Israel-Hamas War: ಮದುವೆ, ಮನರಂಜನೆ ರದ್ದು ಮಾಡಿ ಪ್ಯಾಲೆಸ್ಟೈನ್​ಗೆ ಹಣ ನೀಡುವಂತೆ ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕರೆ

ಯುದ್ಧ ಮುಗಿಯುವವರೆಗೆ ಭಟ್ಕಳದ ಮುಸ್ಲಿಮರು ಮದುವೆ, ಮನರಂಜನೆಯನ್ನು ರದ್ದು ಮಾಡುವಂತೆ ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕರೆ ನೀಡಿದೆ.

Israel-Hamas War: ಮದುವೆ, ಮನರಂಜನೆ ರದ್ದು ಮಾಡಿ ಪ್ಯಾಲೆಸ್ಟೈನ್​ಗೆ ಹಣ ನೀಡುವಂತೆ ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕರೆ
ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on:Oct 30, 2023 | 9:07 PM

ಕಾರವಾರ ಅ.30: ಪ್ಯಾಲೆಸ್ಟೈನ್ ಮೇಲೆ ಇಸ್ರೇಲ್ (Israel) ದಾಳಿ ಮಾಡಿದ್ದನ್ನು ಖಂಡಿಸಿ ಮುಸ್ಲಿಂ ಯೂಥ್ ಫೆಡರೇಶನ್ ಭಟ್ಕಳದ (Bhatkal) ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ರದ್ದು ಮಾಡಿದೆ. ಯುದ್ಧ ಮುಗಿಯುವವರೆಗೆ ಭಟ್ಕಳದ ಮುಸ್ಲಿಮರು (Muslim) ಮದುವೆ, ಮನರಂಜನೆಯನ್ನು ರದ್ದು ಮಾಡುವಂತೆ ಕರೆ ನೀಡಿದೆ. ಅವುಝ ಭಟ್ಕಳ ಕ್ರಿಕೆಟ್ ಲೀಗ್-5 ನವೆಂಬರ್​ 3 ರಿಂದ ಒಂದು ತಿಂಗಳಕಾಲ ಐಪಿಎಲ್ ಮಾದರಿಯಲ್ಲಿ ನಡೆಯಬೇಕಿತ್ತು. ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕಳೆದ ತಿಂಗಳು 200 ಆಟಗಾರರನ್ನು ಗುರುತಿಸಿ ಹರಾಜು ಹಾಕಿ 12 ತಂಡವನ್ನು ಆಯ್ಕೆ ಮಾಡಿತ್ತು. ಮುಸ್ಲಿಮರ ಹತ್ಯೆ ವಿರೋಧಿಸಿ ಕ್ರಿಕೇಟ್ ಪಂದ್ಯಾವಳಿಯನ್ನು ರದ್ದು ಮಾಡಲಾಗಿದೆ. ಹಣ ಉಳಿಸಿ ಪ್ಯಾಲೆಸ್ಟೈನ್​ಗೆ ಸಹಾಯ ಮಾಡಲು ಭಟ್ಕಳ ಮುಸ್ಲಿಮರಿಗೆ ಸಂಘಟನೆ ಮನವಿ ಮಾಡಿದೆ.

ಹಮಾಸ್ ಉಗ್ರರಿಗೆ ಜಯ ಸಿಗಲಿ ಎಂದ ಮಂಗಳೂರಿನ ಝಾಕಿರ್

ಇಸ್ರೇಲ್​ ಮತ್ತು ಪ್ಯಾಲೆಸ್ಟೈನ್​ನ ಹಮಾಸ್ ​ಉಗ್ರರ ನಡುವೆ ಯುದ್ಧ ಆರಂಭವಾಗಿದೆ. ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್​ನಲ್ಲಿ‌ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಹರಿಬಿಟ್ಟಿದ್ದನು. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್‌ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ “ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು” ಎಂದು ಕರೆದಿದ್ದನು.

ಇದನ್ನೂ ಓದಿ: ಇಸ್ರೇಲ್ ಯುದ್ಧದ ನಡುವೆ ಸಿಲುಕಿಕೊಂಡ  ಶಿವಮೊಗ್ಗದ ವ್ಯಕ್ತಿಗೆ ಧೈರ್ಯ ಹೇಳಿದ ಸಚಿವ ಮಧು ಬಂಗಾರಪ್ಪ

ಪ್ಯಾಲೆಸ್ಟೈನ್​, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ. ಹಮಾಸಿಗರು​​ ದೇಶ ಪ್ರೇಮಿ ಯೋಧರು. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸಬೇಕು ಎಂದು ಝಾಕಿರ್ ಹೇಳಿದ್ದನು. ಸಾಮಾಜಿಕ ಜಾಲತಾಣದಲ್ಲಿ ಝಾಕಿರ್ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿತ್ತು. ಹಿಂದೂ‌ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಝಾಕಿರ್​ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು.

ಪ್ಯಾಲೆಸ್ಟೈನ್ ​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕ

ಪ್ಯಾಲೆಸ್ತೀನ್​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಹೊಸಪೇಟೆಯ ಆಲಂ ಬಾಷಾ ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿತ್ತು. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದರು.

ಆಲಂ ಬಾಷಾ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ನಿವಾಸಿ ಆಗಿದ್ದು, ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್​ ಕೆಲಸ ಮಾಡುತ್ತಿದ್ದ. ವಾಟ್ಸಾಪ್​​​ ಸ್ಟೇಟಸ್​ನಲ್ಲಿ ಯುದ್ಧ ಪೀಡಿತ ಪ್ಯಾಲೆಸ್ತೀನ್ ಭಾವಚಿತ್ರ ಹಾಕಿ ವಿಡಿಯೋ ಹಂಚಿಕೊಂಡಿದ್ದು, ನಾವು ಪ್ಯಾಲೆಸ್ಟೈನ್ ಪರವಾಗಿದ್ದೇವೆ. ಪ್ಯಾಲೆಸ್ಟೈನ್ ಜಿಂದಾಬಾದ್ ಅಂತ ಬರೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 pm, Mon, 30 October 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ