ಕಾರವಾರ, ಫೆಬ್ರವರಿ 7: ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Multispeciality Hospital) ನೀಡುವಂತೆ ಆಗ್ರಹಿಸಿ ಫೆಬ್ರವರಿ 5 ರಂದು ಕುಮಟಾದಿಂದ ಆರಂಭಗೊಂಡಿದ್ದ ‘ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಸ್ವಾಭಿಮಾನದ ಪಾದಯಾತ್ರೆ’ 57 ಕಿಮೀ ಕ್ರಮಿಸಿ ಭಟ್ಕಳಕ್ಕೆ ಪಾದಯಾತ್ರೆ ತಲುಪಿದೆ. ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಪಾದಯಾತ್ರೆ ಹಮ್ಮಿಕೊಂಡಿದ್ದರು. 50ಕ್ಕೂ ಅಧಿಕ ಬೆಂಬಲಿಗರು, ವಿವಿಧ ಸಂಘಟನೆಗಳ ಸದಸ್ಯರೊಂದಿಗೆ ಪಾದಯಾತ್ರೆ ಮಾಡಲಾಗಿದ್ದು, ಭಟ್ಕಳದಲ್ಲಿ ಸಚಿವ ಮಂಕಾಳು ವೈದ್ಯ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ಬಳಿಕ ಸಚಿವರ ಮೂಲಕ ಸರ್ಕಾರಕ್ಕೆ ಆಸ್ಪತ್ರೆಗಾಗಿ ಮನವಿ ಸಲ್ಲಿಸಲಾಗಿದೆ. ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನುದಾನ ನೀಡದಿದ್ದಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ಅನಂತಮೂರ್ತಿ ಹೆಗಡೆ ಎಚ್ಚರಿಕೆ ನೀಡಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅನಂತಮೂರ್ತಿ ಹೆಗಡೆ, ಸರ್ಕಾರ ಮತ್ತು ಸಚಿವರು ತಮ್ಮ ಸ್ವಂತ ಖರ್ಚಿನಿಂದ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆದರೆ 9 ತಿಂಗಳು ಕಳೆದರು ಕೂಡ
ಆ ಕುರಿತಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ನಮಗೆ ಇವರು ಆಸ್ಪತ್ರೆ ನಿರ್ಮಾಣ ಮಾಡುವುದಿಲ್ಲ ಎಂಬ ಭಾವನೆ ಹುಟ್ಟಿಕೊಂಡಿದೆ ಎಂದಿದ್ದಾರೆ.
ಇದನ್ನೂ ಓದಿ: ಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಚುರುಕಾಯ್ತು ಹೋರಾಟ; ರಕ್ತದಲ್ಲಿ ಪತ್ರ, ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ
ಆದಷ್ಟು ಶೀಘ್ರವಾಗಿ ಈ ಹಿಂದೆ ನಿಗದಿಯಾದ ಜಾಗದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದೆ ಬರುವ ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡಬೇಕು. ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನುದಾನ ನೀಡದಿದ್ದಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಕೂಗು ಜೋರಾಗುತ್ತಿದೆ. ಕಳೆದ ಕೆಲ ತಿಂಗಳಿನಿಂದ ಸುಸಜ್ಜಿತ ಆಸ್ಪತ್ರೆಗಾಗಿ ನಡೆದಿದ್ದ ಹೋರಾಟಗಳನ್ನ ತಣ್ಣಗಾಗಿಸಲು, ರಾಜ್ಯ ಸರ್ಕಾರ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿ ಆಸವಾಸನೆ ನೀಡಿ ಸುಮ್ಮನಾಗಿತ್ತು. ಇದರಿಂದ ರೊಚ್ವಿಗೆದ್ದ ಜಿಲ್ಲೆಯ ಜನ ಮತ್ತೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.
ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ
ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಪಕ್ಕದ ಗೋವಾ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಉಡುಪಿಗೆ ಜನ ಆಸ್ಪತ್ರೆ ಹುಡುಕಿಕೊಂಡು ಹೋಗಬೇಕು. ಅದು ಕೂಡ 200-300 ಕಿಮೀ ಗಟ್ಟಲೆ ದೂರ ಕ್ರಮಿಸಿ ಹೋಗಬೇಕು. ಅದರಲ್ಲೂ ಎಮರ್ಜೆನ್ಸಿ ರೋಗಿಗಳಿದ್ದರೆ ಅವರ ಜೀವ ದಾರಿ ಮಧ್ಯೆ ಹೋಗಿ ಬಿಡುತ್ತೆ ಅಂತ ಸಂಕಷ್ಟ ಪರಿಸ್ಥಿತಿಯಲ್ಲಿ ಜಿಲ್ಲೆಯ ಜರಿದ್ದಾರೆ.
ಹೀಗಾಗಿ ಹೇಗಾದರ ಮಾಡಿ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆ ತರಬೇಕು ಅಂತಾ ಜನರು ಬೇರೆ ಬೇರೆ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.