AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಸ್ವಾಭಿಮಾನ ಪಾದಯಾತ್ರೆ ಪೂರ್ಣ: ಮುಂದೆ ಆಮರಣಾಂತ ಉಪವಾಸ ಎಚ್ಚರಿಕೆ

ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ಹೋರಾಟ ನಡೆಸುತ್ತಿದ್ದಾರೆ. ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಫೆಬ್ರವರಿ 5 ರಂದು ಕುಮಟಾದಿಂದ ಆರಂಭಗೊಂಡಿದ್ದ ‘ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಸ್ವಾಭಿಮಾನದ ಪಾದಯಾತ್ರೆ’ ಇಂದು ಭಟ್ಕಳಕ್ಕೆ ಆಗಮಿಸುವ ಮೂಲಕ ಪಾದಯಾತ್ರೆ ಪೂರ್ಣಗೊಳಿಸಲಾಗಿದೆ. ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ನೀಡದಿದ್ದಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಸ್ವಾಭಿಮಾನ ಪಾದಯಾತ್ರೆ ಪೂರ್ಣ: ಮುಂದೆ ಆಮರಣಾಂತ ಉಪವಾಸ ಎಚ್ಚರಿಕೆ
ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Feb 07, 2024 | 6:40 PM

Share

ಕಾರವಾರ, ಫೆಬ್ರವರಿ 7: ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Multispeciality Hospital) ನೀಡುವಂತೆ ಆಗ್ರಹಿಸಿ ಫೆಬ್ರವರಿ 5 ರಂದು ಕುಮಟಾದಿಂದ ಆರಂಭಗೊಂಡಿದ್ದ ‘ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಸ್ವಾಭಿಮಾನದ ಪಾದಯಾತ್ರೆ’ 57 ಕಿಮೀ ಕ್ರಮಿಸಿ ಭಟ್ಕಳಕ್ಕೆ ಪಾದಯಾತ್ರೆ ತಲುಪಿದೆ. ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಪಾದಯಾತ್ರೆ ಹಮ್ಮಿಕೊಂಡಿದ್ದರು. 50ಕ್ಕೂ ಅಧಿಕ ಬೆಂಬಲಿಗರು, ವಿವಿಧ ಸಂಘಟನೆಗಳ ಸದಸ್ಯರೊಂದಿಗೆ ಪಾದಯಾತ್ರೆ ಮಾಡಲಾಗಿದ್ದು, ಭಟ್ಕಳದಲ್ಲಿ ಸಚಿವ ಮಂಕಾಳು ವೈದ್ಯ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ಬಳಿಕ ಸಚಿವರ ಮೂಲಕ ಸರ್ಕಾರಕ್ಕೆ ಆಸ್ಪತ್ರೆಗಾಗಿ ಮನವಿ ಸಲ್ಲಿಸಲಾಗಿದೆ. ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನುದಾನ ನೀಡದಿದ್ದಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ಅನಂತಮೂರ್ತಿ ಹೆಗಡೆ ಎಚ್ಚರಿಕೆ ನೀಡಿದ್ದಾರೆ.

ಆಮರಣಾಂತ ಉಪವಾಸ ಎಚ್ಚರಿಕೆ ನೀಡಿದ ಅನಂತಮೂರ್ತಿ ಹೆಗಡೆ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅನಂತಮೂರ್ತಿ ಹೆಗಡೆ, ಸರ್ಕಾರ ಮತ್ತು ಸಚಿವರು ತಮ್ಮ ಸ್ವಂತ ಖರ್ಚಿನಿಂದ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆದರೆ 9 ತಿಂಗಳು ಕಳೆದರು ಕೂಡ ಆ ಕುರಿತಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ನಮಗೆ ಇವರು ಆಸ್ಪತ್ರೆ ನಿರ್ಮಾಣ ಮಾಡುವುದಿಲ್ಲ ಎಂಬ ಭಾವನೆ ಹುಟ್ಟಿಕೊಂಡಿದೆ ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಚುರುಕಾಯ್ತು ಹೋರಾಟ; ರಕ್ತದಲ್ಲಿ ಪತ್ರ, ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಆದಷ್ಟು ಶೀಘ್ರವಾಗಿ ಈ ಹಿಂದೆ ನಿಗದಿಯಾದ ಜಾಗದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದೆ ಬರುವ ಬಜೆಟ್​ನಲ್ಲಿ ಹಣ ಬಿಡುಗಡೆ ಮಾಡಬೇಕು. ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನುದಾನ ನೀಡದಿದ್ದಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಕೂಗು ಜೋರಾಗುತ್ತಿದೆ. ಕಳೆದ ಕೆಲ ತಿಂಗಳಿನಿಂದ ಸುಸಜ್ಜಿತ ಆಸ್ಪತ್ರೆಗಾಗಿ ನಡೆದಿದ್ದ ಹೋರಾಟಗಳನ್ನ ತಣ್ಣಗಾಗಿಸಲು, ರಾಜ್ಯ ಸರ್ಕಾರ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿ ಆಸವಾಸನೆ ನೀಡಿ ಸುಮ್ಮನಾಗಿತ್ತು. ಇದರಿಂದ ರೊಚ್ವಿಗೆದ್ದ ಜಿಲ್ಲೆಯ ಜನ ಮತ್ತೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ

ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಪಕ್ಕದ ಗೋವಾ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಉಡುಪಿಗೆ ಜನ ಆಸ್ಪತ್ರೆ ಹುಡುಕಿಕೊಂಡು ಹೋಗಬೇಕು. ಅದು ಕೂಡ 200-300 ಕಿಮೀ ಗಟ್ಟಲೆ ದೂರ ಕ್ರಮಿಸಿ ಹೋಗಬೇಕು. ಅದರಲ್ಲೂ ಎಮರ್ಜೆನ್ಸಿ ರೋಗಿಗಳಿದ್ದರೆ ಅವರ ಜೀವ ದಾರಿ ಮಧ್ಯೆ ಹೋಗಿ ಬಿಡುತ್ತೆ ಅಂತ ಸಂಕಷ್ಟ ಪರಿಸ್ಥಿತಿಯಲ್ಲಿ ಜಿಲ್ಲೆಯ ಜರಿದ್ದಾರೆ.

ಹೀಗಾಗಿ ಹೇಗಾದರ ಮಾಡಿ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆ ತರಬೇಕು ಅಂತಾ ಜನರು ಬೇರೆ ಬೇರೆ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸೂರಜ್​, ಮಹಾವೀರ್​ ಉತ್ತುರೆ
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ