AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ನದಿ ಸೇತುವೆ ಕುಸಿತ ಪ್ರಕರಣ; ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು

ಶಿರೂರು ದುರಂತ ಮಾಸುವ ಮುನ್ನವೇ ಉತ್ತರ ಕನ್ನಡದಲ್ಲಿ ಇನ್ನೊಂದು ಅವಘಡ ನಡೆದಿದ್ದು, ಸುಮಾರು 41 ವರ್ಷಗಳಿಂದ ಕಾರವಾರ-ಗೋವಾ ನಡುವೆ ಸಂಚಾರಕ್ಕೆ ಬಳಕೆಯಾಗುತ್ತಿದ್ದ ಸೇತುವೆ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದುಬಿದ್ದಿತ್ತು. ಈ ದುರ್ಘಟನೆಯಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೂಡಲೇ ಹಳೆಯ ಸೇತುವೆ ಪಕ್ಕದಲ್ಲಿದ್ದ ಹೊಸ ಸೇತುವೆ ಮೇಲೆ ಸಂಚಾರ ನಿರ್ಭಂದಿಸಿದ್ದು ಸೇತುವೆಯ ಗುಣಮಟ್ಟದ ಕುರಿತು ವರದಿ ನೀಡುವಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್‌ಬಿ ಕಂಪೆನಿಗೆ ಸೂಚನೆ ನೀಡಿದ್ದರು. ಇದೀಗ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು ನೀಡಿದೆ.

ಕಾಳಿ ನದಿ ಸೇತುವೆ ಕುಸಿತ ಪ್ರಕರಣ; ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು
ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 08, 2024 | 4:09 PM

Share

ಉತ್ತರ ಕನ್ನಡ, ಆ.08: ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅನಾಹುತಗಳ ಮೇಲೆ ಅನಾಹುತ ಸಂಭವಿಸುತ್ತಿದೆ. ಇತ್ತೀಚೆಗಷ್ಟೇ ಶಿರೂರು ಗುಡ್ಡ ಕುಸಿತವಾಗಿ ಹಲವಾರು ಜನರು ಪ್ರಾಣಬಿಟ್ಟಿದ್ದರು. ಇನ್ನೂ ಕೂಡ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಲೇ ಇದೆ. ಹೀಗಿರುವಾಗ ಕಾಳಿ ನದಿ ಅಡ್ಡಲಾಗಿ ಕಟ್ಟಿರುವ ಸೇತುವೆ ಕುಸಿತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅವಕಾಶ ನೀಡಿದೆ.

ಹೊಸ ಸೇತುವೆ ಧಾರಣ ಶಕ್ತಿ ಬಗ್ಗೆ ವರದಿ ಕೇಳಿದ್ದ ಉತ್ತರ ಕನ್ನಡ ಡಿಸಿ

ಹೌದು, ಘಟನೆ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಉ.ಕನ್ನಡ ಜಿಲ್ಲಾಧಿಕಾರಿ, ‘ಹೊಸ ಸೇತುವೆ ಧಾರಣ ಶಕ್ತಿ ಬಗ್ಗೆ ವರದಿ ಕೇಳಿದ್ದರು. ಅದರಂತೆ ಪರಿಶೀಲನೆ ಬಳಿಕ ವಾಹನ ಸಂಚಾರಕ್ಕೆ NHAI ಅವಕಾಶ ನೀಡಿದ್ದು, 2013ರಲ್ಲಿ ನಿರ್ಮಾಣವಾದ ಹೊಸ ಸೇತುವೆ ಸಂಚಾರಕ್ಕೆ ಸೂಕ್ತವಾಗಿದೆ ಎಂದಿದೆ. ಇದೀಗ NHAI ವರದಿ ಬಳಿಕ 2 ಬದಿಯ ಸಂಚಾರಕ್ಕೆ ಜಿಲ್ಲಾಡಳಿತ ಒಪ್ಪಿಗೆ ಸೂಚಿಸಿದೆ. ಆದರೂ ಭಾರಿ ಗಾತ್ರದ ವಾಹನಗಳನ್ನು ಪೊಲೀಸರ ಕಟ್ಟೆಚ್ಚರದಲ್ಲಿ ಬಿಡಲಾಗುತ್ತಿದೆ.

ಇದನ್ನೂ ಓದಿ:ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?

ಸೇತುವೆ ಕುಸಿದ ಸ್ಥಳಕ್ಕೆ ದೆಹಲಿ ಅಧಿಕಾರಿಗಳ ತಂಡ ಭೇಟಿ

ಇನ್ನು ಸೇತುವೆ ಕುಸಿತ ಸ್ಥಳಕ್ಕೆ ದೆಹಲಿಯಿಂದ NHAI, IRB ಇಂಜಿನಿಯರ್ ಸೇರಿ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಸೇತುವೆ ಕುಸಿತ ಸ್ಥಳವನ್ನು ವೀಕ್ಷಿಸಿ ಪರಿಶೀಲಿಸಿದೆ. ಜೊತೆಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ ಅವರ ಜೊತೆ ಸ್ಥಳದಲ್ಲೇ ಮಾಹಿತಿ ಹಂಚಿಕೊಂಡಿದೆ. ಹಳೆಯ ಸೇತುವೆ ಹೇಗೆ ಕುಸಿದಿರಬಹುದು ಎಂದು ವಿಶ್ಲೇಷಿಸಲಾಗಿದೆ. ಇನ್ನು ಹೊಸ ಸೇತುವೆ ಧಾರಣ ಶಕ್ತಿ ಕುರಿತು ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿ ಕೇಳಿದ್ದ ಹಿನ್ನಲೆ ಸದ್ಯ ಸೇತುವೆ ಮೇಲೆ ಕೆಎಸ್ಆರ್‌ಟಿಸಿ ಬಸ್ ಹೊರತುಪಡಿಸಿ ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸರಕು ಸಾಗಾಟದ ವಾಹನಗಳ ಓಡಾಟಕ್ಕೂ ಪೊಲೀಸರು ಅವಕಾಶ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 8 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು