AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ, ರಾಮನಗರ ಆಯ್ತು ಇದೀಗ ಉತ್ತರ ಕನ್ನಡದಲ್ಲಿ ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು

ಹಾಸನದಲ್ಲಿ ನಾಲ್ವರು ಮಕ್ಕಳು ಹಾಗೂ ರಾಮನಗರದಲ್ಲಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ(Bhatkal) ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಾಸನ, ರಾಮನಗರ ಆಯ್ತು ಇದೀಗ ಉತ್ತರ ಕನ್ನಡದಲ್ಲಿ ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು
ಭಟ್ಕಳದಲ್ಲಿ ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 17, 2024 | 7:57 PM

Share

ಉತ್ತರ ಕನ್ನಡ, ಮೇ.17: ಜಿಲ್ಲೆಯ ಭಟ್ಕಳ(Bhatkal) ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.  ತಾಲೂಕಿನ ಕಂಡೆಕೋಡ್ಲು ನಿವಾಸಿಗಳಾದ ಸೂರಜ್ ನಾಯ್ಕ(15) ಹಾಗೂ ಪಾರ್ವತಿ ಶಂಕರ್ ನಾಯ್ಕ(35) ಮೃತರು. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರಂತ ಸಂಭವಿಸಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಿಡಿಲು ಬಡಿದು ಬಾಲಕಿ ಸಾವು

ಬಾಗಲಕೋಟೆ: ಮುಧೋಳ ತಾಲೂಕಿನ ಜಾಡರ ಅರಳಿಕಟ್ಟಿ ಗ್ರಾಮದ ಬಳಿಯ ಜಮೀನೊಂದರಲ್ಲಿ ಸಿಡಿಲು ಬಡಿದು ಮಲ್ಲಾಪುರ ಪಿ.ಎಲ್.ಗ್ರಾಮದ ನಿವಾಸಿ 16 ವರ್ಷದ ಭಾಗ್ಯಶ್ರೀ ಪಡೆಪ್ಪನವರು ಎಂಬುವವರು ಮೃತರಾಗಿದ್ದಾರೆ. ಪೋಷಕರ ‌ಜೊತೆ ಹೊಲದಲ್ಲಿ‌ ಕೃಷಿ ಕೆಲಸ‌ ಮಾಡುವಾಗ ಸಿಡಿಲು‌ ಬಡಿದು ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಲೋಕಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಹಾಸನ ದುರ್ಘಟನೆ ಮಾಸುವ ಮುನ್ನವೇ ರಾಮನಗರದಲ್ಲೂ ಮೂವರು ಬಾಲಕರು ಜಲಸಮಾಧಿ

ಸಿಡಿಲು ಬಡಿದು ಜಾನುವಾರು ಸಾವು

ತುಮಕೂರು: ಸಿಡಿಲು ಬಡಿದು ಹಸುವೊಂದು ಸಾವನ್ನಪ್ಪಿದ್ದು, ನಾಲ್ಕು ಜಾನುವಾರುಗಳಿಗೆ ಗಾಯವಾದ ಘಟನೆ ಪಾವಗಡ ತಾಲೂಕಿನ ರಂಗಸಮುದ್ರದಲ್ಲಿ ನಡೆದಿದೆ. ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳು ಇದಾಗಿದ್ದು, ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಗೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮ ಗುಡಿಸಲಿಗೆ ಬೆಂಕಿ ತಗುಲಿ ಸುಟ್ಟುಭಸ್ಮವಾಗಿದೆ. ಈ ಘಟನೆ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು ಸ್ಕೂಟರ್ ನಡುವೆ ಅಪಘಾತ ಮಹಿಳೆ ಸಾವು

ಮೈಸೂರು: ನಗರದ ಕೆ.ಆರ್.ಎಸ್ ರಸ್ತೆಯಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್​​​​ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಹೆಬ್ಬಾಳು ಬಡಾವಣೆ ನಿವಾಸಿ ರಾಧಾ(34) ಕೊನೆಯುಸಿರು. ಸ್ಥಳಕ್ಕೆ ವಿ ವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಹಾಗೂ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್​, ಮಹಾವೀರ್​ ಉತ್ತುರೆ
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್