ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು

ಮಹಿಳೆ ಜೊತೆ ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಮೂವರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು
ಆರೋಪಿಗಳು ಮತ್ತು ಮೃತ ವ್ಯಕ್ತಿ
Image Credit source: Tv9 Kannada
Edited By:

Updated on: Feb 03, 2026 | 3:13 PM

ಕಾರವಾರ, ಫೆಬ್ರವರಿ 03: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ

Daughter Exposes Mother's Illegal Relationship With Astrologer, Man Murdered, One More Injured
ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಕಮಲಾಕರ್​​ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವರು. ಸ್ವಾಮೀಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: 10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು; ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಇನ್ನು ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್​​ ಸ್ವಾಮೀಜಿ ಆಗಿದ್ದು, ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:08 pm, Tue, 3 February 26

Follow Us