AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ ಸಮೀಪದ 44 ರೆಸಾರ್ಟ್​​ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ

ಉತ್ತರ ಕನ್ನಡದ ಗೋಕರ್ಣ ಸಮೀಪ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (CRZ) ನಿಯಮ ಉಲ್ಲಂಘಿಸಿದ 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಕುಮಟಾ ತಹಶೀಲ್ದಾರ್ ಆದೇಶಿಸಿದ್ದಾರೆ. 16 ರೆಸಾರ್ಟ್‌ಗಳಿಗೆ ಹೈಕೋರ್ಟ್ ತಡೆಯಾಜ್ಞೆ ಇದ್ದರೆ, 7 ಸ್ವಯಂಪ್ರೇರಿತವಾಗಿ ತೆರವಾಗುತ್ತಿವೆ, ಉಳಿದ 21 ಸೀಜ್ ಆಗಲಿವೆ. ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.

ಗೋಕರ್ಣ ಸಮೀಪದ 44 ರೆಸಾರ್ಟ್​​ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ
ರೆಸಾರ್ಟ್ ತೆರವು ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ರೆಸಾರ್ಟ್ ಮಾಲೀಕರು ಮತ್ತು ಕಾರ್ಮಿಕರು ಪ್ರತಿಭಟನೆ ನಡೆಸಿದರು.Image Credit source: tv9
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Mar 09, 2026 | 11:17 AM

Share

ಕಾರವಾರ, ಮಾರ್ಚ್ 9: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (Coastal Regulation Zone/CRZ) ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ.

ಆದರೆ 44 ರೆಸಾರ್ಟ್‌ಗಳ ಪೈಕಿ 16 ರೆಸಾರ್ಟ್ ಮಾಲೀಕರು ಹೈಕೋರ್ಟ್‌ನಿಂದ ತಡೆಯಾಜ್ಞೆ ಪಡೆದಿದ್ದಾರೆ. ಈ ಕಾರಣದಿಂದಾಗಿ ಆ ರೆಸಾರ್ಟ್‌ಗಳನ್ನು ಈಗಿನ ಪರಿಸ್ಥಿತಿಯಲ್ಲಿ ತೆರವುಗೊಳಿಸಲಾಗುವುದಿಲ್ಲ.

ಇನ್ನುಳಿದ 28 ರೆಸಾರ್ಟ್‌ಗಳ ಪೈಕಿ 7 ರೆಸಾರ್ಟ್‌ಗಳನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ತೆರವು ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಉಳಿದ 21 ರೆಸಾರ್ಟ್‌ಗಳನ್ನು ತಾಲೂಕು ಆಡಳಿತ ಸೀಜ್ ಮಾಡಿ, ನಿಯಮಾನುಸಾರವಾಗಿ ತೆರವುಗೊಳಿಸುವ ಕ್ರಮ ಕೈಗೊಳ್ಳಲಿದೆ ಎಂದು ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಅನಧಿಕೃತ ರೆಸಾರ್ಟ್ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ BNS 163ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದುಬ್ಬನಸಶಿ, ಗಂಗೆಕೊಳ್ಳ ಹಾಗೂ ಭಾವಿಕೊಡ್ಲ ಗ್ರಾಮಗಳಲ್ಲಿ ಮಾರ್ಚ್ 9ರ ಬೆಳಗ್ಗೆ 10 ರಿದ 10ರ ಬೆಳಗ್ಗೆ 10 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಕುಮಟಾ ಸಹಾಯಕ ಆಯುಕ್ತ ಶ್ರವಣಕುಮಾರ ಈ ಆದೇಶ ಹೊರಡಿಸಿದ್ದಾರೆ.

ದುಬ್ಬನಸಶಿಯಲ್ಲಿ ಪ್ರತಿಭಟನೆ

ಇನ್ನೊಂದೆಡೆ ರೆಸಾರ್ಟ್ ತೆರವು ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ರೆಸಾರ್ಟ್ ಮಾಲೀಕರು ಮತ್ತು ಕಾರ್ಮಿಕರು ದುಬ್ಬನಸಶಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ, ‘ರೆಸಾರ್ಟ್ ತೆರವು ಮಾಡಲು ಬಿಡುವುದಿಲ್ಲ, ನಿಮ್ಮ ಜೊತೆ ನಾನು ಇದ್ದೇನೆ. ನ್ಯಾಯ ಸಿಗಬೇಕು’ ಎಂದು ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದರು.

ಇದನ್ನೂ ಓದಿ: “ನಮ್ಮನ್ನು ಮುಸ್ಲಿಂ, ಕ್ರಿಶ್ಚಿಯನ್ನರು ಸೋಲಿಸಿಲ್ಲ ಹಿಂದೂಗಳು ಸೋಲಿಸಿದ್ದು”: ಭಟ್ಕಳದಲ್ಲಿ ಅಬ್ಬರಿಸಿದ ಅನಂತಕುಮಾರ್ ಹೆಗಡೆದ

ಈ ಹಿನ್ನೆಲೆಯಲ್ಲಿ ಗೋಕರ್ಣ ಸಮೀಪದ ಕರಾವಳಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ತಾಲೂಕು ಆಡಳಿತ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?