ಉತ್ತರ ಕನ್ನಡದಲ್ಲಿ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಕನಸು. ಸರ್ಕಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವಂತೆ ಜನರು ನಿರಂತರ ಹೋರಾಟ ಮಾಡುತ್ತಿದ್ದರು. ಆದರೆ, ಇನ್ನೂ ಸ್ಪಂಧನೆ ನೀಡಿಲ್ಲ. ಇದೀಗ ಜಿಲ್ಲೆಯ ಪ್ರಸಿದ್ದ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದಲೇ ಜಿಲ್ಲೆಯ ಹೊನ್ನಾವರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಹೊರಟಿದ್ದು, ಈ ಕುರಿತು ಸ್ಟೋರಿ ಇಲ್ಲಿದೆ.

ಉತ್ತರ ಕನ್ನಡದಲ್ಲಿ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
ಉತ್ತರ ಕನ್ನಡದಲ್ಲಿ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 10, 2024 | 8:23 PM

ಉತ್ತರ ಕನ್ನಡ, ಮೇ.10: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎನ್ನುವುದು ಉತ್ತರ ಕನ್ನಡ(Uttara Kannada) ಜಿಲ್ಲೆಯ ಜನರ ದೊಡ್ಡ ಕನಸು. ಜಿಲ್ಲೆಯಲ್ಲಿ ಹಲವಾರು ವರ್ಷದಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಹೋರಾಟ ಮಾಡುತ್ತಲೇ ಬರುತ್ತಿದ್ದಾರೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಹಲವು ಸಾವುಗಳಾಗುತ್ತಿದ್ದು ಸರ್ಕಾರ ಕಣ್ಣು ತೆರೆಯುವಂತೆ ಹೋರಾಟ ಮಾಡಲಾಗುತ್ತಲೇ ಇದೆ. ಇನ್ನು ಪ್ರತಿ ಚುನಾವಣೆಯಲ್ಲಿ ಇದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super Speciality Hospital) ಎನ್ನುವುದು ಚುನಾವಣೆಯ ವಿಷಯ ವಸ್ತು ಸಹ. ಚುನಾವಣೆ ಮುಗಿದ ಮೇಲೆ ಯಾರು ಸ್ಪಂದಿಸುತ್ತಿಲ್ಲ. ಇದೀಗ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಬಂಗಾರಮಕ್ಕಿ ಮಹಾಸಂಸ್ಥಾನದ ಮಾರುತಿ ಗೂರೂಜಿ ಅವರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನ ಜಿಲ್ಲೆಯಲ್ಲಿ ಮಾಡಲು ಮುಂದಾಗಿದ್ದಾರೆ. ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಗ್ರಾಮದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುತ್ತಿದ್ದು ಇಂದು ಸುಮಾರು 5 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲು ಮುಂದಾದ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಲ್ಲ. ಜನರು ಏನಾದರೂ ಅಪಘಾತ, ಇನ್ನಿತರ ಗಂಭೀರ ಪರಿಸ್ಥಿತಿಯಲ್ಲಿ ನೆರೆಯ ಉಡುಪಿ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಗೋವಾದಲ್ಲಿನ ಆಸ್ಪತ್ರೆಗೆ ತೆರಳಬೇಕು. ಈ ವೇಳೆ ರಸ್ತೆ ಮಧ್ಯದಲ್ಲಿಯೇ ಹಲವರು ಪ್ರಾಣ ಬಿಟ್ಟಿದ್ದು, ಜನರ ಹೋರಾಟಕ್ಕೆ ಯಾರು ಸ್ಪಂಧಿಸಿರಲಿಲ್ಲ. ಸದ್ಯ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಬೆಂಗಳೂರಿನ ಪ್ರಸಿದ್ದ ಸುದೀಕ್ಷ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್​ ವತಿಯಿಂದ ಆಸ್ಪತ್ರೆ ನಿರ್ಮಿಸಲು ಮುಂದಾಗಿದೆ. ಮೊದಲ ಹಂತದಲ್ಲಿ ಸುಮಾರು 150 ಬೆಡ್​ನ ಆಸ್ಪತ್ರೆ ನಿರ್ಮಿಸಿ, ನಂತರ ಹಂತ ಹಂತವಾಗಿ ಮೆಡಿಕಲ್ ಕಾಲೇಜು ನಿರ್ಮಿಸುವ ಮೂಲಕ 3 ಸಾವಿರ ಬೆಡ್ ಆಸ್ಪತ್ರೆ, ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸೇವೆ ಕೊಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರ

ಸದ್ಯ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿದ್ದು, ಒಂದು ವರ್ಷದಲ್ಲಿ ಕಟ್ಟಡ ನಿರ್ಮಾಣ, ಎರಡು ವರ್ಷದಲ್ಲಿ ಆಸ್ಪತ್ರೆ ಸೇವೆ ಪ್ರಾರಂಭಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಜಿಲ್ಲೆಯ ಜನರು ಬೇರೆ ಜಿಲ್ಲೆ,ರಾಜ್ಯಕ್ಕೆ ಆಸ್ಪತ್ರೆಗಾಗಿ ಅಲೆದಾಡುವ ಬದಲು ಜಿಲ್ಲೆಯಲ್ಲಿಯೇ ಎಲ್ಲಾ ಸೇವೆ ಸಿಗುವ ಮೂಲಕ ಜನರಿಗೆ ಸಹಾಯ ಮಾಡಬೇಕು ಎನ್ನುವುದು ಬಂಗಾರಮಕ್ಕಿ ಮಹಾಸಂಸ್ಥಾನದ ಚಿಂತನೆಯಾಗಿದ್ದು, ಸರ್ಕಾರ ಇನ್ನೂ ಮಾಡಲಾಗದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ನಿರ್ಮಾಣ ಮಾಡಲು ಮುಂದಾಗಿರುವುದು ನಿಜಕ್ಕೂ ಮೆಚ್ಚುವಂತದ್ದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್