AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡಕ್ಕೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್: ಮೆಗಾ ಟೂರಿಸಂ ಪ್ಲಾನ್, ನದಿ ಜೋಡಣೆಗೆ ಗ್ರೀನ್ ಸಿಗ್ನಲ್

ಭಾನುವಾರ ಕಾರವಾರದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿಯನ್ನು ಪ್ರವಾಸೋದ್ಯಮ ಹಬ್ ಆಗಿ ಅಭಿವೃದ್ಧಿಪಡಿಸುವುದು ಎಂದು ಭರವಸೆ ನೀಡಿದರು. ಅಲ್ಲದೆ, ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣ ಮತ್ತು ನದಿ ಜೋಡಣೆಗೆ ಡಿಪಿಆರ್ ಘೋಷಣೆ ಮಾಡಿ ಉತ್ತರ ಕನ್ನಡಕ್ಕೆ ಹೊಸ ಭರವಸೆ ನೀಡಿದರು.

ಉತ್ತರ ಕನ್ನಡಕ್ಕೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್: ಮೆಗಾ ಟೂರಿಸಂ ಪ್ಲಾನ್, ನದಿ ಜೋಡಣೆಗೆ ಗ್ರೀನ್ ಸಿಗ್ನಲ್
ಡಿಸಿಎಂ ಡಿಕೆ ಶಿವಕುಮಾರ್
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Dec 29, 2025 | 7:03 AM

Share

ಕಾರವಾರ, ಡಿಸೆಂಬರ್ 29: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ.

ಅರಣ್ಯ ಅತಿಕ್ರಮಣ ವಿಚಾರದಲ್ಲಿ, 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡವರು ಮತ್ತು ರೈತರನ್ನು ಒಕ್ಕಲೆಬ್ಬಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 210 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಸಿದ್ದು, ಆಧುನಿಕ ಸೌಲಭ್ಯವುಳ್ಳ ಹೊಸ ಕಟ್ಟಡ ನಿರ್ಮಿಸುವುದಾಗಿ ಘೋಷಿಸಿದರು. ಇದೆ ವೇಳೆ ಶರಾವತಿ ಯೋಜನೆ ಮತ್ತು ವರದಾ ಹಾಗೂ ಬೇಡ್ತಿ ನದಿ ಜೋಡಣೆಗೆ ಡಿಪಿಆರ್ ಸಿದ್ಧಪಡಿಸಲು ಚೀಫ್ ಇಂಜಿನಿಯರ್‌ಗೆ ನೀಡಿರುವುದಾಗಿ ನೀಡಿರುವುದಾಗಿ ತಿಳಿಸಿದರು.

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಮುೂರ್ತಿಯಾಗಲ್ಲ ಎಂದ ಉಪಮುಖ್ಯಮಂತ್ರಿಗಳು, ಇಂದು ನಾಯಕರಾಗಲು ಬಹಳಷ್ಟು ಕಷ್ಟ ಪಡಬೇಕಿದೆ ಎಂದು ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.

16 ಲಕ್ಷ ರೂ. ಮೌಲ್ಯದ ಶ್ರೀಗಂಧದಿಂದ ಮಾಡಿದ ವಿಗ್ರಹ ಉಡುಗೊರೆ!

ಕರಾವಳಿ ಉತ್ಸವದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ, ಜಿಲ್ಲಾಡಳಿತ ವತಿಯಿಂದ ಶಾಸಕ ಸತೀಶ್ ಸೈಲ್, ವಿಷ್ಣುವಿನ ವಿಶ್ವರೂಪ ದರ್ಶನ ಬಿಂಬಿಸುವ 16 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧದ ವಿಗ್ರಹ ಉಡುಗೊರೆಯಾಗಿ ನೀಡಿದರು. ಡಿಸಿಎಂ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆ ಈಡೇರಲೆಂದು ಆಶಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ?

ಕರಾವಳಿ ಉತ್ಸವದಲ್ಲಿ ಖ್ಯಾತ ಗಾಯ ದಲೇರ್ ಮೆಹಂದಿ ಅವರ ಕಾರ್ಯಕ್ರಮ ಮನಸೂರೆಗೊಂಡಿತು. ಡಿಸಿಎಂ ಡಿಕೆಶಿ ಕೂಡ ರಿಲ್ಯಾಕ್ಸ್‌ ಆಗಿ ಕಾರ್ಯಕ್ರಮ ವೀಕ್ಷಿಸಿದರು. ಒಟ್ಟಿನಲ್ಲಿ, ಕರಾವಳಿಗೆ ಉಪಮುಖ್ಯಮಂತ್ರಿ 3 ಮಹತ್ವದ ಘೋಷಣೆಗಳನ್ನು ಮಾಡಿದ್ದು, ಜಿಲ್ಲೆಯ ಜನರಿಗೆ ಹೊಸ ಆಶಾಭಾವನೆ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Mon, 29 December 25