ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ

ಕಾರವಾರದಿಂದ ಮುಂಡಗೋಡಿಗೆ ಡಿವೈಎಸ್ಪಿ ಅರವಿಂದ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನಕ್ಕೆ ಅಡ್ಡ ಬಂದ ಮಗುವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

  • TV9 Web Team
  • Published On - 14:10 PM, 8 Mar 2021
ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ
DYSP ಪಿ. ಅರವಿಂದ ಕಲಗುಜ್ಜಿ ವಾಹನಕ್ಕೆ ಓಮಿನಿ ಕಾರು ಡಿಕ್ಕಿ

ಕಾರವಾರ: ಕಾರವಾರ DYSP ಪಿ. ಅರವಿಂದ ಕಲಗುಜ್ಜಿ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ DYSP ಪಿ. ಅರವಿಂದ ಕಲಗುಜ್ಜಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಕಾರವಾರದಿಂದ ಮುಂಡಗೋಡಿಗೆ ಡಿವೈಎಸ್ಪಿ ಅರವಿಂದ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನಕ್ಕೆ ಅಡ್ಡ ಬಂದ ಮಗುವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಓಮ್ನಿ ಕಾರು ರಸ್ತೆಯಲ್ಲಿಯೇ ಉರುಳಿ ಬಿದ್ದಿದೆ. ಕಾರು ನೆಲಕ್ಕುರಳಿದ್ದರಿಂದಾಗಿ ಓಮ್ನಿಯಲ್ಲಿದ್ದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮರಳು ಸಾಗಿಸ್ತಿದ್ದ ಟಿಪ್ಪರ್ ಹರಿದು ಬೈಕ್ ಸವಾರ ಸಾವು; ಅಪಘಾತ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ