ರೈಲಿನಲ್ಲಿ ಅಕ್ರಮ 2 ಕೋಟಿ ಹವಾಲಾ ಹಣ ಸಾಗಾಟ: ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 09, 2022 | 9:21 AM

ಆಸ್ತಿ ವಿವಾದ ಹಿನ್ನೆಲೆ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ನಡೆದಿರುವಂತಹ ಘಟನೆ ಜಿಲ್ಲೆಯ ಗೋಕಾಕ್ ನಗರದ ಕೋಳಿ ಸರ್ಕಲ್ ಬಳಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರೈಲಿನಲ್ಲಿ ಅಕ್ರಮ 2 ಕೋಟಿ ಹವಾಲಾ ಹಣ ಸಾಗಾಟ: ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ
ಅಕ್ರಮ 2 ಕೋಟಿ ಹವಾಲಾ ಹಣ ವಶ ಪಡಿಸಿಕೊಂಡ ಪೊಲೀಸ್​
Follow us on

ಕಾರವಾರ: ಅಕ್ರಮವಾಗಿ ರೈಲಿನಲ್ಲಿ 2 ಕೋಟಿ ಹವಾಲಾ ಹಣ ಸಾಗಿಸುತ್ತಿದ್ದ ಮನೋಹರ್ ಸಿಂಗ್@ಚೇನ್ ಸಿಂಗ್​ನನ್ನು ರೈಲ್ವೆ ಪೊಲೀಸರು ಬಂಧಿಸಿ, ಹಣ ಜಪ್ತಿ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಬಂಧನ ಮಾಡಿದ್ದು, ಮುಂಬೈನಿಂದ ಮಂಗಳೂರಿಗೆ ಆರೋಪಿ ಹವಾಲಾ ಹಣ ಸಾಗಿಸುತ್ತಿದ್ದ. ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹಣ ಸಾಗಿಸುತ್ತಿದ್ದಾಗ ದಾಳಿ ಮಾಡಿ, ರಾಜಸ್ಥಾನ ಮೂಲದ ಮನೋಹರ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮೂವರು ಸ್ವಾಮೀಜಿ ವೇಷಧಾರಿಗಳ ಬಂಧನ

ನೆಲಮಂಗಲ: ಸ್ವಾಮೀಜಿ ವೇಷಭೂಷಣ ತೊಟ್ಟು ಅನುಮಾನಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವಂತಹ ಘಟನೆ ಟಿ.ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. ಅರಸೀಕೆರೆಯ ರಾಮಯ್ಯ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ನಕಲಿ ಮಠಗಳ ಹೆಸರು ಹೇಳಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದರು. ನೇರ ಮನೆಗೆ ನುಗ್ಗುತ್ತಿದ್ದು, ಹಣ ಕೊಟ್ಟಿಲ್ಲ ಅಂದರೆ ನಿಂದಿಸಿತ್ತಿದ್ದರು. ವಾರಕ್ಕೊಮ್ಮೆ ಒಂದೊಂದು ಏರಿಯಾದಲ್ಲಿ ಗುರ್ತಿಸಿ ಕೊಳ್ಳುತ್ತಿದ್ದು, ಮಲ್ಲಸಂದ್ರಕ್ಕೆ ಬಂದು ದುಂಡಾ ವರ್ತನೆ ತೋರುತ್ತಿದ್ದಾಗಲೇ ಮೂವರನ್ನ ವಶಕ್ಕೆ ಪಡೆಯಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಜಗಳ: ಶಾಸಕರ ಬೆಂಬಲಿಗರಿಂದ ಹಲ್ಲೆ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ, ಮನೆಗೆ ನುಗ್ಗಿ ಶಾಸಕರ ಬೆಂಬಲಿಗರಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದ ಕುಷ್ಟಗಿಯ ಮಲ್ಕಾಪುರ ಗ್ರಾಮದಲ್ಲಿ ನಡೆದಿದೆ. ಸಂಗಪ್ಪ ಎನ್ನುವವರ ಮೇಲೆ ಹಲ್ಲೆಯಾಗಿದ್ದು, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಬೆಂಬಲಿಗರಿಂದ ಹಲ್ಲೆ ಆರೋಪ ಮಾಡಲಾಗಿದೆ. ಮನೆಗೆ ನುಗ್ಗಿ ಮನೆಮಂದಿ ಮೇಲೆ ಹಲ್ಲೆ ಮಾಡಿರುವ ಶಾಸಕರು ಬೆಂಬಲಿಗರು, ಹಲ್ಲೆಗೊಳಗಾದ ಸಂಗಪ್ಪ ಹಾಗೂ ಆತನ ಪತ್ನಿ ಜಯಶ್ರೀಯಿಂದ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿದ ಕುಷ್ಟಗಿ ಪೊಲೀಸರು, ಘಟನಾ ಸ್ಥಳಕ್ಕೆ ಸಿಪಿಐ ನಿಂಗಪ್ಪ, ಪಿಎಸ್​ಐ ಭೇಟಿ ಪರಿಶೀಲನೆ ಮಾಡಿದರು.

ಕಾಡಾನೆ ದಾಳಿಯಿಂದ ಆದಿವಾಸಿ ಸಾವು

ಮೈಸೂರು: ಕಾಡಾನೆ ದಾಳಿಯಿಂದ ಗಾಯಗೊಂಡ ಆದಿವಾಸಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಹಾಡಿಯಲ್ಲಿ ನಡೆದಿದೆ. ಆನೆಮಾಳ ಹಾಡಿಯ ಪುಟ್ಟಪ್ಪ (75) ಮೃತ ವ್ಯಕ್ತಿ. ಕಳೆದ ರಾತ್ರಿ ಕಾಡಾನೆ ದಾಳಿ ಮಾಡಿದ್ದು, ದಾಳಿಯಿಂದ‌ ಗಂಭೀರಗಾಯಗೊಂಡಿಂದ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಂತರಸಂತೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು ಮಾಡಲಾಗಿದೆ.

ಪಾದಚಾರಿ ಮಹಿಳೆಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ

ನೆಲಮಂಗಲ: ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ಅಪಘಾತ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ರಾಷ್ಟ್ರೀಯ ಹೆದ್ದಾರಿ 4ರ ಬಳಿ ನಡೆದಿದೆ. ದಾಸನಪುರದ ಗೌರಮ್ಮ(45)ಮೃತ ದುರ್ದೈವಿ. ಚಾಲಕನ ಸಮೇತವಾಗಿ ಬಸ್ ಸಂಚಾರಿ ಪೊಲೀಸರ ವಶಕ್ಕೆ ನೀಡಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದಾಗ ಘಟನೆ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ತಿ ವಿವಾದ ಹಿನ್ನೆಲೆ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಳಗಾವಿ: ಆಸ್ತಿ ವಿವಾದ ಹಿನ್ನೆಲೆ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ನಡೆದಿರುವಂತಹ ಘಟನೆ ಜಿಲ್ಲೆಯ ಗೋಕಾಕ್ ನಗರದ ಕೋಳಿ ಸರ್ಕಲ್ ಬಳಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಿರೋಜ್ ಮಾವರಕರ್ ಎಂಬ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಹಿರೋಜ್ ಮಾವರ್ಕರ್ ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.