AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಜೋಯಿಡಾ(Joida)ತಾಲೂಕಿನ ಚೌಕನಗಾಳಾಯದಲ್ಲಿ ದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ(Accident)ಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಅತಿವೇಗದ ಚಾಲನೆಯಿಂದ ಈ ದುರ್ಘಟನೆ ನಡೆದಿದ್ದು, ಜೊಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು
ಜೋಯಿಡಾ ಸ್ಕೂಟರ್​ ಅಪಘಾತ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jan 25, 2024 | 10:04 PM

Share

ಉತ್ತರ ಕನ್ನಡ, ಜ.25: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ(Accident)ಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ(Joida)ತಾಲೂಕಿನ ಚೌಕನಗಾಳಾಯದಲ್ಲಿ ನಡೆದಿದೆ. ದಾಂಡೇಲಿ ನಗರದ ರಾಕೇಶ್​ ಮಹಾದೇವಪ್ಪ ಬಡಿಗೇರ, ರಿತೇಶ್ ಸುಬ್ರಹ್ಮಣ್ಯ ನಾಯರ್ ಹಾಗೂ ಕೃಷ್ಣ ವಣ್ಣುರಾಯ ಹರಿಜನ ಮೃತ ಯುವಕರು. ಅತಿವೇಗದ ಚಾಲನೆಯಿಂದ ಈ ದುರ್ಘಟನೆ ನಡೆದಿದ್ದು, ಜೊಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೈಕ್​ಗೆ ಸ್ಕಾರ್ಪಿಯೋ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಬೀದರ್: ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ದೇಗುಲ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಸಿದ್ದಪ್ಪ(45) ಹಾಗೂ ಸುಖದೇವ(42) ಮೃತಪಟ್ಟ ದುರ್ದೈವಿಗಳು. ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ತಮಿಳುನಾಡು: 4 ವಾಹನಗಳು ಪರಸ್ಪರ ಡಿಕ್ಕಿ, ನಾಲ್ವರು ಸಾವು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಿಲಿಂಡರ್​​​ ಗ್ಯಾಸ್​​ ಲೀಕ್​​​ನಿಂದಾಗಿ ಮನೆಗೆ ಹೊತ್ತಿಕೊಂಡ ಬೆಂಕಿ

ಕೊಪ್ಪಳ: ತಾಲೂಕಿನ ಕುಷ್ಟಗಿ ನಗರದ ಗುತ್ತಿ ಬಸವೇಶ್ವರ ಬಳಿ ಸಿಲಿಂಡರ್​​​ ಗ್ಯಾಸ್​​ ಲೀಕ್​​​ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ನಿವೃತ್ತ ತಹಶೀಲ್ದಾರ್​​​, ಸಿ.ಎಂ. ಹಿರೇಮಠ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕುಟುಂಬದವರು ಮನೆಯಿಂದ ಹೊರಬಂದಿದ್ದಾರೆ. ಮನೆಯಲ್ಲಿ ಡ್ರಿಪ್​​ ಪೈಪ್​​​ ಸಂಗ್ರಹಿಸಿರುವ ಹಿನ್ನೆಲೆ ಹೊಗೆ ಹೆಚ್ಚಿತ್ತು. ಈ ಹಿನ್ನಲೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡಬೇಕಾಯಿತು. ಈ ಘಟನೆ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Thu, 25 January 24

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ