ಬನವಾಸಿಯ ಕದಂಬರು ಇಲ್ಲದೆ ಕರ್ನಾಟಕದ ಇತಿಹಾಸ ಪೂರ್ಣ ಆಗುವುದಿಲ್ಲ; ಸಿಎಂ ಬೊಮ್ಮಾಯಿ

ಬನವಾಸಿಗೆ ಆಗಮಿಸಿದ ಸಿಎಂ‌ ಬಸವರಾಜ ಬೊಮ್ಮಾಯಿ ಕಾರು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕದಂಬೋತ್ಸವ ಒಂದು ಪಕ್ಷದ ಉತ್ಸವವಾಗಿ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಲಾಯಿತು. ಅಲ್ಲದೆ, ಕಾರ್ಯಕ್ರಮಕ್ಕೆಂದ ಆಗಮಿಸಿದ ಕಾರ್ಯಕರ್ತರನ್ನು ಪೊಲೀಸರು ಹೊರಹಾಕಿದರು.

ಬನವಾಸಿಯ ಕದಂಬರು ಇಲ್ಲದೆ ಕರ್ನಾಟಕದ ಇತಿಹಾಸ ಪೂರ್ಣ ಆಗುವುದಿಲ್ಲ; ಸಿಎಂ ಬೊಮ್ಮಾಯಿ
ಕದಂಬೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
Rakesh Nayak Manchi
|

Updated on:Feb 28, 2023 | 7:15 PM

ಶಿರಸಿ: ಕದಂಬರು (Kadambaru) ಇಲ್ಲದೆ ಕರ್ನಾಟಕದ ಇತಿಹಾಸ ಪೂರ್ಣ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಕದಂಬೋತ್ಸವಕ್ಕೆ (Kadambotsav) ಚಾಲನೆ ನೀಡಿ ಮಾತನಾಡಿದ ಅವರು, ಪಂಪ ತಮ್ಮ ಸಾಹಿತ್ಯ ಮೂಲಕ ಕನ್ನಡ ಭಾಷೆಗೆ ಮುನ್ನುಡಿ ಬರೆದಿದ್ದಾರೆ. ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಾಗಿದೆ. ಕದಂಬರ ಕಾಲದಲ್ಲಿ ಸಾಹಿತ್ಯ ಸಂಸ್ಕೃತಿ‌ ಉಜ್ವಲ ಸ್ಥಾನದಲ್ಲಿತ್ತು. ಇಂದಿಗೂ ಬನವಾಸಿ ಕೃಷಿಯಲ್ಲಿ ಫಲವಾದ ಭೂಮಿಯಾಗಿದೆ. ಬನವಾಸಿ ಭಾಗದ ಜನರಿಗಾಗಿ ಏತ ನೀರಾವರಿ ಯೋಜನೆ ಜಾರಿಯಾಗಿದೆ. ಸುಮಾರು 62 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಶಿವರಾಮ್ ಹೆಬ್ಬಾರ್ ಪ್ರಯತ್ನದಿಂದ ಈ ಯೋಜನೆ ಜಾರಿಯಾಗಿದ್ದು, ಅದಕ್ಕಾಗಿ ಸಚಿವ ಹೆಬ್ಬಾರ್​ಗೆ ಭಗೀರಥ ಎಂದು ಬಿರುದು ಕೊಟ್ಟಿದ್ದೀರಿ ಎಂದರು.

ಕಾರ್ಯಕ್ರಮದಲ್ಲಿ ಡಾ.ಬಾಬು ಕೃಷ್ಣಮೂರ್ತಿ ಅವರಿಗೆ ಸಿಎಂ ಬೊಮ್ಮಾಯಿ ಅವರು ಪಂಪ ಪ್ರಶಸ್ತಿ ಪ್ರದಾನ ಮಾಡಿದರು. ಸಾಹಿತ್ಯ, ಪತ್ರಿಕೋದ್ಯಮ ಮತ್ತು ಚಲನಚಿತ್ರ ಕ್ಷೇತ್ರಗಳಲ್ಲಿ ಇವರ ಸೇವೆಯನ್ನು ಗುರುತಿಸಿ ಪಂಪ ಪ್ರಶಸ್ತಿಗೆ ಆಯ್ಕೆ ಮಾಡಿ ಇಂದು ಪ್ರದಾನ ಮಾಡಲಾಯಿತು.

ಇದನ್ನೂ ಓದಿ: Govt Employees Strike: ನಾಳೆ ಸರ್ಕಾರಿ ನೌಕರರ ಮುಷ್ಕರ; ಇಂದು ರಾತ್ರಿ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ

ಇದಕ್ಕೂ ಮುನ್ನ, ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾಗ ಬನವಾಸಿಯಲ್ಲಿ ಸಿಎಂ ಕಾರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು, ಪ್ರತಿಭಟನೆ ನಡೆಸಿದರು. ಕದಂಬೋತ್ಸವ ಒಂದು ಪಕ್ಷದ ಉತ್ಸವವಾಗಿ ಮಾಡಲಾಗುತ್ತಿದೆ. ಕರೆಂಟ್ ಹಾಗೂ ನೀರಿಲ್ಲ ಆದರೂ ಏತನೀರಾವರಿ ಯೋಜನೆ‌‌ ಉದ್ಘಾಟನೆ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಬೊಮ್ಮಾಯಿ ಎದುರೇ ದಿಕ್ಕಾರ ಕೂಗಿ ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿದರು. ಇದರಿಂದಾಗಿ ಸ್ಥಳದಲ್ಲಿ ಕೆಲ‌ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಮಾಜಿ ಶಾಸಕ ವಿ.ಎಸ್. ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ಕದಂಬೋತ್ಸವಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರನ್ನ ಹೊರಹಾಕಿದ ಪೊಲೀಸರು

ಕದಂಬೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲು ಬಂದ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ಹೊರಹಾಕಿದ ಪ್ರಸಂಗವೂ ನಂತರ ನಡೆಯಿತು. ಮುಖ್ಯಮಂತ್ರಿಯವರ ಕಾರು ತಡೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ನಂತರ ಮಧುಕೇಶ್ವರ ದೇವಸ್ಥಾನ ಬಳಿ ತೆರಳಲು ಮುಂದಾದರು. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕಾರ್ಯಕರ್ತರನ್ನು ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Tue, 28 February 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್