ಉತ್ತರ ಕನ್ನಡ: ಸಮುದ್ರದಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; 40 ಜನರ ರಕ್ಷಣೆ

ಕುಮಟಾ(Kumta) ತಾಲೂಕಿನ ತದಡಿ ಬಳಿಯ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ ಘಟನೆ ನಡೆದಿದೆ. ಕೂಡಲೇ ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡದಿಂದ 40 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಅದೃಷ್ಟವಶಾತ್​ ಯಾವುದೇ ಸಾವು ಸಂಭವಿಸಿಲ್ಲ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡ: ಸಮುದ್ರದಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; 40 ಜನರ ರಕ್ಷಣೆ
ಸಮುದ್ರದಲ್ಲಿ ಪ್ರವಾಸಿಗರ ಬೋಟ್ ಪಲ್ಟಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 19, 2024 | 10:45 PM

ಉತ್ತರ ಕನ್ನಡ, ಮೇ.19: ಜಿಲ್ಲೆಯ ಕುಮಟಾ(Kumta) ತಾಲೂಕಿನ ತದಡಿ ಬಳಿಯ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ ಘಟನೆ ನಡೆದಿದೆ. ಕೂಡಲೇ ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡದಿಂದ 40 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಈ ಪ್ರವಾಸಿ ಬೋಟ್​ ಗಣೇಶ ಎಂಬುವವರಿಗೆ ಸೇರಿದ್ದು, ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ ಅವಘಡ ಸಂಭವಿಸಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು

ಉಡುಪಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲು ನಡೆದಿದೆ. ಮುಡ್ಡಾಯಿಗುಡ್ಡೆ ನಿವಾಸಿಗಳಾದ ಹರೀಶ್(48) ಹಾಗೂ ಹೃತೇಶ್(18) ಸಾವನ್ನಪ್ಪಿದ್ದಾರೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ: ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ

ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಮೆಳೇಕತ್ತಿಗನೂರು ಗ್ರಾಮದ ಬಳಿ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ಕೆಂಪಣ್ಣ(54) ಮೃತ ರ್ದುದೈವಿ. ದನ ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿದು ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 ವಿದ್ಯುತ್​ ತಂತಿ ತುಳಿದು ವ್ಯಕ್ತಿ ದುರ್ಮರಣ

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ವಿದ್ಯುತ್​ ತಂತಿ ತುಳಿದು ಇರ್ಷಾದ್(56) ಎಂಬಾತ ದುರ್ಮರಣ ಹೊಂದಿದ್ದಾರೆ. ರಾತ್ರಿ ಸುರಿದ ಗಾಳಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದೇ ಇರ್ಷಾದ್ ತುಳಿದು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ