ಕಾರವಾರ: ಕತ್ತು ಸೀಳಿ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಪತಿ, ಎರಡು ಮಕ್ಕಳು ಅನಾಥ

"ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದ್ರೆ, ಈ ದಂಪತಿ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಹೌದು...ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ, ತನ್ನ ಪತ್ನಿಯನ್ನು ಬೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ಇದರಿಂದ ಎರಡು ಮಕ್ಕಳು ಅನಾಥವಾಗಿವೆ.

ಕಾರವಾರ: ಕತ್ತು ಸೀಳಿ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಪತಿ, ಎರಡು ಮಕ್ಕಳು ಅನಾಥ
Updated By: ರಮೇಶ್ ಬಿ. ಜವಳಗೇರಾ

Updated on: Oct 18, 2023 | 8:11 AM

ಕಾರವಾರ, (ಅಕ್ಟೋಬರ್ 18): ಕೌಟುಂಬಿಕ ಕಲಹ ಹಿನ್ನೆಲೆ ಪತಿ(Husband) ತನ್ನ ಹೆಂಡತಿಯ (Wife) ಕತ್ತು ಸೀಳಿ ಭೀಕರವಾಗಿ ಕೊಲೆ (murder) ಮಾಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. ನಂದಿನಿ(30) ಕೊಲೆಯಾದ ಮಹಿಳೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ಓರ್ವ ಪುತ್ರ ಹಾಗೂ ಮಗಳೊಂದಿಗೆ ಕಳೆದ 3 ದಿನಗಳಿಂದ ಸಬ್ಬತ್ತಿ ಕ್ರಾಸ್‌ನಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ಆದ್ರೆ, ಅದೇನಾಯ್ತೋ ಏನು ಇಬ್ಬರ ನಡುವೆ ಗಲಾಟೆ ನಡೆದಿದ್ದು, ಜಗಳದಲ್ಲಿ ಲೋಕೇಶ ನಾಯ್ಕ ಮಾರಕಾಸ್ತ್ರದಿಂದ ಪತ್ನಿಯ ಕುತ್ತಿಗೆ ಹೊಡೆದಿದ್ದಾನೆ. ಪರಿಣಾಮ ನಂದಿನಿ ರಕ್ತದ ಮಡುವಿನಲ್ಲೇ ಮನೆಯಿಂದ ಹೊರಗೆ ಓಡಿಬಂದು ನೆಲಕ್ಕೆ ಬಿದ್ದು ಪ್ರಾಣಬಿಟ್ಟಿದ್ದಾಳೆ.

ರಕ್ತದ ಮಡುವಿನಲ್ಲಿ ಬಿದ್ದ ಮಹಿಳೆಯನ್ನು ನೋಡಿ ಸ್ಥಳೀಯರು ಕುಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಸಿಪಿಐ ಸಂತೋಷ ಕಾಯ್ಕಿಣಿ ಮತ್ತು ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಳಿಕ ಆರೋಪಿ ಪತಿ ಲೋಕೇಶ ನಾಯ್ಕ‌ನನ್ನು ಖಾಸಗಿ ಹೋಟೆಲೊಂದರಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕೇಶ ನಾಯ್ಕ ಶಿಲ್ಪಿ ಕೆಲಸ ಮಾಡುತ್ತಿದ್ದರೆ, ನಂದಿನಿ ಮನೆಯಲ್ಲಿರುತ್ತಿದ್ದರು. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೀಕರ ಅಪಘಾತ: ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ, ನಾಲ್ವರು ದುರ್ಮರಣ

“ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದ್ರೆ, ಈ ದಂಪತಿ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ.  ಇನ್ನು  ಅತ್ತ ತಾಯಿ ಕೊಲೆಯಾದರೆ, ಇತ್ತ ತಂದೆ ಜೈಲು ಪಾಲಾಗಿದ್ದಾನೆ. ಇದರಿಂದ ಎರಡು ಮಕ್ಕಳು ಇದೀಗ ಅನಾಥವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ