ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿಗೆ ಹಿಂದೂ ಸಂಘಟನೆಗಳಿಂದ ಮನವಿ

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಆಯಿತು, ಶಿರಸಿ ಮಾರಿಕಾಂಬಾ ದೇವಸ್ಥಾನ ಆಯಿತು, ಈಗ ಮುರುಡೇಶ್ವರ ದೇವಸ್ಥಾನಕ್ಕೆ ಸಂಹಿತೆ ನೀತಿ ಜಾರಿಗೆ ಮನವಿ ಮಾಡಲಾಗುತ್ತಿದೆ.

ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿಗೆ ಹಿಂದೂ ಸಂಘಟನೆಗಳಿಂದ ಮನವಿ
ಮುರುಡೇಶ್ವರ ದೇವಸ್ಥಾನ
Follow us
TV9 Web
| Updated By: Rakesh Nayak Manchi

Updated on:Dec 13, 2022 | 2:37 PM

ಕಾರವಾರ: ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಮುರುಡೇಶ್ವರ ದೇವಸ್ಥಾನ (Murudeshwar Temple)ದಲ್ಲಿ ವಸ್ತ್ರ ಸಂಹಿತೆ (Dress Code) ನೀತಿ ಜಾರಿ ಮಾಡುವಂತೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿವೆ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನ (Gokarna Mahabaleshwar Temple) ನಂತರ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ (Sirsi Marikamba Temple) ವಸ್ತ್ರ ಸಂಹಿತಿ ನೀತಿ ಜಾರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನಲ್ಲಿರುವ ಮುರುಡೇಶ್ವರ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ನೀತಿ ಜಾರಿ ಮಾಡುವಂತೆ ದೇವಸ್ಥಾನ ಆಡಳಿತ ಮಂಡಳಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ಮುರುಡೇಶ್ವರ ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಸಂಪ್ರದಾಯಿಕ ಉಡುಪು ಕಡ್ಡಾಯ ಮಾಡಬೇಕು. ಪಾಶ್ಚಾತ್ಯ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಒಳ ಪ್ರವೇಶ ನೀಡಬಾರದು. ಭಾರತೀಯ ಸಂಪ್ರದಾಯಿಕ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕೊಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಗೋಕರ್ಣ ಮಹಾಬಲೇಶ್ವರನ ಮಂದಿರದಲ್ಲಿ ಸೀಮಿತವಾಗಿದ್ದ ವಸ್ತ್ರ ಸಂಹಿತೆ, ಸಾರ್ವಜನಿಕ ಸ್ಥಳಗಳಿಗೂ ಜಾರಿ: ತೀರ್ವ ಟೀಕೆ ಬಳಿಕ ತೆರವು

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪುರುಷರಿಗೆ ಪಂಜೆ, ಶಲ್ಯ ಕಡ್ಡಾಯ ಮಾಡಿದರೆ, ಮಹಿಳೆಯರಿಗೆ ಸೀರೆ ಕಡ್ಡಾಯ ಮಾಡಿತ್ತು. ಆದರೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ದೇವಸ್ಥಾನದ ರಥ ಬೀದಿಯಿಂದ ಪಶ್ಚಿಮ ದ್ವಾರದವರೆಗೆ ಅರೆಬರೆ (ತುಂಡು ಬಟ್ಟೆ) ಧರಿಸಿ ಸಾರ್ವಜನಿಕರು ಸಂಚರಿಸಲು ನಿಷೇಧಿಸಿದೆ ಎಂದು ನಾಮಫಲಕ ಹಾಕಿತ್ತು. ಇದಕ್ಕೆ ಟೀಕೆ ವ್ಯಕ್ತವಾಗುತ್ತಿದ್ದಂತೆ ರಸ್ತೆಯಲ್ಲಿ ವಸ್ತ್ರ ಸಂಹಿತೆ ನೀತಿಯನ್ನು ಆಡಳಿತ ಮಂಡಳಿ ಕೈ ಬಿಟ್ಟಿತ್ತು.

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯ ಬೆನ್ನಲ್ಲೆ ಶಿರಸಿಯ ಮಾರಿಕಾಂಬಾ ದೇವಸ್ಥಾನದಲ್ಲೂ ವಸ್ತ್ರ ಸಂಹಿತಿ ನೀತಿ ಜಾರಿಗೆ ಒತ್ತಾಯ ಕೇಳಿಬಂದಿದ್ದವು. ಉತ್ತರ ಕನ್ನಡ ಜಿಲ್ಲೆ ಶಿರಸಿ ಐತಿಹಾಸಿಕ ಮಾರಿಕಾಂಬಾ ದೇಶವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿಯಿಂದ ಮನವಿ ಮಾಡಲಾಗಿತ್ತು. ಹಿಂದೂ ಸಂಸ್ಕೃತಿ ಪ್ರಕಾರ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವುದಕ್ಕೆ ಮಾತ್ರ ಅವಕಾಶ ನೀಡುವಂತೆ ಒತ್ತಾಯಿಸಲಾಗಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Tue, 13 December 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್