AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳಕ್ಕೆ ಹೋಗಲಾಗುತ್ತಿಲ್ಲವೆಂದು ಹಿತ್ತಲಲ್ಲೇ 40 ಅಡಿ ಬಾವಿ ತೋಡಿ ‘ಗಂಗಾ’ ಜಲ ಸೃಷ್ಟಿಸಿಕೊಂಡ ಶಿರಸಿ ಮಹಿಳೆ!

ಉತ್ತರ ಕನ್ನಡದ ಶಿರಸಿಯ 57 ವರ್ಷದ ಗೌರಿ ನಾಯ್ಕ್ ಅವರು ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಹೋಗಲು ಆಗದ ಕಾರಣ ತಮ್ಮ ಮನೆಯ ಹಿತ್ತಲಲ್ಲೇ 40 ಅಡಿ ಆಳದ ಬಾವಿ ತೋಡಿ 'ಗಂಗಾ' ಜಲವನ್ನು ಸೃಷ್ಟಿಸಿದ್ದಾರೆ. ಮಹಾ ಶಿವರಾತ್ರಿಯಂದು ಈ ನೀರಿನಿಂದ ಪುಣ್ಯಸ್ನಾನ ಮಾಡುವ ಯೋಜನೆ ಅವರದ್ದು. ಯಾವುದೇ ಸಹಾಯವಿಲ್ಲದೆ ಈ ಕೆಲಸ ಮಾಡಿದ ಗೌರಿ ಅವರು ಹಿಂದೆ ಕೂಡಾ ಹಲವು ಬಾವಿಗಳನ್ನು ತೋಡಿದ್ದಾರೆ.

ಕುಂಭಮೇಳಕ್ಕೆ ಹೋಗಲಾಗುತ್ತಿಲ್ಲವೆಂದು ಹಿತ್ತಲಲ್ಲೇ 40 ಅಡಿ ಬಾವಿ ತೋಡಿ ‘ಗಂಗಾ’ ಜಲ ಸೃಷ್ಟಿಸಿಕೊಂಡ ಶಿರಸಿ ಮಹಿಳೆ!
ಗೌರಿ ನಾಯ್ಕ್ (ಟಿವಿ9 ಸಂಗ್ರಹ ಚಿತ್ರ)
Ganapathi Sharma
|

Updated on:Feb 17, 2025 | 10:44 AM

Share

ಶಿರಸಿ, ಫೆಬ್ರವರಿ 17: ಪ್ರಯಾಗ್​ರಾಜ್​​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದು ಎಂದು ಅರಿತ ಮಹಿಳೆಯೊಬ್ಬರು ಮನೆ ಹಿತ್ತಲಲ್ಲೇ ಒಬ್ಬಂಟಿಯಾಗಿ 40 ಅಡಿ ಬಾವಿ ತೋಡಿ ‘ಗಂಗಾ’ ಜಲ ಸೃಷ್ಟಿಸಿಕೊಂಡ ಅಪರೂಪದ ವಿದ್ಯಮಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಾಕ್ಷಿಯಾಗಿದೆ. 57 ವರ್ಷದ ಗೌರಿ ನಾಯ್ಕ್ ಎಂಬವರೇ ಈ ಸಾಧನೆ ಮಾಡಿದವರು.

ಮಹಾಕುಂಭಕ್ಕೆ ಹೋಗಲು ಅದೃಷ್ಟವಂತರಾಗಿರಬೇಕು. ಸಣ್ಣ ಕೃಷಿ ಭೂಮಿ ಇರುವ, ಆದಾಯ ಕಡಿಮೆ ಇರುವ ನನಗೆ ಅದು ಸಾಧ್ಯವಾಗದು. ಅದಕ್ಕಾಗಿ ನಾನು ಇಲ್ಲಿಯೇ ಬಾವಿ ಅಗೆದು ಗಂಗೆಯನ್ನು ತರಲು ನಿರ್ಧರಿಸಿದೆ ಎಂದು ಗೌರಿ ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ಗೌರಿ ಸುಮಾರು 40 ಅಡಿ ವರೆಗೆ ಬಾವಿ ತೋಡಿದ್ದರು. ಬಾವಿಯಲ್ಲಿ ಸಾಕಷ್ಟು ನೀರು ದೊರೆತಿರುವುದಕ್ಕೆ ಸಂತಸಗೊಂಡಿದ್ದಾರೆ ಎಂದೂ ವರದಿ ಉಲ್ಲೇಖಿಸಿದೆ.

ಶಿವರಾತ್ರಿಯಂದು ಪುಣ್ಯಸ್ನಾನ

ಈ ತಿಂಗಳ ಕೊನೆಯಲ್ಲಿ ಮಹಾ ಶಿವರಾತ್ರಿಯಂದು ನಾನು ಬಾವಿಯ ನೀರಿನಿಂದ ಪುಣ್ಯ ಸ್ನಾನ ಮಾಡಲು ಯೋಜಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಮಹಾಕುಂಭಮೇಳದ ಬಗ್ಗೆ ಡಿಸೆಂಬರ್‌ನಲ್ಲಿ ಗೌರಿ ಅವರಿಗೆ ಮಾಹಿತಿ ಗೊತ್ತಾಗಿತ್ತು. ಆದರೆ ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲು ಸಾಕಷ್ಟು ಹಣವಿಲ್ಲ ಎಂಬ ಅರಿವೂ ಅವರಿಗಿತ್ತು. ಆಗಲೇ ಅವರು ಬಾವಿ ತೋಡಲು ನಿರ್ಧರಿಸಿದರು ಮತ್ತು ಡಿಸೆಂಬರ್ 15 ರಿಂದಲೇ ಕೆಲಸ ಪ್ರಾರಂಭಿಸಿದ್ದರು ಎಂದು ವರದಿ ತಿಳಿಸಿದೆ.

ಆಕೆಯ ಸಂಬಂಧಿಕರು ಮತ್ತು ನೆರೆಹೊರೆಯವರು ಹೇಳಿದ ಪ್ರಕಾರ, ಗೌರಿ ದಿನಕ್ಕೆ ಸುಮಾರು 6-8 ಗಂಟೆಗಳ ಕಾಲ ಮಣ್ಣನ್ನು ಅಗೆಯುವ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಪ್ರಯತ್ನವನ್ನು ಪ್ರಾರಂಭಿಸಿದ ಎರಡು ತಿಂಗಳ ನಂತರ ಫೆಬ್ರವರಿ 15 ರಂದು ಬಾವಿಯನ್ನು ಪೂರ್ಣಗೊಳಿಸಿದ್ದರು. ಬಾವಿಯಲ್ಲಿ ನೀರಿನ ಒರತೆಯೂ ಚಿಮ್ಮಿತ್ತು.

ಗೌರಿ ಸಾಧನೆ ಇದೇ ಮೊದಲಲ್ಲ

ಯಾರ ಸಹಾಯವಿಲ್ಲದೆ ಬಾವಿ ತೋಡುವುದು ಗೌರಿಗೆ ಹೊಸದೇನಲ್ಲ. ಅವರು ಈ ಹಿಂದೆಯೂ ನಾಲ್ಕು ಬಾವಿಗಳನ್ನು ತೋಡಿದ್ದಾರೆ. ಒಂದು ಕೃಷಿಗಾಗಿ ತನ್ನ ಹೊಲದಲ್ಲಿ, ಇನ್ನೊಂದು ತನ್ನ ಹಳ್ಳಿಯ ಜನರ ಬಾಯಾರಿಕೆ ನೀಗಿಸಲು ಮತ್ತು ಮೂರನೆಯದು 2024 ರ ಮಧ್ಯ ಭಾಗದಲ್ಲಿ ಶಿರಸಿಯ ಗಣೇಶ ನಗರ ಅಂಗನವಾಡಿ ಶಾಲೆಗಾಗಿ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಜೀವ ಬಿಟ್ಟೆನೂ, ಆದ್ರೆ ಬಾವಿ ತೆಗೆಯುವುದನ್ನ ನಿಲ್ಲಿಸುವುದಿಲ್ಲ ಎಂದ ಶಿರಸಿಯ ಗೌರಿ ನಾಯ್ಕ್​

ಅಂಗನವಾಡಿಯ ಬಾವಿಯ ಕೆಲಸದ ಬಗ್ಗೆ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತವು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಬಾವಿ ತೋಡುವುದನ್ನು ನಿಲ್ಲಿಸುವಂತೆ ಸೂಚನೆ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮೊದಲಿಗೆ ಗೌರಿ ಅವರನ್ನು ಸನ್ಮಾನಿಸಿದರಾದರೂ, ನಂತರ ಬಾವಿ ತೋಡುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದರು. ಆದರೆ ಆಗಿನ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗ್ಡೆ ಅವರ ಬೆಂಬಲದ ನಂತರ ಗೌರಿ ಬಾವಿಯ ನಿರ್ಮಾಣವನ್ನು ಪೂರ್ಣಗೊಳಿಸಿದ್ದರು. ಗೌರಿ ಅವರು ಅಂದು ತೋಡಿದ್ದ 45 ಅಡಿ ಆಳದ ಬಾವಿ ಇಂದಿಗೂ ಬಳಕೆಯಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 am, Mon, 17 February 25

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು