
ಉತ್ತರ ಕನ್ನಡ, ಜ.25: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ(Accident)ಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ(Joida)ತಾಲೂಕಿನ ಚೌಕನಗಾಳಾಯದಲ್ಲಿ ನಡೆದಿದೆ. ದಾಂಡೇಲಿ ನಗರದ ರಾಕೇಶ್ ಮಹಾದೇವಪ್ಪ ಬಡಿಗೇರ, ರಿತೇಶ್ ಸುಬ್ರಹ್ಮಣ್ಯ ನಾಯರ್ ಹಾಗೂ ಕೃಷ್ಣ ವಣ್ಣುರಾಯ ಹರಿಜನ ಮೃತ ಯುವಕರು. ಅತಿವೇಗದ ಚಾಲನೆಯಿಂದ ಈ ದುರ್ಘಟನೆ ನಡೆದಿದ್ದು, ಜೊಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೀದರ್: ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ದೇಗುಲ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಸಿದ್ದಪ್ಪ(45) ಹಾಗೂ ಸುಖದೇವ(42) ಮೃತಪಟ್ಟ ದುರ್ದೈವಿಗಳು. ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ತಮಿಳುನಾಡು: 4 ವಾಹನಗಳು ಪರಸ್ಪರ ಡಿಕ್ಕಿ, ನಾಲ್ವರು ಸಾವು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೊಪ್ಪಳ: ತಾಲೂಕಿನ ಕುಷ್ಟಗಿ ನಗರದ ಗುತ್ತಿ ಬಸವೇಶ್ವರ ಬಳಿ ಸಿಲಿಂಡರ್ ಗ್ಯಾಸ್ ಲೀಕ್ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ನಿವೃತ್ತ ತಹಶೀಲ್ದಾರ್, ಸಿ.ಎಂ. ಹಿರೇಮಠ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕುಟುಂಬದವರು ಮನೆಯಿಂದ ಹೊರಬಂದಿದ್ದಾರೆ. ಮನೆಯಲ್ಲಿ ಡ್ರಿಪ್ ಪೈಪ್ ಸಂಗ್ರಹಿಸಿರುವ ಹಿನ್ನೆಲೆ ಹೊಗೆ ಹೆಚ್ಚಿತ್ತು. ಈ ಹಿನ್ನಲೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡಬೇಕಾಯಿತು. ಈ ಘಟನೆ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:45 pm, Thu, 25 January 24