AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣದಲ್ಲಿ ಮೂವರು ಮೀನುಗಾರರ ಮರಣದ ಬೆನ್ನಲ್ಲೇ ಮತ್ತೊಂದು ದುರಂತ! ಮೀನಿನ ವಿಷಾನಿಲಕ್ಕೆ ಮತ್ತೆ ಇಬ್ಬರ ಸಾವು

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದಗಾ ಬಂದರಿನಲ್ಲಿ ಬೋಟ್‌ನ ಕೋಲ್ಡ್ ಸ್ಟೋರೇಜ್ ಸ್ವಚ್ಛಗೊಳಿಸುವಾಗ ಮೀನಿನ ವಿಷಾನಿಲ ಸೋರಿಕೆಯಿಂದ ಒರಿಸ್ಸಾದ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದಾರೆ. ತದಡಿ ಬಂದರಿನ ದುರಂತದ ಬೆನ್ನಲ್ಲೇ ಈ ಘಟನೆ ಮರುಕಳಿಸಿದ್ದು, ಕರಾವಳಿಯ ಮೀನುಗಾರಿಕಾ ವಲಯದಲ್ಲಿ ಆತಂಕ ಮೂಡಿಸಿದೆ. ಸುರಕ್ಷತಾ ನಿಯಮಗಳ ಪಾಲನೆಯ ಅಗತ್ಯತೆಯನ್ನು ಈ ಸರಣಿ ಅವಘಡಗಳು ಮುನ್ನೆಲೆಗೆ ತಂದಿವೆ.

ಗೋಕರ್ಣದಲ್ಲಿ ಮೂವರು ಮೀನುಗಾರರ ಮರಣದ ಬೆನ್ನಲ್ಲೇ ಮತ್ತೊಂದು ದುರಂತ! ಮೀನಿನ ವಿಷಾನಿಲಕ್ಕೆ ಮತ್ತೆ ಇಬ್ಬರ ಸಾವು
ಬೇಲೆಕೇರಿ ಮೂಲದ 'ಮೂಕಾಂಬಿಕಾ' ಬೋಟ್
ಅಶೋಕ್​ ಪೂಜಾರಿ
| Edited By: |

Updated on:Oct 31, 2026 | 10:14 AM

Share

ಮುಖ್ಯಾಂಶಗಳು

  • ಕಾರವಾರದ ಮುದಗಾ ಬಂದರಿನಲ್ಲಿ ಮೀನಿನ ವಿಷಾನಿಲಕ್ಕೆ ಇಬ್ಬರು ಮೀನುಗಾರರು ಸಾವು.
  • ಬೋಟ್‌ನ ಕೋಲ್ಡ್ ಸ್ಟೋರೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಒರಿಸ್ಸಾ ಮೂಲದ ಕಾರ್ಮಿಕರು ಬಲಿ.
  • ಮೂರು ದಿನಗಳ ಹಿಂದೆ ತದಡಿಯಲ್ಲಿ ಮೂವರು ಸಾವನ್ನಪ್ಪಿದ ಬಳಿಕ ಮತ್ತೆ ದುರಂತ.

ಉತ್ತರಕನ್ನಡ, ಅಕ್ಟೋಬರ್ 31: ಮೀನಿನ ವಿಷಾನಿಲಕ್ಕೆ ಉಸಿರುಗಟ್ಟಿ ಮೂವರು ಮೀನುಗಾರರು ಸಾವನ್ನಪ್ಪಿದ ನೆನಪು ಮಾಸುವ ಮುನ್ನವೇ ಮತ್ತೊಂದು ಭೀಕರ ದುರಂತ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಮೀನಿನ ವಿಷಾನಿಲ ಸೋರಿಕೆಯಿಂದ ಉಸಿರುಗಟ್ಟಿ ಒರಿಸ್ಸಾ ಮೂಲದ ಇಬ್ಬರು ಮೀನುಗಾರರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೋಟ್‌ನ ಶೇಖರಣಾ ಘಟಕವನ್ನು ಸ್ವಚ್ಛಗೊಳಿಸುವಾಗ ಈ ದುರ್ಘಟನೆ ಸಂಭವಿಸಿದ್ದು, ಮತ್ತೊಬ್ಬ ಮೀನುಗಾರ ಗಂಭೀರಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಒರಿಸ್ಸಾ ಮೂಲದ ಇಬ್ಬರ ಸಾವು, ಓರ್ವ ಅಸ್ವಸ್ಥ!

ಬೇಲೆಕೇರಿ ಮೂಲದ ‘ಮೂಕಾಂಬಿಕಾ’ ಹೆಸರಿನ ಬೋಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಚಮನ್ ಜಾತಿಯ ಮೀನುಗಳನ್ನು ಶಿಕಾರಿ ಮಾಡಿ ಬಂದರಿಗೆ ಬಂದಿದ್ದ ಮೀನುಗಾರರು, ಬೋಟ್‌ನ ಶೇಖರಣಾ ಘಟಕದಿಂದ (ಕೋಲ್ಡ್ ಸ್ಟೋರೇಜ್) ಮೀನುಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟಕದಿಂದ ಹೊರಹೊಮ್ಮಿದ ತೀವ್ರ ವಿಷಾನಿಲ ಹಾಗೂ ದುರ್ವಾಸನೆಗೆ ಸಿಲುಕಿ ಒರಿಸ್ಸಾ ಮೂಲದ ಪುರಂದರ ಬಿಸರಾ (21) ಮತ್ತು ಆಕಾಶ ನಾಯ್ಕ (24) ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇದೇ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿರುವ ಮತ್ತೊಬ್ಬ ಮೀನುಗಾರ ಲಾಲಿಂದರ ಧ್ರುವ (41) ಅವರನ್ನು ತಕ್ಷಣವೇ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಇಬ್ಬರು ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಚಮನ್ ಮೀನಿನ ವಿಷಾನಿಲಕ್ಕೆ ಬಲಿಯಾಗಿದ್ದ ಮೂವರು

ಕೇವಲ ಮೂರು ದಿನಗಳ ಹಿಂದಷ್ಟೇ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನಲ್ಲಿ ಚಮನ್ ಮೀನಿನ ವಿಷಾನಿಲ ದುರ್ವಾಸನೆಗೆ ಸಿಲುಕಿ ಮೂವರು ಮೀನುಗಾರರು ಪ್ರಾಣ ಕಳೆದುಕೊಂಡಿದ್ದರು. ಆ ಘಟನೆಯ ಬೆನ್ನಲ್ಲೇ ಈಗ ಮುದಗಾ ಬಂದರಿನಲ್ಲಿಯೂ ಅದೇ ರೀತಿಯ ದುರಂತ ಮರುಕಳಿಸಿರುವುದು ಜಿಲ್ಲೆಯ ಮೀನುಗಾರಿಕಾ ವಲಯದಲ್ಲಿ ತೀವ್ರ ಆತಂಕ ಹಾಗೂ ಭೀತಿಯನ್ನು ಹುಟ್ಟುಹಾಕಿದೆ. ಬೋಟ್‌ಗಳಲ್ಲಿ ಮೀನು ಸಂಗ್ರಹಣಾ ಘಟಕಗಳನ್ನು ಸ್ವಚ್ಛಗೊಳಿಸುವಾಗ ಕಡ್ಡಾಯವಾಗಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕಾದ ಅಗತ್ಯತೆಯನ್ನು ಈ ಸರಣಿ ದುರಂತಗಳು ಮತ್ತೊಮ್ಮೆ ಮುನ್ನೆಲೆಗೆ ತಂದಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Sat, 31 October 26

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ
ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್
ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು
ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?