ್ರಾಮದ 27 ವರ್ಷದ ಮಂಗಲಾ ಕೊಲೆಯಾದ ಮಹಿಳೆ. ಆಕೆಯ ಪತಿ ಗಣಪತಿ ಮಂಜುನಾಥ ನಾಯ್ಕ ಕೊಲೆ ಆರೋಪ ಎದುರಿಸುತ್ತಿದ್ದಾನೆ. ದಂಪತಿ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅಲ್ಲದೆ, ಗಣಪತಿ ನಾಯ್ಕ ಕುಡಿತದ ಚಟ ಹೊಂದಿದ್ದು, ಕೈಗೆ ಬರುತ್ತಿದ್ದ ಹಣವನ್ನು ಖರ್ಚು ಮಾಡುತ್ತಿದ್ದ ಎನ್ನಲಾಗಿದೆ.

ಮಧ್ಯರಾತ್ರಿ ಪತ್ನಿಯ ಕೊಲೆ

ಆಗಸ್ಟ್ 25ರ ಮಧ್ಯರಾತ್ರಿ ದಂಪತಿ ನಡುವೆ ಗಲಾಟೆ ನಡೆದಿದೆ. ರಾತ್ರಿ 2 ಗಂಟೆಯ ಬಳಿಕ ಕೋಣೆಯಲ್ಲಿ ಮಲಗಿದ್ದ ಮಂಗಲಾಳ ಮೇಲೆ ಗಣಪತಿ ನಾಯ್ಕ ಹಲ್ಲೆ ನಡೆಸಿದ್ದಾನೆ. ಬಾಯಿ-ಮೂಗು ಒತ್ತಿ ಹಿಡಿದು, ಕುತ್ತಿಗೆ ಹಿಸುಕಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿ ಮೃತಪಟ್ಟ ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿ ಹೊಸ ಕಥೆ ಕಟ್ಟಿದ್ದಾನೆ. ಮನೆಯಲ್ಲಿದ್ದ ತಂದೆ-ತಾಯಿಗೆ ಮಂಗಲಾಳಿಗೆ ಹೃದಯಾಘಾತವಾಗಿದೆ ಎಂದು ಹೇಳಿದ್ದಾನೆ. ಬಳಿಕ ಆಕೆಯ ಕುಟುಂಬಸ್ಥರಿಗೂ ಕರೆ ಮಾಡಿ ಇದೇ ವಿಚಾರ ತಿಳಿಸಿದ್ದಾನೆ.

ಸಿಸಿಟಿವಿ ದೃಶ್ಯಗಳಿಂದ ಬಯಲಾಯ್ತು ಸತ್ಯ

ತನ್ನದೇ ಆಟೋ ರಿಕ್ಷಾದಲ್ಲಿ ಮಂಗಲಾಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಪ್ರಾಣಪಕ್ಷಿ ಹಾರಿ ಹೋಗಿದ್ದರಿಂದ ವಾಪಾಸು ಮನೆಗೆ ಕರೆದುಕೊಂಡು ಬಂದಿರುವುದಾಗಿ ಆರೋಪಿ ಹೇಳಿದ್ದಾನೆ. ಇದರಿಂದ ಅನುಮಾನಗೊಂಡ ಮಂಗಲಾ ಅವರ ಸಹೋದರಿ ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರಂಭದಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಮನೆಯ ಪಕ್ಕದ ಕಟ್ಟಡದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿ ಆಟೋವನ್ನು ಹೊರಗೆ ತೆಗೆದುಕೊಂಡು ಹೋಗಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ ಗಣಪತಿ ನಾಯ್ಕನ ಮೇಲಿನ ಅನುಮಾನ ಮತ್ತಷ್ಟು ಬಲಗೊಂಡಿದೆ.

ಕೊಲೆ ಮಾಡಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡ ಆರೋಪಿ

ಗಣಪತಿ ನಾಯ್ಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ತಾಯಿ ಕೊಲೆಯಾಗಿದ್ದು, ತಂದೆ ಜೈಲು ಸೇರಿರುವುದರಿಂದ ಏನೂ ಅರಿಯದ ಪುಟ್ಟ ಮಗು ಇದೀಗ ಅಜ್ಜ-ಅಜ್ಜಿಯ ಆರೈಕೆಯಲ್ಲಿ ಬೆಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ