AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿಯಲ್ಲಿ ವರುಣನ ಆರ್ಭಟ: ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್!

Monsoon 2026: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಕೆಲವು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ ಸೇರಿದಂತೆ ಹಲವೆಡೆ ‘ಯೆಲ್ಲೋ ಅಲರ್ಟ್’ ಜಾರಿಯಲ್ಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಜಾಗರೂಕರಾಗಿರಲು ಇಲಾಖೆ ಸೂಚಿಸಿದೆ.

Karnataka Weather Forecast: ಕರಾವಳಿಯಲ್ಲಿ ವರುಣನ ಆರ್ಭಟ: ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್!
ಕರಾವಳಿಯಲ್ಲಿ ವರುಣನ ಆರ್ಭಟ
ಭಾವನಾ ಹೆಗಡೆ
|

Updated on: Jun 24, 2026 | 7:34 AM

Share

ಬೆಂಗಳೂರು, ಜೂನ್ 23: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಅಲರ್ಟ್ ಘೋಷಿಸಲಾಗಿದೆ.

ಮುಖ್ಯಾಂಶಗಳು

  • ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ.
  • ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ.
  • ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ, ಜನರಿಗೆ ಎಚ್ಚರಿಕೆ ಸೂಚನೆ.

ಕರಾವಳಿಗೆ ಆರೆಂಜ್ ಅಲರ್ಟ್

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಕರಾವಳಿಯ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ, ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ (ಗಂಟೆಗೆ 30-40 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯ ಇನ್ನುಳಿದ ಭಾಗಗಳಿಗೆ ಎಚ್ಚರಿಕೆಯ ಭಾಗವಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡು ಹವಾಮಾನ ಮುನ್ಸೂಚನೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಹಾವೇರಿ, ಗದಗ ಮತ್ತು ಬಾಗಲಕೋಟೆ ಭಾಗದ ಹಲವು ಪ್ರದೇಶಗಳಲ್ಲಿ ಸಾಧಾರಣ ಪ್ರಮಾಣದ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ನಿರೀಕ್ಷೆಯಿದೆ.

ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದು, ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.

ಸಾರ್ವಜನಿಕರಿಗೆ ಸೂಚನೆ

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಇರುವುದರಿಂದ ಹಾಗೂ ರಾಜ್ಯದ ಉಳಿದೆಡೆ ಯೆಲ್ಲೋ ಅಲರ್ಟ್ ಘೋಷಿಸಿರುವುದರಿಂದ ಸಾರ್ವಜನಿಕರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಗುಡುಗು-ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್