ವಸತಿ ನಿಲಯದ ವಾರ್ಡನ್​ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಕೊಲೆ ಮಾಡುವುದಾಗಿ ಬೆದರಿಕೆ

ಇತ್ತೀಚೆಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ಕುಮಟಾ ತಾಲೂಕಿನ ಕೊಜಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ವಾರ್ಡನ್ ವಿರುದ್ದ ದೂರು ದಾಖಲಿಸಲಾಗಿದೆ.

ವಸತಿ ನಿಲಯದ ವಾರ್ಡನ್​ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಕೊಲೆ ಮಾಡುವುದಾಗಿ ಬೆದರಿಕೆ
ವಸತಿ ನಿಲಯದ ವಾರ್ಡನ್​ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 19, 2024 | 3:40 PM

ಉತ್ತರ ಕನ್ನಡ, ಸೆ.19: ಜಿಲ್ಲೆಯ ಕುಮಟಾ ತಾಲೂಕಿನ ಕೊಜಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ತನ್ನ ಬಗ್ಗೆ ಬಾಯಿ ಬಿಟ್ಟರೆ ಕೊಲೆ ಮಾಡುವುದಾಗಿ ವಾರ್ಡನ್ ಶಂಕರ ಪೊಳ ಎಂಬಾತ ಬೆದರಿಕೆವೊಡ್ಡಿದ್ದಾನೆ. ಇನ್ನು ವಾರ್ಡನ್ ಅಸಭ್ಯ ವರ್ತನೆ ಬಗ್ಗೆ ಸಂತ್ರಸ್ಥ ಮಹಿಳೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವಂತೆ.

ಪ್ರಕರಣ ದಾಖಲಿಸಿ ಮಾಧ್ಯಮಗಳ ಮುಂದೆ ಅಳಲು ತೊಡಿಕೊಂಡ ಮಹಿಳೆ

ಈ ಹಿನ್ನಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮಾಧ್ಯಮಗಳ ಮುಂದೆ ನೊಂದ ಮಹಿಳೆ ಅಳಲು ತೊಡಿಕೊಂಡಿದ್ದಾರೆ. ಸಂತ್ರಸ್ಥ ಮಹಿಳೆ ಕೂಜಳ್ಳಿಯ ವಸತಿ ಶಾಲೆಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ 7 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇದೀಗ ಕಳೆದ ಒಂದು ವರ್ಷದಿಂದ ವಾರ್ಡ​ನ್​ ಮೈ-ಕೈ ಮುಟ್ಟಿ ದೈಹಿಕವಾಗಿ ಅನುಕಂಪ ರಹಿತವಾಗಿ ನಡೆದುಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಕಾನ್ಸ್​​ಟೇಬಲ್​​ ವಿರುದ್ಧದ ಲೈಂಗಿಕ ಕಿರುಕುಳ ಕೇಸ್​ಗೆ ಬಿಗ್ ಟ್ವಿಸ್ಟ್​: ಉಲ್ಟಾ ಹೊಡೆದ ಮಹಿಳೆ

ವಾರ್ಡನ್ ವಿರುದ್ದ ದೂರು ದಾಖಲು

ಘಟನೆ ಬಗ್ಗೆ ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿಗೆ ಹಾಗೂ ಮಹಿಳಾ ಸಾಂತ್ವನ ಕೇಂದ್ರಕ್ಕೂ ದೂರು ನೀಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ನೊಂದ ಮಹಿಳೆ ನಿಲಯಪಾಲಕ ಶಂಕರ ಎಸ್.ಪೊಳ್ ವಿರುದ್ಧ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ದೂರಿನಲ್ಲಿ ‘ನನಗೆ ಸಹಕರಿಸದಿದ್ದರೆ ನಿನ್ನನ್ನು ಕೆಲಸದಿಂದ ತೆಗೆಯುವೆ ಹಾಗೂ ವಿಷಯವನ್ನು ಬೇರೊಬ್ಬರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಕುರಿತು ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ